ಇತ್ತೀಚಿನ ಸುದ್ದಿ
ಆರೋಗ್ಯ ಸಚಿವ ಡಾ.ಸುಧಾಕರ್ ಇಂದು ಮಂಗಳೂರಿಗೆ: ಚಾರ್ಮಾಡಿಯಲ್ಲಿ ಆರೋಗ್ಯ ಕೇಂದ್ರ ನೂತನ ಕಟ್ಟಡ ಉದ್ಘಾಟನೆ
30/06/2021, 07:36
ಮಂಗಳೂರು (reporterkarnataka news): ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಅವರು ಜೂನ್ 30 ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ಅಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ನೂತನ ಕಟ್ಟಡ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 12.30 ಕ್ಕೆ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಸಮುದಾಯ ಆರೋಗ್ಯ ಕೇಂದ್ರದ ನೂತನ ಕಟ್ಟಡ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಸಂಜೆ 6.40 ಕ್ಕೆ ಮಂಗಳೂರು ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ.