1:33 PM Thursday6 - November 2025
ಬ್ರೇಕಿಂಗ್ ನ್ಯೂಸ್
ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ

ಇತ್ತೀಚಿನ ಸುದ್ದಿ

Mangaluru | ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಮುಲ್ಕಿ ಶಾಖೆಯ ಗ್ರಾಹಕರ ಸಭೆ

05/11/2025, 11:54

ಮಂಗಳೂರು(reporterkarnataka.com): ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಮುಲ್ಕಿ ಶಾಖೆಯ ೧೩ನೇ ವಾರ್ಷಿಕೋತ್ಸವದ ಪ್ರಯುಕ್ತ ಗ್ರಾಹಕರ ಸಭೆಯು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಅವರ ಅಧ್ಯಕ್ಷತೆಯಲ್ಲಿ ಮುಲ್ಕಿ ಶಾಖೆಯಲ್ಲಿ ಜರುಗಿತು.
ಕಾರ್ಯಕ್ರಮವನ್ನು ಸಂಘದ ಸದಸ್ಯರುಗಳಾದ ಶ್ರೀ ಶೀನ ಪೂಜಾರಿ, ಶ್ರೀ ಎಚ್. ವಾಸು ಪೂಜಾರಿ, ಶ್ರೀಮತಿ ಸರೋಜಿನಿ, ಶ್ರೀಮತಿ ಕುಶಾಲ ಎಸ್. ಕುಕ್ಯಾನ್ ಹಾಗೂ ಶ್ರೀ ಪ್ರಕಾಶ್ ಸುವರ್ಣ ಅವರು ದೀಪ ಪ್ರಜ್ವಲನೆ ಮಾಡಿ ಉದ್ಘಾಟಿಸಿದರು.
ಸದಸ್ಯರಾದ ಶ್ರೀ ಶೀನ ಪೂಜಾರಿಯವರು ಮಾತನಾಡಿ “ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಅವರ ಮುಂದಾಳತ್ವದಲ್ಲಿ ನಿರಂತರವಾಗಿ ಲಾಭ ಗಳಿಸುತ್ತಾ ಬರುತ್ತಿದೆ. ಸತತವಾಗಿ ಸದಸ್ಯರಿಗೆ ಡಿವಿಡೆಂಟ್ ನೀಡುತ್ತಿದ್ದು, ಕಳೆದ ಆರ್ಥಿಕ ಸಾಲಿನಲ್ಲಿ ಗ್ರಾಹಕರಿಗೆ ಶೇ.೧೫ ಡಿವಿಡೆಂಡ್ ನೀಡಿರುವುದು ಸಂಘದ ಆರ್ಥಿಕ ಪ್ರಗತಿಯ ಸಂಕೇತವಾಗಿದೆ. ಸಂಘವೂ ಇನ್ನೂ ಹೆಚ್ಚಿನ ಅಭಿವೃದ್ದಿಯನ್ನು ಹೊಂದಲಿ” ಎಂದು ಶುಭ ಹಾರೈಸಿದರು.
ಸದಸ್ಯರಾದ ಶ್ರೀ ಹರಿಶ್ಚಂದ್ರ ಪಿ ಸಾಲ್ಯಾನ್ ಮಾತನಾಡಿ, “ಸಂಘವು ಪ್ರಾರಂಭಗೊಂಡ ಅತೀ ಕಡಿಮೆ ಅವಧಿಯಲ್ಲಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಅವರ ನೇತ್ರತ್ವದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಾತ್ರವಲ್ಲದೆ ಹೊರಜಿಲ್ಲೆಯಲ್ಲೂ ೩೩ ಶಾಖೆಗಳನ್ನು ತೆರೆದು ಪ್ರಗತಿ ಪಥದತ್ತ ಸಾಗುತ್ತಿದೆ” ಎಂದು ತಿಳಿಸಿದರು.
ಸಂಘದ ಸದಸ್ಯರಾದ ಶ್ರೀಮತಿ ಸರೋಜಿನಿ ಅವರು ಮಾತನಾಡಿ “ಮುಲ್ಕಿ ಶಾಖೆಯು ಪ್ರಾರಂಭವಾದ ದಿನದಿಂದ ಇಂದಿನವರೆಗೂ ಉತ್ತಮ ರೀತಿಯಲ್ಲಿ ಗ್ರಾಹಕ ಸ್ನೇಹಿ ವ್ಯವಹಾರ ನಡೆಸುತ್ತಿದ್ದು, ಗ್ರಾಹಕರಿಗೆ ಶೀಘ್ರ ಗತಿಯ ಸೇವೆಯನ್ನು ನೀಡುತ್ತಿದೆ” ಎಂದು ಶ್ಲಾಘಿಸಿದರು.
ಸಂಘದ ಗ್ರಾಹಕರಾದ ಶ್ರೀ ಮಾಧವ ಸನಿಲ್, ಶ್ರೀ ಲ್ಯಾನ್ಸಿ ಡಿ ಅಲ್ಮೇಡಾ, ಶ್ರೀಮತಿ ಶಶಿಕಲ ಎಸ್ ಅಮೀನ್, ಶ್ರೀ ರಾಜೇಶ್ ಕುಮಾರ್, ಶ್ರೀ ಜಯ ಸಿ ಪೂಜಾರಿ, ಶ್ರೀ ರವೀಶ್ ಕಾಮತ್, ಶ್ರೀ ಸತೀಶ್ ಕುಮಾರ್ ಮತ್ತಿತ್ತರರು ಶುಭ ಹಾರೈಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಅವರು ಮಾತನಾಡಿ, ಸಂಘದ ಮುಲ್ಕಿ ಶಾಖೆಯು ೧೩ನೇ ವರ್ಷದ ಸಂಭ್ರಮದೊಂದಿಗೆ ಮುನ್ನಡೆಯುತ್ತಿದೆ. ಈ ಪ್ರಯುಕ್ತ ಸದಸ್ಯ ಗ್ರಾಹಕರಿಗೆ ಚಿನ್ನಾಭರಣಗಳಿಗೆ ಅಧಿಕ ಮೌಲ್ಯದೊಂದಿಗೆ ಯಾವುದೇ ಸೇವಾ ಶುಲ್ಕವಿಲ್ಲದೆ ಸಾಲಗಳನ್ನು ನೀಡುತ್ತಿದ್ದೇವೆ ಹಾಗೂ ಸಂಘದ ಎಲ್ಲಾ ಶಾಖೆಯಲ್ಲಿ ಇ ಸ್ಟ್ಯಾಂಪ್ ಸೇವಾ ಸೌಲಭ್ಯವನ್ನು ಗ್ರಾಹಕರಿಗೆ ನೀಡುತ್ತಿದೆ. ಸಂಘವು ಕಳೆದ ಮಾರ್ಚ್ ವರ್ಷಾಂತ್ಯಕ್ಕೆ ೧೮೨ ಕೋಟಿಗೂ ಮಿಕ್ಕಿ ಚಿನ್ನಾಭರಣ ಸಾಲವನ್ನು ನೀಡಿದೆ. ಈಗಾಗಲೇ ಸಂಘವು ಈ ಸಾಲಿನ ಅರ್ಧ ಆರ್ಥಿಕ ವರ್ಷದಲ್ಲಿ ೧೫೩ ಕೋಟಿಗೂ ಮಿಕ್ಕಿ ಚಿನ್ನಾಭರಣ ಸಾಲವನ್ನು ವಿತರಿಸಿದ್ದು, ಚಿನ್ನಾಭರಣ ಸಾಲ ನೀಡುವಿಕೆಯಲ್ಲಿ ಉತ್ತಮ ಪ್ರಗತಿಯನ್ನು ಸಾಧಿಸಿದೆ ಎಂದು ತಿಳಿಸಿದರು. ಚಿನ್ನಾಭರಣ ಸಾಲ ಎಲ್ಲರಿಗೂ ಅಗತ್ಯ ಇರುವಂತಹದು. ಅದರ ಸೌಲಭ್ಯವನ್ನು ಕೂಡ ನಾವು ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ೦% ಸೇವಾ ಶುಲ್ಕದಲ್ಲಿ ನೀಡುತ್ತಿದ್ದೇವೆ. ಸಂಸ್ಥೆಯು ಕೇವಲ ಬ್ಯಾಂಕಿAಗ್ ಮಾತ್ರವಲ್ಲದೆ ಜೀವ ವಿಮೆ, ಆರೋಗ್ಯ ವಿಮೆ ಮತ್ತು ವಾಹನ ವಿಮಾ ಸೌಲಭ್ಯಗಳನ್ನು ಹೊಂದಿರುತ್ತದೆ. ಸದಸ್ಯರ ಆರೋಗ್ಯದ ಕಾಳಜಿಯ ದೃಷ್ಟಿಯಿಂದ ಆರೋಗ್ಯ ಶಿಬಿರವನ್ನು ಸಹ ನಿರಂತರವಾಗಿ ನಮ್ಮ ಸಂಘ ಹಮ್ಮಿಕೊಂಡು ಬರುತ್ತಿದೆ. ಸಂಘದಲ್ಲಿ ೨ ವರ್ಷಕ್ಕೂ ಅಧಿಕ ಸೇವೆ ಸಲ್ಲಿಸುತ್ತಿರುವ ಪಿಗ್ಮಿ ಸಂಗ್ರಾಹಕರಿಗೆ ಸಂಘದ ವತಿಯಿಂದ ಉಚಿತ ಆರೋಗ್ಯ ವಿಮೆಯ ಸೌಲಭ್ಯವನ್ನು ನೀಡಲಾಗುತ್ತಿದೆ. ಜೊತೆಗೆ ಸಂಘದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡಿ ಅವರನ್ನು ಪ್ರೋತ್ಸಾಹಿಸುತ್ತಾ ಬಂದಿದೆ. ಸಂಘದಲ್ಲಿ ಲಭ್ಯವಿರುವ ಪ್ರತಿಯೊಂದು ಸೇವೆಗಳನ್ನು ಸದುಪಯೋಗ ಮಾಡಿಕೊಳ್ಳುವಂತೆ ಗ್ರಾಹಕರಲ್ಲಿ ವಿನಂತಿಸಿದರು.
ಈ ಸಂದರ್ಭದಲ್ಲಿ ಸಂಘದ ನಿರ್ದೇಶಕರಾದ ಶ್ರೀ ಗೋಪಾಲ್ ಎಂ, ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸೌಮ್ಯ ವಿಜಯ್ ರವರು ಉಪಸ್ಥಿತರಿದ್ದರು.
ಶಾಖೆಯ ಸಿಬ್ಬಂದಿಯಾದ ಶ್ರೀ ವರುಣ್ ರಾಜ್ ಸ್ವಾಗತಿಸಿ, ಶ್ರೀಮತಿ ಶ್ವೇತಾ ವಂದಿಸಿದರು. ಶಾಖಾಧಿಕಾರಿ ಶ್ರೀಮತಿ ಭಾಗ್ಯಶ್ರೀ ರವರು ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು