10:27 AM Sunday13 - September 2026
ಬ್ರೇಕಿಂಗ್ ನ್ಯೂಸ್
ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;…

ಇತ್ತೀಚಿನ ಸುದ್ದಿ

ಕಾಂಗ್ರೆಸ್‌ಗೆ ಕ್ರೈಸ್ತರು ಕೇವಲ ವೋಟ್ ಬ್ಯಾಂಕೇ?: ಆಲ್ವಿನ್ ಡಿಸೋಜ ಪಾನೀರ್ ಪ್ರಶ್ನೆ

13/09/2026, 10:27

ಮಂಗಳೂರು(reporterkarnataka.com): ಕಾಂಗ್ರೆಸ್ ಪಕ್ಷವು ಜಾತ್ಯತೀತತೆ ಮತ್ತು ಸಾಮಾಜಿಕ ನ್ಯಾಯದ ಸಿದ್ಧಾಂತಗಳನ್ನು ಪ್ರತಿಪಾದಿಸುತ್ತಿದ್ದರೂ, ಪಕ್ಷದ ಸಂಘಟನೆಯಲ್ಲಿ ಕ್ರೈಸ್ತ ಸಮುದಾಯಕ್ಕೆ ಸೂಕ್ತ ರಾಜಕೀಯ ಪ್ರಾತಿನಿಧ್ಯ ನೀಡಲಾಗುತ್ತಿಲ್ಲ ಎಂದು ಅಖಿಲ ಭಾರತ ಕ್ರೈಸ್ತ ಒಕ್ಕೂಟದ (AICU) ನಿಕಟ ಪೂರ್ವ ಅಧ್ಯಕ್ಷ ಆಲ್ವಿನ್ ಡಿಸೋಜ ಪಾನೀರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇತ್ತೀಚೆಗೆ ರಾಜ್ಯದ 35 ಜಿಲ್ಲಾ ಕಾಂಗ್ರೆಸ್ ಸಮಿತಿಗಳ (DCC) ಅಧ್ಯಕ್ಷರನ್ನು ನೇಮಕ ಮಾಡಲಾಗಿದ್ದು, ಈ ಪಟ್ಟಿಯಲ್ಲಿ ಒಬ್ಬ ಕ್ರೈಸ್ತ ನಾಯಕನಿಗೂ ಅವಕಾಶ ನೀಡದಿರುವುದು ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ ಎಂದು ಅವರು ಹೇಳಿದ್ದಾರೆ.
“ಕಾಂಗ್ರೆಸ್ ಪಕ್ಷಕ್ಕೆ ಕ್ರೈಸ್ತ ಸಮುದಾಯದ ಮತಗಳು ಬೇಕು. ಆದರೆ ಪಕ್ಷದ ಸಂಘಟನೆಯ ಪ್ರಮುಖ ಹಾಗೂ ನಿರ್ಣಾಯಕ ಹುದ್ದೆಗಳಲ್ಲಿ ಪ್ರಾತಿನಿಧ್ಯ ನೀಡಲು ಏಕೆ ಹಿಂಜರಿಕೆ?” ಎಂದು ಆಲ್ವಿನ್ ಡಿಸೋಜ ಪಾನೀರ್ ಪ್ರಶ್ನಿಸಿದ್ದಾರೆ.
ಅದೇ ರೀತಿ, 35 ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಪೈಕಿ ಒಬ್ಬ ಮಹಿಳೆಯಿಗೂ ಅಧ್ಯಕ್ಷ ಸ್ಥಾನ ನೀಡದಿರುವುದು ಕೂಡ ಬೇಸರದ ಸಂಗತಿ ಎಂದು ಅವರು ಹೇಳಿದ್ದಾರೆ. ಮಹಿಳಾ ಸಬಲೀಕರಣ ಮತ್ತು ಸಮಾನ ಅವಕಾಶಗಳ ಬಗ್ಗೆ ಮಾತನಾಡುವ ಕಾಂಗ್ರೆಸ್, ತನ್ನದೇ ಸಂಘಟನಾ ನೇಮಕಾತಿಯಲ್ಲಿ ಮಹಿಳೆಯರಿಗೆ ಸೂಕ್ತ ಪ್ರಾತಿನಿಧ್ಯ ನೀಡದಿರುವುದಕ್ಕೆ ಉತ್ತರಿಸಬೇಕು ಎಂದು ಆಗ್ರಹಿಸಿದ್ದಾರೆ.
ಕ್ರೈಸ್ತ ಸಮುದಾಯದ ಕೆಲವೇ ನಾಯಕರಿಗೆ ಹುದ್ದೆ ನೀಡಿ, ಉಳಿದ ಪ್ರಮುಖ ಸಂಘಟನಾ ಹುದ್ದೆಗಳಲ್ಲಿ ಇಡೀ ಸಮುದಾಯವನ್ನು ಕಡೆಗಣಿಸುವುದು ಯಾವ ರೀತಿಯ ಸಾಮಾಜಿಕ ನ್ಯಾಯ ಎಂದು ಅವರು ಪ್ರಶ್ನಿಸಿದ್ದಾರೆ.
ಕಾಂಗ್ರೆಸ್ ಪಕ್ಷವು ತನ್ನ ಜಾತ್ಯತೀತತೆ, ಸಾಮಾಜಿಕ ನ್ಯಾಯ ಮತ್ತು ಸಮಾನ ಪ್ರಾತಿನಿಧ್ಯದ ಸಿದ್ಧಾಂತಗಳನ್ನು ಪಕ್ಷದ ಆಂತರಿಕ ಸಂಘಟನೆಯಲ್ಲೂ ಪ್ರಾಮಾಣಿಕವಾಗಿ ಅನುಷ್ಠಾನಗೊಳಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಇಂತಹ ನಿರ್ಧಾರಗಳು ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ರಾಜಕೀಯವಾಗಿ ದುಷ್ಪರಿಣಾಮ ಬೀರಬಹುದು. ಅದರ ಪರಿಣಾಮಗಳಿಗೆ ಸಂಬಂಧಪಟ್ಟ ಪಕ್ಷದ ನಾಯಕರು ಹೊಣೆಗಾರರಾಗಬೇಕಾಗಬಹುದು ಎಂದು ಆಲ್ವಿನ್ ಡಿಸೋಜ ಪಾನೀರ್ ಎಚ್ಚರಿಕೆ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು