ಇತ್ತೀಚಿನ ಸುದ್ದಿ
36 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯ ಸೆರೆ: ನ್ಯಾಯಾಂಗ ಬಂಧನ
07/01/2026, 23:01
ಬೆಳ್ತಂಗಡಿ(reporterkarnataka.com): ಸುಮಾರು 36 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಪೊಲೀಸರು ಕಾರ್ಕಳ ತಾಲೂಕಿನ ನಲ್ಲೂರು ಎಂಬಲ್ಲಿ ಬಂಧಿಸಿದ್ದಾರೆ.
ಬೆಳ್ತಂಗಡಿ ಪೊಲೀಸ್ ಠಾಣಾ ಅ.ಕ್ರ 68/1989 ಕಲಂ, 341,323,326 ಜೊತೆಗೆ 34 ಐಪಿಸಿ. CC No. 1720/1990 CR NO. Lpc 04/1992 ಪ್ರಕರಣದಲ್ಲಿ ಸುಮಾರು 36 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆಸಾಮಿ ರವೀಂದ್ರ ಚಾರ್ಮಾಡಿ ಎಂಬಾತನನ್ನು ಪೊಲೀಸರು ಬಂಧಿಸಿ ಮಂಗಳವಾರ ನ್ಯಾಯಲಯಕ್ಕೆ ಹಾಜರು ಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.














