3:50 AM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಎಂಸಿಸಿ ಬ್ಯಾಂಕಿನ ವಾರ್ಷಿಕ ಸಾಮಾನ್ಯ ಸಭೆ: 9.51 ಕೋಟಿ ನಿವ್ವಳ ಲಾಭ, ಶೇ. 10 ಡಿವಿಡೆಂಡ್ ಘೋಷಣೆ

24/09/2025, 20:43

ಮಂಗಳೂರು(reporterkarnataka.com): 2024–25ನೇ ಹಣಕಾಸು ವರ್ಷದಲ್ಲಿ ಎಂಸಿಸಿ ಬ್ಯಾಂಕ್ ಎಲ್ಲಾ ಹಣಕಾಸು ನಿಯತಾಂಕಗಳಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದೆ ಮತ್ತು ತನ್ನ ಷೇರುದಾರರಿಗೆ 10% ಲಾಭಾಂಶವನ್ನು ಘೋಷಿಸಿದೆ. 2024–25ನೇ ಹಣಕಾಸು ವರ್ಷದಲ್ಲಿ ಬ್ಯಾಂಕ್ ₹9.51 ಕೋಟಿಗಳ ಅಭೂತಪೂರ್ವ ನಿವ್ವಳ ಲಾಭವನ್ನು ಗಳಿಸಿದೆ ಎಂದು ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಅನಿಲ್ ಲೋಬೊ ಹೇಳೀದರು.
ಅವರು 2025 ಸಪ್ಟಂಬರ್ 21ರಂದು ನಡೆದ ಬ್ಯಾಂಕಿನ 107ನೇ ವಾರ್ಷಿಕ ಸಾಮಾನ್ಯ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.
ಎಂಸಿಸಿ ಬ್ಯಾಂಕಿನ 107ನೇ ವಾರ್ಷಿಕ ಸಾಮಾನ್ಯ ಸಭೆಯು ಸೆಪ್ಟೆಂಬರ್ 21, 2025 ರ ಭಾನುವಾರ ಬೆಳಿಗ್ಗೆ 11:00 ಗಂಟೆಗೆ ಮಂಗಳೂರಿನ ಕೊಡಿಯಾಲ್‌ಬೈಲ್‌ನ ಸೇಂಟ್ ಅಲೋಶಿಯಸ್ ಪಿ.ಯು. ಕಾಲೇಜಿನ ಲೊಯೊಲಾ ಹಾಲ್‌ನಲ್ಲಿ ನಡೆಸಲಾಯಿತು.
ತಮ್ಮ ಭಾಷಣದಲ್ಲಿ, ಅಧ್ಯಕ್ಷರು ಬ್ಯಾಂಕಿನ ದಾಖಲೆಯ ಕಾರ್ಯಕ್ಷಮತೆಯನ್ನು ಸದಸ್ಯರ ಗಮನಕ್ಕೆ ತಂದರು. ₹9.51 ಕೋಟಿ ನಿವ್ವಳ ಲಾಭ, ₹705.40 ಕೋಟಿ ಠೇವಣಿಗಳು (10% ಹೆಚ್ಚಳ), ₹535.49 ಕೋಟಿ ಮುಂಗಡಗಳು (25.21% ಬೆಳವಣಿಗೆ), ₹830.30 ಕೋಟಿ ದುಡಿಯುವ ಬಂಡವಾಳ (10.03% ಹೆಚ್ಚಳ), ₹32.43 ಕೋಟಿ ಷೇರು ಬಂಡವಾಳ (14.07% ಬೆಳವಣಿಗೆ), ಎನ್‌ಪಿಎ 1.40%, ಖಔಂ 1.15%, ಮಾರ್ಚ್ 31, 2025 ರಂತೆ ಸಿಅರ್‌ಎಆರ್ 18.92% ಇದ್ದು ಇದು ರಿಸರ್ವ್ ಬ್ಯಾಂಕ್ ನಿಗದಿಪಡಿಸಿದ ಕನಿಷ್ಟ ಮಿತಿ 12ಕ್ಕಿಂತ ಹೆಚ್ಚಾಗಿರುತ್ತದೆ ಮತ್ತು ವ್ಯವಹಾರ ವಹಿವಾಟು ₹1300 ಕೋಟಿಯನ್ನು ದಾಟಿದೆ ಎಂದರು.
ಕಳೆದ 7 ವರ್ಷಗಳಲ್ಲಿ ಬ್ಯಾಂಕಿನ ಪ್ರಸ್ತುತ ಆಡಳಿತ ಮಂಡಳಿಯಡಿಯಲ್ಲಿನ ತ್ವರಿತ ಪ್ರಗತಿ ಮತ್ತು ಬೆಳವಣಿಗೆಯನ್ನು ತೋರಿಸುತ್ತಾ, ಬ್ಯಾಂಕಿನೊಂದಿಗೆ ದೃಢವಾಗಿ ನಿಂತು ಆಡಳಿತ ಮಂಡಳಿಯ ಕಾರ್ಯಯೋಜನೆಗಳನ್ನು ಬೆಂಬಲಿಸಿದ ಎಲ್ಲಾ ಸದಸ್ಯರು, ಗ್ರಾಹಕರು ಮತ್ತು ಸಿಬ್ಬಂದಿಗೆ ಅಧ್ಯಕ್ಷರು ಕೃತಜ್ಞತೆಯನ್ನು ವ್ಯಕ್ತಪಡಿಸಿದರು. ಪೂರ್ವಜರ ದೂರದೃಷ್ಟಿಯನ್ನು ನೆನಪಿಸಿಕೊಳ್ಳುತ್ತಾ, ಅವರ ಮಹಾನ್ ಪರಂಪರೆಯನ್ನು ಮುಂದಕ್ಕೆ ಕೊಂಡೊಯ್ಯುವ ಮತ್ತು ಆರ್ಥಿಕವಾಗಿ ಸದೃಢವಾಗಿರುವ ಮತ್ತು ಬಲಿಷ್ಟವಾಗಿರುವ ಬ್ಯಾಂಕ್ ಅನ್ನು ನಮ್ಮ ಮುಂದಿನ ಪೀಳಿಗೆಗೆ ಹಸ್ತಾಂತರಿಸುವ ಮಹತ್ವವನ್ನು ಹೇಳಿದರು. ಬ್ಯಾಂಕಿಗೆ ನಿಷ್ಟರಾಗಿರಲು ಮತ್ತು ಸಂಸ್ಥೆ ಅಥವಾ ಅದರ ಆಡಳಿತ ಮಂಡಳಿಯ ವಿರುದ್ಧ ವದಂತಿಗಳನ್ನು ಹರಡುವುದನ್ನು ನಿಲ್ಲಿಸಲು ಅವರು ಸದಸ್ಯರನ್ನು ಒತ್ತಾಯಿಸಿದರು. ಬ್ಯಾಂಕಿನ ಸೇವೆ ಮತ್ತು ಸೌಲಭ್ಯಗಳನ್ನು ಹೆಚ್ಚಿಸಲು ಸಹಾಯವಾಗುವಂತೆ ನೇರವಾಗಿ ಸಲಹೆಗಳನ್ನು ಬ್ಯಾಂಕಿನೊಂದಿಗೆ ಹಂಚಿಕೊಳ್ಳಲು ಸದಸ್ಯರಲ್ಲಿ ಕೇಳಿಕೊಂಡರು.
ಉಡುಪಿ ಜಿಲ್ಲೆಯ ಸಂತೆಕಟ್ಟೆಯಲ್ಲಿ ಅಕ್ಟೊಬರ್ 5ನೇ ತಾರೀಕಿನಂದು ಬ್ಯಾಂಕಿನ 21ನೇ ಶಾಖೆಯ ಉದ್ಘಾಟನೆಯನ್ನು ಸದಸ್ಯರಿಗೆ ತಿಳಿಸಿ ಎಲ್ಲಾ ಸದಸ್ಯರನ್ನು ಈ ಕಾರ್ಯಕ್ರಮಕ್ಕೆ ಹಾಜರಾಗಲು ಆಹ್ವಾನಿಸಿದರು. ಮುಂದಿನ ವಾರ್ಷಿಕ ಸಾಮಾನ್ಯ ಸಭೆಯ ಮೊದಲು 25 ಶಾಖೆಗಳು ಮತ್ತು 20 ಎಟಿಎಂಗಳನ್ನು ವಿಸ್ತರಿಸುವ ಬ್ಯಾಂಕಿನ ದೃಷ್ಟಿಕೋನವನ್ನು ಅವರು ಹಂಚಿಕೊAಡರು, ಈ ಕಾರ್ಯಯೋಜನೆಗೆ ನಿರಂತರ ಬೆಂಬಲವನ್ನು ಕೋರಿದರು. ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಭಾಗವಹಿಸಿದ್ದಕ್ಕಾಗಿ ಎಲ್ಲಾ ಸದಸ್ಯರಿಗೆ ವಂದಿಸಿದರು.
ದೀಪ ಬೆಳಗಿಸುವ ಕಾರ್ಯವನ್ನು ಸಹಕಾರ ರತ್ನ ಅನಿಲ್ ಲೋಬೊ (ಅಧ್ಯಕ್ಷರು), ಜೆರಾಲ್ಡ್ ಜೂಡ್ ಡಿ’ಸಿಲ್ವಾ (ಉಪಾಧ್ಯಕ್ಷರು), ಸಿ.ಜಿ. ಪಿಂಟೊ (ವೃತ್ತಿಪರ ನಿರ್ದೇಶಕರು) ಮತ್ತು ಆಹ್ವಾನಿತರಾದ ಶ್ರೀ ಪ್ರವೀಣ್ ಸಂದೀಪ್ ಲೋಬೊ (ವಕೀಲರು ಮತ್ತು ನೋಟರಿ), ಮೆಲ್ವಿನ್ ಅರಾನ್ಹಾ (ಉಪಾಧ್ಯಕ್ಷರು, ಪ್ಯಾರಿಷ್ ಕೌನ್ಸಿಲ್, ಶಿರ್ವಾ ಚರ್ಚ್)
ಅನಿತಾ ಫ್ರಾಂಕ್ (ಕಾರ್ಯದರ್ಶಿ, ಮಹಿಳಾ ಆಯೋಗ, ಮಂಗಳೂರು ಡಯಾಸಿಸ್), ಮೇಬಲ್ ಡಿಸೋಜಾ (ಮಾಜಿ ಅಧ್ಯಕ್ಷೆ ಕ್ಯಾಥೋಲಿಕ್ ಸಭಾ, ಕುಂದಾಪುರ) ಮತ್ತು ಜೆ.ವಿ. ಡಿಮೆಲ್ಲೊ (ಎಂಸಿಸಿ ಬ್ಯಾಂಕ್‌ನ ಮಾಜಿ ನಿರ್ದೇಶಕರು) ನಿರ್ವಹಿಸಿದರು; ನಂತರ ನಮ್ಮ ಬ್ಯಾಂಕಿನ ಸ್ಥಾಪಕ ಪಿಎಫ್‌ಎಕ್ಸ್ ಸಲ್ಡಾನ್ಹಾ ಅವರಿಗೆ ಪುಷ್ಪ ನಮನ ಸಲ್ಲಿಸಲಾಯಿತು. ಕಳೆದ ವರ್ಷದಲ್ಲಿ ನಿಧನರಾದ ಸದಸ್ಯರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಉಪಾಧ್ಯಕ್ಷ ಜೆರಾಲ್ಡ್ ಜೂಡ್ ಡಿ’ಸಿಲ್ವಾ ಅವರು 106ನೇ ವಾರ್ಷಿಕ ಮಹಾಸಭೆಯ ನಡವಳಿಗಳನ್ನು ಓದಿದರು. 2024–25ರ ಲೆಕ್ಕಪರಿಶೋಧಿತ ಹಣಕಾಸು ತ:ಖ್ತೆ, ಲೆಕ್ಕಪರಿಶೋಧನಾ ವರದಿ ಮತ್ತು ಅನುಸರಣೆ, 2025-26ನೇ ವರ್ಷದ ಕಾರ್ಯ ಚಟುವಟಿಕೆಗಳು ಮತ್ತು 2025–26ರ ಬಜೆಟ್ ಮತ್ತು ಉಪವಿಧಿಗಳಿಗೆ ಪ್ರಸ್ತಾವಿತ ತಿದ್ದುಪಡಿಗಳನ್ನು ವಾರ್ಷಿಕ ಮಹಾಸಭೆಯಲ್ಲಿ ಮಂಡಿಸಿ ಅನುಮೋದನೆ ಪಡೆಯಲಾಯಿತು.
ಅಧ್ಯಕ್ಷರು ಸದಸ್ಯರ ಪ್ರಶ್ನೆಗಳಿಗೆ ಉತ್ತರಿಸಿ, ಅವರ ಸಲಹೆಗಳನ್ನು ಅನುಷ್ಟ್ಠಾನಕ್ಕೆ ತರಲು ಪ್ರಯತ್ನಿಸಲಾಗುವುದು ಎಂದು ಭರವಸೆ ನೀಡಿದರು.


ಈ ಸಂದರ್ಭದಲ್ಲಿ, ಕರ್ನಾಟಕ ಸರ್ಕಾರವು ನೋಟರಿ ಪಬ್ಲಿಕ್ ಆಗಿ ನೇಮಕಗೊಂಡಿದ್ದಕ್ಕಾಗಿ ಮೂಡುಬಿದ್ರಿಯ ಶ್ರೀ ಪ್ರವೀಣ್ ಸಂದೀಪ್ ಲೋಬೊ ವಕೀಲರನ್ನು ಸನ್ಮಾನಿಸಲಾಯಿತು.
ಅಧ್ಯಕ್ಷ ಸಹಕಾರ ರತ್ನ ಅನಿಲ್ ಲೋಬೊ ಅವರನ್ನು 2025ರ ಪ್ರತಿಷ್ಠಿತ ಅಖಿಲ ಭಾರತ ಕ್ಯಾಥೋಲಿಕ್ ಸಮುದಾಯ ಪ್ರಶಸ್ತಿಯನ್ನು ಸ್ವೀಕರಿಸಿದ್ದಕ್ಕಾಗಿ ನಿರ್ದೇಶಕರ ಮಂಡಳಿ, ಸಿಬ್ಬಂದಿ ಮತ್ತು ಸದಸ್ಯರ ಪರವಾಗಿ ಜನರಲ್ ಮ್ಯಾನೇಜರ್ ಸುನಿಲ್ ಮೆನೆಜಸ್ ಅವರು ಹೂಗುಚ್ಛ ನೀಡಿ ಸನ್ಮಾನಿಸಿದರು.
ನಿರ್ದೇಶಕರಾದ ಅಂಡ್ರೂ÷್ಯ ಡಿಸೋಜ, ಜೋಸೆಫ್ ಎಮ್. ಅನಿಲ್ ಪತ್ರಾವೊ, ಡಾ| ಜೆರಾಲ್ಡ್ ಪಿಂಟೊ, ಡೇವಿಡ್ ಡಿಸೋಜ, ಎಲ್‌ರೊಯ್ ಕಿರಣ್ ಕ್ರಾಸ್ಟೊ, ರೋಶನ್ ಡಿ’ಸೋಜ, ಹೆರಾಲ್ಡ್ ಮೊಂತೇರೊ, ಜೆ. ಪಿ. ರೊಡ್ರಿಗಸ್, ವಿನ್ಸೆಂಟ್ ಲಸ್ರಾದೊ, ಮೆಲ್ವಿನ್ ವಾಸ್, ಐರಿನ್ ರೆಬೆಲ್ಲೊ, ಡಾ| ಫ್ರೀಡಾ ಡಿಸೋಜ, ವೃತ್ತಿಪರ ನಿರ್ದೇಶಕರಾದ ಸಿ.ಜಿ. ಪಿಂಟೊ, ಸುಶಾಂತ್ ಸಲ್ಡಾನ್ಹಾ, ಮಹಾಪ್ರಬಂಧಕ ಸುನಿಲ್ ಮಿನೇಜಸ್, ಉಪ ಮಹಾಪ್ರಬಂಧಕ ರಾಜ್ ಎಫ್. ಮಿನೇಜಸ್ ಉಪಸ್ಥಿತರಿದ್ದರು.
ಮಹಾಪ್ರಬಂಧಕ ಸುನಿಲ್ ಮಿನೇಜಸ್ ಸ್ವಾಗತಿಸಿ, ಬ್ರಹ್ಮಾವರ ಶಾಖಾ ವ್ಯವಸ್ಥಾಪಕ ಒವಿನ್ ರೆಬೆಲ್ಲೊ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು