12:10 PM Thursday6 - November 2025
ಬ್ರೇಕಿಂಗ್ ನ್ಯೂಸ್
ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ

ಇತ್ತೀಚಿನ ಸುದ್ದಿ

ದಕ್ಷಿಣ ಕನ್ನಡ ಜಿಲ್ಲೆಯ ರಾಜ್ಯೋತ್ಸವ ಪ್ರಶಸ್ತಿಗೆ 70 ಸಾಧಕರು ಮತ್ತು 24 ಸಂಸ್ಥೆಗಳು ಆಯ್ಕೆ ; ನೃತ್ಯ ಸಾಧಕಿ ರೆಮೋನಾ, ಶ್ವಾನ ಪ್ರೇಮಿ ರಜನಿ ಶೆಟ್ಟಿ, ಪತ್ರಿಕಾ ಛಾಯಾಗ್ರಾಹಕ ಸತೀಶ್ ಇರಾ ಸೇರಿದಂತೆ ವಿವಿಧ ಕ್ಷೇತ್ರಗಳ ಸಾಧಕರಿಗೆ ಗೌರವ

31/10/2025, 23:48

ಮಂಗಳೂರು(reporterkarnataka.com):2025ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಪಟ್ಟಿ ಪ್ರಕಟವಾಗಿದ್ದು, ವಿವಿಧ ಕ್ಷೇತ್ರಗಳಲ್ಲಿ ಮೆರೆದ ಸಾಧನೆಗಾಗಿ 70 ಮಂದಿ ಪ್ರತಿಭಾವಂತರನ್ನು ಹಾಗೂ 24 ಸಂಘ–ಸಂಸ್ಥೆಗಳನ್ನು ಆಯ್ಕೆ ಮಾಡಲಾಗಿದೆ.

ರಾಜ್ಯೋತ್ಸವದ ಅಂಗವಾಗಿ ಪ್ರತಿ ವರ್ಷ ಜಿಲ್ಲೆಯ ವಿವಿಧ ಕ್ಷೇತ್ರಗಳಲ್ಲಿ ಗಮನಾರ್ಹ ಸೇವೆ ಸಲ್ಲಿಸಿದ ವ್ಯಕ್ತಿಗಳಿಗೆ ಈ ಗೌರವ ನೀಡಲಾಗುತ್ತದೆ. ಈ ಬಾರಿ ಆಯ್ಕೆಯಾದವರ ಪಟ್ಟಿ ವೈವಿಧ್ಯತೆಯಿಂದ ಕೂಡಿದ್ದು, ಕಲೆಯಿಂದ ಕ್ರೀಡೆವರೆಗೆ ಅನೇಕ ಕ್ಷೇತ್ರಗಳ ಸಾಧಕರಿಗೆ ಮಾನ್ಯತೆ ದೊರೆತಿದೆ.

ನೃತ್ಯ ಕ್ಷೇತ್ರದಲ್ಲಿ ರೆಮೋನಾ ಇವೆಟ್ ಪಿರೇರಾ, ಶ್ವಾನ ಪ್ರೇಮಿ ರಜನಿ ಶೆಟ್ಟಿ, ಪತ್ರಿಕಾ ಛಾಯಾಗ್ರಾಹಕರು ಸತೀಶ್ ಇರಾ, ಎ.ಕೆ. ಕುಕ್ಕಿಲ ಹಾಗೂ ರಾಜೇಶ್ ದಡ್ಡಂಗಡಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಆಯ್ಕೆಯಾದರೆ, ಉದ್ಯಮ ಕ್ಷೇತ್ರದಲ್ಲಿ ಎಡಕ್ಕಾನ ಮಹಾಬಲೇಶ್ವರ ಭಟ್ ಅವರಿಗೆ ಗೌರವ ದೊರೆತಿದೆ.

ಸಮಾಜ ಸೇವೆ ವಿಭಾಗದಲ್ಲಿ ಅನಿವಾಸಿ ಭಾರತೀಯ ಪ್ರವೀಣ್ ಶೆಟ್ಟಿ ಪಿಲಾರು, ಮೊಹಮ್ಮದ್ ಮುಕ್ಕಚ್ಚೇರಿ ಹಾಗೂ ಇಸ್ಮಾಯಿಲ್ ಶಾಫಿ ಬಬ್ಬುಕಟ್ಟೆ ಅವರ ಸೇವೆಯನ್ನು ಗುರುತಿಸಲಾಗಿದೆ. ರಂಗಭೂಮಿ ಕ್ಷೇತ್ರದಲ್ಲಿ ಸುಂದರ ರೈ ಮಂದಾರ, ದೈವಾರಾಧನೆ ವಿಭಾಗದಲ್ಲಿ ಗಣೇಶ್ ಎಸ್., ಗೋಪಾಲ ಕೋಟ್ಯಾನ್ ಹಾಗೂ ಸುರೇಂದ್ರ ಪರವ ಅವರು ರಾಜ್ಯೋತ್ಸವ ಪುರಸ್ಕೃತರಾಗಿದ್ದಾರೆ.


ಸಂಗೀತ ವಿಭಾಗದಲ್ಲಿ ಸ್ಯಾಕ್ಸೋಫೋನ್ ವಾದಕ ಬಾಬು ಸಪಲ್ಯ ಹಾಗೂ ನಾಟಿವೈದ್ಯ ವಿಭಾಗದಲ್ಲಿ ಸೋಮನಾಥ ಪಂಡಿತ್ ಅವರನ್ನು ಆಯ್ಕೆ ಮಾಡಲಾಗಿದೆ. ಕಂಬಳ ಕ್ಷೇತ್ರದಲ್ಲಿ ಸತೀಶ್ ದೇವಾಡಿಗ ಅಳದಂಗಡಿ, ಕೃಷಿ ಆಧಾರಿತ ಉದ್ಯಮದಲ್ಲಿ ಅವಿನಾಶ್ ರಾವ್, ಧಾರ್ಮಿಕ ಸೇವೆಯಲ್ಲಿ ಕುಕ್ಕಾಡಿ ಪ್ರೀತಂ ತಂತ್ರಿ, ಕ್ರೀಡಾ ಕ್ಷೇತ್ರದಲ್ಲಿ ಅಶೋಕ್ ಪೂವಯ್ಯ, ರಾಮಣ್ಣ ಗೌಡ ಪಡೀಲ್, ಬಾಲಕೃಷ್ಣ ರೈ, ಜೋಯ್ದಿನ್ ಲೋಬೋ ಮುಂತಾದ ಸಾಧಕರು ಸ್ಥಾನ ಪಡೆದಿದ್ದಾರೆ.

ಜಿಲ್ಲಾ ಮಟ್ಟದ ಪ್ರಶಸ್ತಿಗೆ 24 ಸಂಘ–ಸಂಸ್ಥೆಗಳನ್ನೂ ಆಯ್ಕೆ ಮಾಡಲಾಗಿದ್ದು, ಅವುಗಳಲ್ಲಿ ಉಳ್ಳಾಲ ಮತ್ತು ಮಂಗಳೂರು ನಗರ ಭಾಗದ ಸಂಸ್ಥೆಗಳ ಸಂಖ್ಯೆ ಹೆಚ್ಚಿನದು.


ರಾಜ್ಯೋತ್ಸವ ದಿನದಂದು ಈ ಸಾಧಕರಿಗೆ ಜಿಲ್ಲಾ ಆಡಳಿತ ವತಿಯಿಂದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸನ್ಮಾನಿಸಲಿರುವುದಾಗಿ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು