11:17 AM Thursday6 - November 2025
ಬ್ರೇಕಿಂಗ್ ನ್ಯೂಸ್
ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ

ಇತ್ತೀಚಿನ ಸುದ್ದಿ

ತುಂಬೆ ಫಾದರ್ ಮುಲ್ಲರ್ ನರ್ಸಿಂಗ್ ಕಾಲೇಜು: ಆಪರೇಶನ್ ಥಿಯೇಟರ್ ಟೆಕ್ನೋಲಜಿ, ಮೆಡಿಕಲ್ ಇಮೇಜಿಂಗ್ ಟೆಕ್ನೋಲಜಿ ಕೋರ್ಸ್ ಗಳ ಉದ್ಘಾಟನೆ

03/10/2025, 20:59

ಬಂಟ್ವಾಳ(reporterkarnataka.com): ತುಂಬೆ ಫಾದರ್ ಮುಲ್ಲರ್ ನರ್ಸಿಂಗ್ ಕಾಲೇಜು ಹಾಗೂ ಫಾದರ್ ಮುಲ್ಲರ್ ಅಲೈಡ್ ಹೆಲ್ತ್ ಸೈನ್ಸ್ ಕಾಲೇಜಿನ ಬಿ.ಎಸ್ಸಿ ನರ್ಸಿಂಗ್ ೪ನೇ ಬ್ಯಾಚ್, ಬಿ.ಎಸ್ಸಿ ಅನಸ್ತೇಶಿಯಾ ಹಾಗೂ ಆಪರೇಶನ್ ಥಿಯೇಟರ್ ಟೆಕ್ನೋಲಜಿ, ಮೆಡಿಕಲ್ ಇಮೇಜಿಂಗ್ ಟೆಕ್ನೋಲಜಿ ಕೋರ್ಸ್ ಗಳ ಉದ್ಘಾಟನಾ ಸಮಾರಂಭ ಶುಕ್ರವಾರ ಕಾಲೇಜಿನ ಪ್ಲೋರೆನ್ಸ್ ನೈಂಟಿಗೆಲ್ ಸಭಾಂಗಣದಲ್ಲಿ ನಡೆಯಿತು.
ಮುಖ್ಯಅತಿಥಿ ಮಂಗಳೂರು ಫಾದರ್ ಮುಲ್ಲರ್ ಚಾರಿಟೇಬಲ್ ಇನ್‌ಸ್ಟಿಟ್ಯೂಶನ್ಸ್ ನ ಮಾಜಿ ನಿರ್ದೇಶಕ ರೆ|ಫಾ| ರಿಚ್ಚಾರ್ಡ್ ಅಲೋಶಿಯಸ್ ಕುವೆಲ್ಲೊ ಮಾತನಾಡಿ, ಆರೋಗ್ಯ ಕ್ಷೇತ್ರದಲ್ಲಿ ಸೇವೆ ಮಾಡುವುದು ದೇವರು ಕೊಟ್ಟ ಅವಕಾಶವಾಗಿದ್ದು, ದಾದಿಯರ ಕರ್ತವ್ಯ ನಿರ್ವಹಣೆಗೆ ಸಂಬಂಧ ಹಾಗೂ ಸಂವಹನ ಅತಿ ಅಗತ್ಯವಾಗಿದೆ. ರೋಗಿಗಳಿಗೆ ಪ್ರೀತಿಯುತ ಆರೈಕೆಯ ಮಾತುಗಳು ಅವರ ಆರೋಗ್ಯದಲ್ಲಿ ಸಾಕಷ್ಟು ಸುಧಾರಣೆ ಕಾಣುತ್ತದೆ. ಹೀಗಾಗಿ ದಾದಿಯರು ಯಾವತ್ತೂ ಕೂಡ ತಮ್ಮ ವೈಯಕ್ತಿಕ ಸಮಸ್ಯೆಗಳನ್ನು ಆಸ್ಪತ್ರೆಗೆ ತಾರದೆ ರೋಗಿಗಳ ಜತೆ ಸದಾ ನಗುವಿನೊಂದಿಗೆ ಸೇವೆ ನೀಡಿದಾಗ ನೀವು ಉತ್ತಮ ದಾದಿಯರಾಗುವುದಕ್ಕೆ ಸಾಧ್ಯವಿದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಮಂಗಳೂರು ಫಾದರ್ ಮುಲ್ಲರ್ ಚಾರಿಟೇಬಲ್ ಇನ್‌ಸ್ಟಿಟ್ಯೂಶನ್ಸ್ ನ ನಿರ್ದೇಶಕ ರೆ|ಫಾ| ಪಾವೋಸ್ತಿನ್ ಲುಕಾಸ್ ಲೋಬೊ ಮಾತನಾಡಿ, ದಾದಿಯ ಕರ್ತವ್ಯ ನಿರ್ವಹಣೆಯ ಸಂದರ್ಭ ಜ್ಞಾನ, ಕೌಶಲ್ಯ ಹಾಗೂ ಮೌಲ್ಯ ಎಂಬ ಮೂರು ಅಂಶಗಳ ಕುರಿತು ಅರಿತುಕೊಳ್ಳುವುದು ಅಗತ್ಯವಾಗಿದ್ದು, ನಿರಂತರ ಕೆಲಸ ಮಾಡಿದಾಗ ನಮ್ಮ ಕೌಶಲ್ಯಗಳನ್ನು ವೃದ್ಧಿಸಿಕೊಳ್ಳುವುದಕ್ಕೆ ಸಾಧ್ಯವಿದೆ. ಪ್ರತಿಯೊಬ್ಬರು ಕೂಡ ತಮ್ಮ ಜವಾಬ್ದಾರಿಯನ್ನು ಅರಿತುಕೊಂಡು ನಮ್ಮ ಕೆಲಸವನ್ನು ಸರಿಯಾದ ಸಮಯಕ್ಕೆ ನಿರ್ವಹಿಸುವ ಜತೆಗೆ ಸಹಾನುಭೂತಿಯನ್ನೂ ಮೈಗೂಡಿಸಿಕೊಳ್ಳಬೇಕಾಗುತ್ತದೆ. ಅಧ್ಯಯನದಿಂದ ತಪ್ಪಿಸಿಕೊಳ್ಳದೆ ಕರ್ತವ್ಯವನ್ನು ಸೇವಾ ಮನೋಭಾವದಿಂದ ನೋಡಿದಾಗ ಸಮರ್ಥವಾಗಿ ಕೆಲಸ ನಿರ್ವಹಿಸಬಹುದಾಗಿದೆ. ತುಂಬೆಯ ಈ ನರ್ಸಿಂಗ್ ಕಾಲೇಜು ಫಾ| ರಿಚ್ಚಾರ್ಡ್ ಕುವೆಲ್ಲೊ ಅವರು ನಿರ್ದೇಶಕರಾಗಿದ್ದ ವೇಳೆ ಆರಂಭಗೊಂಡಿದೆ ಎನ್ನವುದು ಹೆಮ್ಮೆಯ ವಿಚಾರ ಎಂದರು.
ತುಂಬೆ ಫಾದರ್ ಮುಲ್ಲರ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ| ಕಿರಣ್ ಶೆಟ್ಟಿ, ನರ್ಸಿಂಗ್ ಕಾಲೇಜು ಉಪಪ್ರಾಂಶುಪಾಲೆ ಪ್ರೊ| ಜಾನೆಟ್ ಸಿಕ್ವೇರಾ ವೇದಿಕೆಯಲ್ಲಿದ್ದರು. ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿನ ಆಡಳಿತಾಧಿಕಾರಿ ರೆ|ಫಾ| ಡಾ| ಮೈಕಲ್ ಸಾಂತ್ ಮಯೂರ್ ಉಪಸ್ಥಿತರಿದ್ದರು. ತುಂಬೆ ಫಾದರ್ ಮುಲ್ಲರ್ ಆಸ್ಪತ್ರೆಯ ಆಡಳಿತಾಧಿಕಾರಿ ರೆ|ಫಾ| ಸಿಲ್ವೆಸ್ಟರ್ ವಿನ್ಸೆಂಟ್ ಲೋಬೊ ಸ್ವಾಗತಿಸಿದರು. ತುಂಬೆ ಫಾದರ್ ಮುಲ್ಲರ್ ಅಲೈಡ್ ಹೆಲ್ತ್ ಸೈನ್ಸ್ ಕಾಲೇಜಿನ ಪ್ರಾಂಶುಪಾಲ ಡಾ| ಶಿವಶಂಕರ್ ಎ.ಆರ್. ವಂದಿಸಿದರು. ನಿಶಾ ಸಿಲ್ವಿಯಾ ಲೋಬೊ ಕಾರ್ಯಕ್ರಮ ನಿರ್ವಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು