ಇತ್ತೀಚಿನ ಸುದ್ದಿ
ಈಜು ಸ್ಪರ್ಧೆ: ಪುತ್ತೂರಿನ ಅಂಬಿಕಾ ಪಿಯು ಕಾಲೇಜಿನ ಪ್ರತೀಕ್ಷಾ ಶೆಣೈ ರಾಷ್ಟ್ರಮಟ್ಟಕ್ಕೆ ಆಯ್ಕೆ
03/11/2025, 20:28
ಪುತ್ತೂರು(reporterkarnataka.com): ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆಯ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ದ್ವಿತೀಯ ಪಿಯುಸಿ ವಾಣಿಜ್ಯ ಶಾಸ್ತ್ರ ವಿಭಾಗದ ವಿದ್ಯಾರ್ಥಿನಿ ಪ್ರತೀಕ್ಷಾ ಶೆಣೈ ಅವರು ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಹಲವು ಬಹುಮಾನಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಹಾಗೂ ಬೆಂಗಳೂರಿನ ನ್ಯಾಶನಲ್ ಕಾಲೇಜಿನ ಸಹಯೋಗದೊಂದಿಗೆ ಬೆಂಗಳೂರಿನ ಬಸವನಗುಡಿಯಲ್ಲಿ ನಡೆದ ಈ ಸ್ಪರ್ಧೆಯ ೫೦ ಮೀಟರ್ ಬ್ರೆಸ್ಟ್ ಸ್ಟ್ರೋಕ್ ಹಾಗೂ ೨೦೦ ಮೀಟರ್ ಬ್ರೆಸ್ಟ್ ಸ್ಟ್ರೋಕ್ ನಲ್ಲಿ ಬೆಳ್ಳಿ, ೧೦೦ ಮೀಟರ್ ಬ್ರೆಸ್ಟ್ ಸ್ಟ್ರೋಕ್ ಮತ್ತು ೧೦೦ ರಿಲೇಯಲ್ಲಿ ಕಂಚಿನ ಪದಕ ಪಡೆದು ಪ್ರತೀಕ್ಷಾ ಶೆಣೈ ರಾಷ್ಟ್ರ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಇವರು ಪುತ್ತೂರಿನ ಎಂ. ನರಸಿಂಹ ಶೆಣೈ ಮತ್ತು ಶ್ರೀಲಕ್ಷ್ಮೀ ಶೆಣೈ ದಂಪತಿ ಪುತ್ರಿ.














