4:36 PM Thursday6 - November 2025
ಬ್ರೇಕಿಂಗ್ ನ್ಯೂಸ್
ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ

ಇತ್ತೀಚಿನ ಸುದ್ದಿ

ಭತ್ತ ಸಂಶೋಧನೆ: ಫಿಲಿಪೈನ್ಸ್ ನೊಂದಿಗೆ ಮಹತ್ವದ ಒಡಂಬಡಿಕೆಗೆ ಸಚಿವ ಚಲುವರಾಯಸ್ವಾಮಿ ಸಹಿ

16/10/2025, 10:12

ಮನಿಲಾ(ಫಿಲಿಪೈನ್ಸ್):(reporterkarnataka.com):
ರಾಜ್ಯದಲ್ಲಿ ಭತ್ತದ ತಳಿಗಳ ಆಧುನಿಕ ಸಂಶೋಧನೆ ಮತ್ತು ಸಂವರ್ಧನೆಗೆ ನೆರವಾಗುವ ಕುರಿತು ಫಿಲಿಫೈನ್ಸ್ ನ ಅಂತಾರಾಷ್ಟ್ರೀಯ ಭತ್ತ ಸಂಶೋಧನಾ ಕೇಂದ್ರದೊಂದಿಗೆ ಮಂಡ್ಯ ಕೃಷಿ ವಿಶ್ವವಿದ್ಯಾಲಯ ಮಹತ್ವದ ಒಡಂಬಡಿಕೆ ಮಾಡಿಕೊಂಡಿದೆ.
ಫಿಲಿಪೈನ್ಸ್ ನ ಮನಿಲಾದಲ್ಲಿರುವ ಅಂತಾರಾಷ್ಟ್ರೀಯ ಭತ್ತ ಸಂಶೋಧನಾ ಕೇಂದ್ರಕ್ಕೆ ಉನ್ನತ ಮಟ್ಟದ ನಿಯೋಗದೊಂದಿಗೆ ತೆರಳಿರುವ ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಅವರು ಒಪ್ಪಂದಕ್ಕೆ ಸಹಿ ಮಾಡಿದರು.


