ಇತ್ತೀಚಿನ ಸುದ್ದಿ
ಮೈಸೂರು ನಗರದಲ್ಲಿ ಫ್ಲೈಓವರ್ ನಿರ್ಮಾಣಕ್ಕೆ ಮುಂದಾದ ರಾಜ್ಯ ಸರ್ಕಾರ: ಸಂಸದ ಯದುವೀರ್ ವಿರೋಧ
07/11/2025, 08:56
ಗಿರಿಧರ್ ಕೊಂಪುಳಿರ ಮೈಸೂರು
info.reporterkarnataka@gmail.com
ರಾಜ್ಯ ಸರ್ಕಾರ ಮೈಸೂರು ನಗರದಲ್ಲಿ ಎರಡು ಫ್ಲೈ ಓವರ್ ನಿರ್ಮಾಣಕ್ಕೆ ಮುಂದಾಗಿದ್ದು, ಇದಕ್ಕೆ ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ವಿರೋಧ ವ್ಯಕ್ತಪಡಿಸಿದ್ದಾರೆ.
ಈ ಸಂಬಂಧ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು ಜೆಎಲ್‌ಬಿ ರಸ್ತೆ, ವಿನೋಬಾ ರಸ್ತೆಗಳು ಪಾರಂಪರಿಕ ರಸ್ತೆಗಳಾಗಿವೆ. ಈ ರಸ್ತೆಗಳನ್ನು ಹಾಗೆಯೇ ಉಳಿಸಿಕೊಳ್ಳಬೇಕು. ಜನಾಭಿಪ್ರಾಯ ಪಡೆಯದೇ ಈ ಮಾರ್ಗದಲ್ಲಿ ಫೈಓವರ್ ನಿರ್ಮಾಣ ಕಾರ್ಯಕ್ಕೆ ಮುಂದಾಗಿದ್ದಾರೆ. ಡಿಪಿಆರ್ ಕೂಡ ಸಿದ್ದಪಡಿಸುತ್ತಿದ್ದಾರೆ. ಇದಕ್ಕೆ ನಮ್ಮ ತೀವ್ರ ವಿರೋಧವಿದೆ ಎಂದಿದ್ದಾರೆ. ಸಿಎಂ ಕೂಡ ಗ್ರೇಟರ್ ಮೈಸೂರು ಸಭೆಯಲ್ಲಿ ಮೈಸೂರಿನ ಪಾರಂಪರಿಕತೆ ಉಳಿಸಿಕೊಳ್ಳುವಂತೆ ಸಲಹೆ ನೀಡಿದ್ದಾರೆ. ಸಿಎಂ ಅವರ ಸಲಹೆಯಂತೆ ಅಧಿಕಾರಿಗಳು ನಡೆದುಕೊಳ್ಳಬೇಕು ಎಂದು ಹೇಳಿದ್ದಾರೆ.
ಫೈಓವರ್ ನಿರ್ಮಾಣವೇ ಶಾಶ್ವತ ಪರಿಹಾರವಲ್ಲ. ಮೆಟ್ರೋ ಮಾರ್ಗ ನಿರ್ಮಾಣಕ್ಕೆ ನಮ್ಮ ವಿರೋಧವಿಲ್ಲ. ಮುಂಬೈ ಮಾದರಿಯಲ್ಲಿ ಅಂಡರ್ ಗೌಂಡ್ ನಲ್ಲಿ ಮೆಟ್ರೋ ನಿರ್ಮಾಣ ಮಾಡಲಿ. ಮೈಸೂರಿನ ಜನಸಂಖ್ಯೆಗೆ ಅನುಗುಣವಾಗಿ ಕಾಮಗಾರಿ ಕೈಗೊಳ್ಳಲಿ. ಗ್ರೇಟರ್ ಮೈಸೂರು ನಿರ್ಮಾಣ ಮಾಡುವಾಗ ಸ್ಥಳೀಯರಿಗೆ ಅನುಕೂಲವಾಗುವಂತೆ ಅಭಿವೃದ್ಧಿ ಕಾಮಗಾರಿ ಮಾಡಲಿ. ಜನರ ವಿರೋಧದ ನಡುವೆ ಫೈ ಓವರ್ ಕಾಮಗಾರಿ ಕೈಗೆತ್ತಿಕೊಂಡರೆ ಕಾನೂನಾತ್ಮಕ ಹೋರಾಟ ಮಾಡುತ್ತೇವೆ. ಜೊತೆಗೆ ಜನರ ಸಹಕಾರದೊಂದಿಗೆ ಹೋರಾಟ ರೂಪಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.












