8:43 PM Friday18 - July 2025
ಬ್ರೇಕಿಂಗ್ ನ್ಯೂಸ್
ಮಂಗಳೂರು – ಬೆಂಗಳೂರು 4 ತಾಸಿನ ಆಂಬುಲೆನ್ಸ್ ಪ್ರಯಾಣ!: ಹೃದಯ ಕಾಯಿಲೆಯ 14… ವಿದ್ಯುತ್ ಶಾಕ್: ಲೈನ್ ಮ್ಯಾನ್ ದಾರುಣ ಸಾವು; ಒಂದೂವರೆ ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದ… ರಾಹುಲ್ ಗಾಂಧಿಯ ಗೊತ್ತಿಲ್ಲದ ಸಾಧನೆಗೆ ಗೊತ್ತಿಲ್ಲದ ಪ್ರಶಸ್ತಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ಬಿರುಸುಗೊಂಡ ಕಾಡಾನೆಗಳ ಅರಣ್ಯಕ್ಕೆ ಅಟ್ಟುವ ಕಾರ್ಯ: ನಾಡಿನಿಂದ ಕಾಡಿನತ್ತ ಆನೆಗಳ ಮತ್ತೊಂದು ಹಿಂಡು ಭಾರೀ ಮಳೆ: ಕೊಡಗು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ: ಶಾಲೆ- ಕಾಲೇಜುಗಳಿಗೆ ನಾಳೆಯೂ… ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಅತ್ಯಂತ… ಭಾರೀ ಮಳೆ: ಕೊಡಗು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜಿಗೆ… ಕರ್ಣಾಟಕ ಬ್ಯಾಂಕ್ ವಿಲೀನಗೊಳಿಸುವ ಯಾವುದೇ ಪ್ರಸ್ತಾಪ ಇಲ್ಲ: ಬ್ಯಾಂಕಿನ ನೂತನ ವ್ಯವಸ್ಥಾಪಕ ನಿರ್ದೇಶಕ,… ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್ ಅಭಿವೃದ್ಧಿಪಡಿಸಿದ ವಿಶೇಷ ಡಿಜಿಲಾಕರ್ ಲೋಕಾರ್ಪಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ… Kodagu | ಬೇಲೂರಿನಲ್ಲಿ ಉಪಟಳ ನೀಡುತ್ತಿದ್ದ ‘ಕರಡಿ’ ಆನೆಗೆ ದುಬಾರೆಯಲ್ಲಿ ‘ಬಬ್ರುವಾಹನ’ ಎಂದು…

ಇತ್ತೀಚಿನ ಸುದ್ದಿ

ಆರೋಗ್ಯ ಸಚಿವರ ಎದೆ ಮೇಲೆ ಗುಂಡಿನ ದಾಳಿ: ಆಸ್ಪತ್ರೆಗೆ ದಾಖಲು; ಎಎಸ್ ಐ ದುಷ್ಕೃತ್ಯ

29/01/2023, 16:43

ಹೊಸದಿಲ್ಲಿ(reporterkarnataka.com): ಒಡಿಶಾದ ಆರೋಗ್ಯ ಸಚಿವ ನಬಾ ಕಿಸೋರ್‌ ದಾಸ್‌ ಮೇಲೆ ಭಾನುವಾರ ಗುಂಡಿನ ದಾಳಿ ನಡೆಸಲಾಗಿದೆ.
ಝಾರ್ಸುಗುಡ ಜಿಲ್ಲೆಯ ಬ್ರಜರಾಜನಗರ ಬಳಿಯ ಗಾಂಧಿ ಚೌಕ್‌ ಸಮೀಪ ಈ ದಾಳಿ ನಡೆದಿದೆ.

ಸಹಾಯಕ ಸಬ್‌ ಇನ್‌ಸ್ಪೆಕ್ಟರ್‌ ಗುಂಡು ಹಾರಿಸಿದ್ದು, ತೀವ್ರವಾಗಿ ಗಾಯಗೊಂಡವ ಕಿಶೋರ್ ದಾಸ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದ
ಸಚಿವರ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ. ಗುಂಡೇಟು ಎದೆಗೆ ತಗುಲಿದ್ದು, ಸಚಿವರು ತೀವ್ರ ಗಾಯಗೊಂಡಿದ್ದಾರೆ. ಪೊಲೀಸ್ ಅಧಿಕಾರಿ ಸಚಿವರ ಮೇಲೆ ಎರಡು ಸುತ್ತು ಗುಂಡು ಹಾರಿಸಿದ್ದು, ತೀವ್ರವಾಗಿ ಗಾಯಗೊಂಡ ಸಚಿವರನ್ನು ಆಸ್ಪತ್ರೆಗೆ ಸಾಗಿಸಲಾಯಿತು. ನಂತರ ಅವರನ್ನು ವಿಮಾನದಲ್ಲಿ ಭುವನೇಶ್ವರದ ಆಸ್ಪತ್ರೆಗೆ ಕರೆದೊಯ್ಯಲಾಯಿತು.
ಸಹಾಯಕ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಎಎಸ್‌ಐ) ಗೋಪಾಲ್ ದಾಸ್ ಅವರು ಸಚಿವರ ಮೇಲೆ ಗುಂಡು ಹಾರಿಸಿದ್ದಾರೆ. ಆರೋಪಿಯನ್ನು ಸ್ಥಳೀಯರು ಬಂಧಿಸಿದ್ದು, ನಂತರ ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ಬ್ರಜರಾಜನಗರ ಉಪವಿಭಾಗದ ಪೊಲೀಸ್ ಅಧಿಕಾರಿ ಗುಪ್ತೇಶ್ವರ ಭೋಯ್ ಮಾಧ್ಯಮಕ್ಕೆ ತಿಳಿಸಿದ್ದಾರೆ.

ದಾಳಿಯ ಹಿಂದಿನ ಉದ್ದೇಶಗಳು ಇನ್ನೂ ತಿಳಿದು ಬಂದಿಲ್ಲ.

ಇತ್ತೀಚಿನ ಸುದ್ದಿ

ಜಾಹೀರಾತು