ರಾಜ್ಯದಲ್ಲಿ ನೆರೆ ಹಾವಳಿ ,ಬರ ಪರಿಸ್ಥಿತಿ ಗಳು ಕರಾವಳಿ,‌ಮಲೆನಾಡು ಬಯಲು ಸೀಮೆ ವಿಭಿನ್ನ ಭೌಗೋಳಿಕ ಪರಿಸರಕ್ಕೆ ಹೊಂದಾಣಿಕೆಯಾಗುವ ವಿವಿಧ ಜೈವಿಕ, ಅಜೈವಿಕ ಒತ್ತಡಗಳಿಗೆ ನಿರೋಧಕತೆ ಜೊತೆಗೆ ಪೌಷ್ಠಿಕಾಂಶ ಉಳ್ಳ, ಅಧಿಕ ಇಳುವರಿ ತರುವ ಬೇಸಾಯ ಕ್ರಮಗಳು ಮತ್ತು ಭತ್ತದ ತಳಿಗಳ ಸಂಶೋಧನೆಗೆ ಈ ಒಡಂಬಡಿಕೆ ನೆರವಾಗಲಿದೆ.
ಇದೇ ಸಂದರ್ಭದಲ್ಲಿ
ಕರ್ನಾಟಕದಲ್ಲಿಯೂ ಅಂತರಾಷ್ಟ್ರೀಯ ಮಟ್ಟದ ಭತ್ತ ಸಂಶೋಧನಾ ಕೇಂದ್ರ ಸ್ಥಾಪನೆ ಬಗ್ಗೆಯೂ ಸಚಿವರು ಮಹತ್ವದ ಚರ್ಚೆ ನಡೆಸಿದರು.
ಅಲ್ಲದೆ ಭತ್ತದ ಮಹತ್ವ , ಉಭಯ ದೇಶಗಳು ಅನುಸರಿಸುತ್ತಿರುವ ಬೇಸಾಯ ಕ್ರಮಗಳು,ಮೌಲ್ಯ ವರ್ಧನೆಗೆ ಅನುಸರಿಸಬೇಕಾದ ಮಾರ್ಗೋಪಾಯಗಳ ಬಗ್ಗೆ ಮಾಹಿತಿ ಹಾಗೂ ಅನುಭವಗಳನ್ನು ವಿನಿಮಯ ಮಾಡಿಕೊಳ್ಳಲಾಯಿತು.ಭತ್ತದ ತಳಿಗಖ ಸಂರಕ್ಷಣೆ‌,ಸಂಶೋಧನೆಗೆ ಕರ್ನಾಟಕ ಸರ್ಕಾರ ತೋರುತ್ತಿರುವ ಕಾಳಜಿ ಮತ್ತು ರೈತ ಪರ‌ ಯೋಜನೆಗಳ ಬಗ್ಗೆ ಫಿಲಿಪೈನ್ಸ್ ನ ಅಂತರಾಷ್ಟ್ರೀಯ ಭತ್ತ ಸಂಶೋಧನಾ ಕೇಂದ್ರದ ಅಧಿಕಾರಿಗಳು ಮೆಚ್ಚುಗೆ ಸೂಚಿಸಿ ಇದಕ್ಕೆ ಕಾರಣರಾಗಿರುವ ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಅವರಿಗೆ ಅಭಿನಂದನೆ ಸಲ್ಲಿಸಿದರು.
1945 ರಿಂದಲೂ ಭಾರತ ಮತ್ತು ಫಿಲಿಪೈನ್ಸ್ ನಡುವೆ ಇರುವ ಬಾಂಧವ್ಯ ,ಕೃಷಿ ಕ್ಷೇತ್ರದ ಸಹಕಾರಗಳನ್ನು ಸಹ ಸ್ಮರಿಸಿ ,ಶ್ಲಾಘಿಸಲಾಯಿತು.
ಅಂತಾರಾಷ್ಟ್ರೀಯ ಭತ್ತದ ಸಂಶೋಧನಾ ಕೇಂದ್ರದ ಉಪ ಮಹಾ ನಿರ್ದೇಶಕರಾದ ಜುನೆಲ್ ಸಯಾನೋ ,ಡಾ ಸಂಕಲ್ಪ್ ಭೋಸ್ಲೆ,
ಮಂಡ್ಯ ಕೃಷಿ ವಿ.ವಿ ವಿಶೇಷಾಧಿಕಾರಿ ಡಾ ಕೆ.ಎಂ ಹರಿಣಿ‌ಕುಮಾರ್, ಡಾ ವೇಣು ಪ್ರಸಾದ್,ಡಾ ಮಲ್ಲಿಕಾರ್ಜುನ ಸ್ವಾಮಿ,ಕೃಷಿ ಸಚಿವರ ವಿಶೇಷ ಕರ್ತವ್ಯಾಧಿಕಾರಿ ಡಾ ಎ.ಬಿ .ಪಾಟೀಲ್ ವಿ.ಸಿ ಫಾರಂ ನ ಭತ್ತದ ತಳಿ ವಿಜ್ಞಾನಿ ಡಾ ದೀಪಕ್,ರಾಯಚೂರು ಕೃಷಿ ವಿಶ್ವವಿದ್ಯಾಲಯದ ಕೃಷಿ ವಿಜ್ಞಾನಿ ಡಾ ಸುಜಯ್ ಮತ್ತಿತರರು ಉಪಸ್ಥಿತರಿದ್ದರು.
ಇದೇ ವೇಳೆ ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಅವರು ಅಧಿಕಾರಿಗಳ ತಂಡದೊಂದಿಗೆ ಅಂತಾರಾಷ್ಟ್ರೀಯ ಭತ್ತದ ಸಂಶೋಧನಾ ಕೇಂದ್ರದ ಜೀನ್ ಬ್ಯಾಂಕ್ ಒಳಗೊಂಡಂತೆ ವಿವಿಧ ಪ್ರಯೋಗಾಲಯಗಳು ಮತ್ತು ತಾಕುಗಳಿಗೆ ಭೇಟಿ ನೀಡಿ‌ಮಾಹಿತಿ ಪಡೆದುಕೊಂಡರು.

ಇತ್ತೀಚಿನ ಸುದ್ದಿ

ಜಾಹೀರಾತು