ಇತ್ತೀಚಿನ ಸುದ್ದಿ
Mangaluru | ತುಳು ಭವನದಲ್ಲಿ ನಾಳೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕ್ರತರೊಂದಿಗೆ ಮಾತುಕತೆ
07/11/2025, 10:54
ಮಂಗಳೂರು(reporterkarnataka.com): ತುಳುನಾಡಿನ ಜಾನಪದ ಕ್ಷೇತ್ರದ ಸಾಧನೆಗಾಗಿ ಈ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಉಮೇಶ್ ಪಂಬದ ಗಂಧಕಾಡು ಹಾಗೂ ಕಲಾವಿದರಾದ ಸಿಂಧೂ ಗುಜರನ್ ಅವರೊಂದಿಗೆ ಮಾತುಕತೆ ಕಾರ್ಯಕ್ರಮ ನ.8 ರಂದು ಮಧ್ಯಾಹ್ನ 2:30 ಗಂಟೆಗೆ ಮಂಗಳೂರಿನ ತುಳು ಭವನದಲ್ಲಿ ಆಯೋಜಿಸಲಾಗಿದೆ.
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮತ್ತು ಮಂಗಳೂರು ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಸಹಯೋಗದಲ್ಲಿ ನಡೆಯುವ ಈ ಕಾರ್ಯಕ್ರಮವನ್ನು ಶನಿವಾರ ಅಪರಾಹ್ನ 2.30 ಕ್ಕೆ ಉಡುಪಿ ಡಾ.ಶಿವರಾಮ ಕಾರಂತ ಟ್ರಸ್ಟ್ ನ ನಿರ್ದೇಶಕ ಡಾ.ಗಣನಾಥ ಎಕ್ಕಾರು ಉದ್ಘಾಟಿಸುವರು.
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ಅಧ್ಯಕ್ಷತೆ ವಹಿಸುವರು.
ಮುಲ್ಕಿ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಡಾ.ವಾಸುದೇವ ಬೆಳ್ಳೆ ಸಂವಾದ ಕಾರ್ಯಕ್ರಮದ ಸಮನ್ವಯಕಾರರಾಗಿ ಭಾಗವಹಿಸುವರು ಎಂದು ಅಕಾಡೆಮಿ ಪ್ರಕಟಣೆ ತಿಳಿಸಿದೆ.













