12:31 PM Friday7 - November 2025
ಬ್ರೇಕಿಂಗ್ ನ್ಯೂಸ್
ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್…

ಇತ್ತೀಚಿನ ಸುದ್ದಿ

Mangaluru | ವ್ಯಕ್ತಿಯನ್ನು ಅಪಹರಿಸಿ 35 ಲಕ್ಷ ರೂ. ಮೌಲ್ಯದ ಚಿನ್ನದ ಗಟ್ಟಿ ದರೋಡೆ ಪ್ರಕರಣ; 5 ಮಂದಿ ಆರೋಪಿಗಳ ಬಂಧನ

19/08/2025, 22:11

ಸಾಂದರ್ಭಿಕ ಚಿತ್ರ
ಮಂಗಳೂರು(reporterkarnataka.com): ನಗರದ ಅತ್ತಾವರ ಸಮೀಪ ಆಟೋರಿಕ್ಷಾಕ್ಕೆ ಕಾಯುತ್ತಿದ್ದ ವ್ಯಕ್ತಿಯೊಬ್ಬರನ್ನು ಕಾರಿನಲ್ಲಿ ಅಪಹರಿಸಿ 35 ಲಕ್ಷ ರೂ. ಮೌಲ್ಯದ ಚಿನ್ನದ ಗಟ್ಟಿಯನ್ನು ದರೋಡೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿಂತೆ ಪೊಲೀಸರು 5 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಮಹಾರಾಷ್ಟ್ರ ಪುಣೆ ಸಮೀಪ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಐವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಆ. 13ರಂದು ಬೆಳಿಗ್ಗೆ 7-00 ಗಂಟೆಗೆ ಮಂಗಳೂರು ಸೆಂಟ್ರಲ್ ರೈಲ್ವೆ ನಿಲ್ದಾಣದ ಹತ್ತಿರದ ಕೈರಾಲಿ ಹೋಟೆಲ್ ಸಮೀಪ ಹರಿ ಭಾನುದಾಸ ಥೋರಟ್ರ ಅವರು ಆಟೋ ಕಾಯುತ್ತಿದ್ದಾಗ 6 ಮಂದಿ ಅಪರಿತರು ಇನ್ನೋವಾ ಕಾರಿನಲ್ಲಿ ಬಂದು ಥೋರಟ್ರನ್ನು ಸಂಪರ್ಕಿಸಿ ತಾವು ಕಸ್ಟಮ್ ಅಧಿಕಾರಿಗಳು, ನಿಮ್ಮ ವಿರುದ್ದ ಮಾಹಿತಿ ಇದೆ, ವಿಚಾರಣೆ ಮಾಡಬೇಕು ಎಂದು ತಿಳಿಸಿ, ತಮ್ಮೊಂದಿಗೆ ಬನ್ನಿ ಅಂತಾ ಗದರಿಸಿ, ಫಿರ್ಯಾದುದಾರರನ್ನು ಹಿಡಿದುಕೊಂಡು ಬಲವಂತವಾಗಿ ಬಿಳಿ ಬಣ್ಣದ ಇನ್ನೋವಾ ಕಾರಿನಲ್ಲಿ ಕೂರಿಸಿಕೊಂಡು ಅಪಹರಿಸಿದ್ದರು. ಕಾರು ಉಡುಪಿ ಹೈವೇ ಮಾರ್ಗವಾಗಿ ಉತ್ತರ ಕನ್ನಡ ಜಿಲ್ಲೆಯ ಕುಮುಟಾ ತಲುಪಿದಾಗ ಫಿರ್ಯಾದುದಾರರ ಬಳಿ ಇದ್ದ ಸುಮಾರು 35,00,000/- ರೂಪಾಯಿ ಬೆಲೆ ಬಾಳುವ 350 ಗ್ರಾಂ ತೂಕದ ಶುದ್ಧ ಬಂಗಾರದ ಗಟ್ಟಿಯನ್ನು ಹೆದರಿಸಿ ಕಿತ್ತುಕೊಂಡು ದರೋಡೆ ಮಾಡಿ, ಫಿರ್ಯಾದುದಾರರನ್ನು ಕುಮಟಾ ತಾಲೂಕಿನ ಶಿರಸಿ ಬಳಿ ಅಂತ್ರವಳ್ಳಿ ಎಂಬಲ್ಲಿ ಬಿಟ್ಟು ಪರಾರಿಯಾಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಈ ಬಗ್ಗೆ ಫಿರ್ಯಾದಿಯವರು ಕುಮುಟಾ ಠಾಣೆಯಲ್ಲಿ ದೂರು ನೀಡಿದಾಗ ಝೀರೋ ಎಫ್.ಐ.ಆರ್ ಅಡಿಯಲ್ಲಿ ಪ್ರಕರಣ ದಾಖಲಿಸಿ ಸರಹದ್ದಿನ ಆಧಾರದ ಮೇಲೆ ಮುಂದಿನ ಕ್ರಮದ ಬಗ್ಗೆ ಮಂ.ದಕ್ಷಿಣ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಿದ್ದಾರೆ. ಠಾಣೆಯಲ್ಲಿ ಅ.ಕ್ರ 171/2025 ಕಲಂ 310(2), 137(2), 204 ಬಿ.ಎನ್. ಎಸ್ ನಂತೆ ಪ್ರಕರಣ ದಾಖಲಾಗಿದೆ.
ಪ್ರಕರಣವನ್ನು ಬೇಧಿಸಿ ಆರೋಪಿಗಳನ್ನು ಪತ್ತೆ ಹಚ್ಚಲು ಪೊಲೀಸ್ ಆಯುಕ್ತರು, ಸಿಸಿಬಿ ಅಧಿಕಾರಿ ಮತ್ತು ಕೇಂದ್ರ ಉಪವಿಭಾಗದಿಂದ ತಂಡವನ್ನು ರಚಿಸಿದ್ದಾರೆ. ಪ್ರಕರಣದ ತನಿಖೆಯಲ್ಲಿ ಕಂಡ ಬಂದ ತಾಂತ್ರಿಕ ಸಾಕ್ಷ್ಯಾಧಾರಗಳಿಂದ ಮತ್ತು ಇತರೆ ಮಾಹಿತಿಗಳಿಂದ ಈವರೆಗೆ ಒಟ್ಟು 5 ಜನ ಆರೋಪಿಗಳನ್ನು ಆಗಸ್ಟ್ 18ರಂದು ಸಂಜೆ ಮಹಾರಾಷ್ಟ್ರದ ಪುಣೆ ಎಂಬಲ್ಲಿ ಪತ್ತೆ ಮಾಡಲಾಗಿದೆ. ಆರೋಪಿಗಳು ವಿಚಾರಣಾ ಕಾಲದಲ್ಲಿ ತಪ್ಪೋಪ್ಪಿಗೆ ಮಾಡಿದ್ದು ದೊಚ್ಚಿದ್ದ ಚಿನ್ನವನ್ನು ಮಾರಾಟ ಮಾಡಿದ ಬಗ್ಗೆ ಮಾಹಿತಿ ನೀಡುವುದಾಗಿ ತಿಳಿಸಿದ್ದು, ಮುಂದೆ ಅವರನ್ನು ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಿ ಪೊಲೀಸ್ ವಶಕ್ಕೆ ಪಡೆದು ವಿಚಾರಣೆ ಕೈಗೊಳ್ಳಲಾಗುವುದು. ದರೋಡೆ ಮಾಡಿದ್ದ ಚಿನ್ನ ಮತ್ತು ಕೃತ್ಯಕ್ಕೆ ಬಳಸಿದ ವಾಹನವನ್ನು ಸ್ವಾಧೀನ ಪಡಿಸಲಾಗುವುದು.

ಇತ್ತೀಚಿನ ಸುದ್ದಿ

ಜಾಹೀರಾತು