8:11 PM Thursday6 - November 2025
ಬ್ರೇಕಿಂಗ್ ನ್ಯೂಸ್
Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ…

ಇತ್ತೀಚಿನ ಸುದ್ದಿ

ಹುಲಿ ಮರಿಗಳೊಂದಿಗೆ ವಿಡಿಯೋ ಚಿತ್ರೀಕರಣ, ತಾಯಿ ಹುಲಿ ನಾಪತ್ತೆ: ಸಿಐಡಿ ತನಿಖೆಗೆ ಸಚಿವ ಈಶ್ವರ ಖಂಡ್ರೆ ಆದೇಶ

06/11/2025, 20:10

ಬೆಂಗಳೂರು(reporterkarnataka.com): ಚಾಮರಾಜನಗರ ಬಿ.ಆರ್.ಟಿ. ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವಲಯದ ಬೇಡಗುಳಿ ಅರಣ್ಯ ಪ್ರದೇಶದಲ್ಲಿ 3 ನವಜಾತ ಹುಲಿ ಮರಿಗಳೊಂದಿಗೆ ಕೆಲವರು ವಾಹನದ ಬೆಳಕಿನಲ್ಲಿ ಫೋಟೋ, ವಿಡಿಯೋ ಮಾಡಿರುವ ಹಾಗೂ ತಾಯಿ ಹುಲಿ ಸಾವಿನ ಶಂಕೆ ಹಿನ್ನೆಲೆಯಲ್ಲಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸಿಐಡಿ ತನಿಖೆಗೆ ಆದೇಶ ನೀಡಿದ್ದಾರೆ.
ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯವರಿಗೆ ನೀಡಿರುವ ಲಿಖಿತ ಸೂಚನೆಯಲ್ಲಿ ಅವರು, 2015ರಲ್ಲಿ ಅರಣ್ಯ ಅಪರಾಧ ಪ್ರಕರಣ ದಾಖಲಾಗಿದ್ದ ಸಂಸ್ಥೆಯೊಂದರೊಂದಿಗೆ ನಂಟು ಹೊಂದಿರುವವರೂ ಸೇರಿ ಕೆಲವರು ಅರಣ್ಯದಲ್ಲಿ ವಾಹನದ ಹೆಡ್ ಲೈಟ್ ಬೆಳಕಲ್ಲಿ, ಹುಲಿಮರಿಗಳ ಚಿತ್ರೀಕರಣ ಮಾಡಿ, ಸ್ಪರ್ಶಿಸಿ ವನ್ಯಜೀವಿ ಕಾಯಿದೆ ಉಲ್ಲಂಘಿಸಿರುವ ಬಗ್ಗೆ ಹಾಗೂ ತಾಯಿ ಹುಲಿಯ ಇರುವಿಕೆ ಬಗ್ಗೆ ಸಂಶಯ ವ್ಯಕ್ತಪಡಿಸಿ ದೂರುಗಳು ಬಂದಿರುವ ಹಿನ್ನೆಲೆಯಲ್ಲಿ ಸಮಗ್ರ ತನಿಖೆಗೆ ಆದೇಶ ನೀಡಿದ್ದಾರೆ.
ಈ ಮಧ್ಯೆ ಅಕ್ಟೋಬರ್ 15ರಂದು ಬಿ.ಆರ್.ಟಿ. ಅರಣ್ಯ ವಿಭಾಗದ ವತಿಯಿಂದ ನೀಡಿದ ಮಾಧ್ಯಮ ಪ್ರಕಟಣೆ ಹಾಗೂ ಹುಲಿ ಮರಿ ಜೊತೆ ಕೆಲವರು ವಿಡಿಯೋ ಮಾಡಿರುವ ದೃಶ್ಯ ತುಣುಕು ಸಾಮಾಜಿಕ ತಾಣದಲ್ಲಿ ವೈರಲ್ ಆದ ಬಳಿಕ ನೀಡಿರುವ ಹೇಳಿಕೆಗಳಲ್ಲಿ ವ್ಯತ್ಯಾಸ ಮತ್ತು ಗೊಂದಲ ಇರುವುದರ ಜೊತೆಗೆ ತಾಯಿಹುಲಿ ಹತ್ಯೆ ಆಗಿರುವ ಸಂಶಯವೂ ಮೂಡಿರುವ ಕಾರಣ ಹಾಗೂ ಎನ್.ಜಿ.ಓ.ಗಳಿಗೆ ಬರುವ ಹಣ ದುರುಪಯೋಗದ ಆರೋಪವೂ ಇರುವುದರಿಂದ ಈ ಪ್ರಕರಣವನ್ನು ಸಿಐಡಿ ತನಿಖೆ ವಹಿಸುವುದು ಸೂಕ್ತ ಎಂದು ಸಚಿವರು ಪರಿಗಣಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು