7:30 PM Tuesday10 - February 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ

ಇತ್ತೀಚಿನ ಸುದ್ದಿ

ಅಯೋಧ್ಯೆ ರಾಮ ಮಂದಿರ ಮೇಲೆ ದಾಳಿಗೆ ಸಂಚು ಆರೋಪದ ಮೇಲೆ ಬಂಧಿತ ಜೈಲಿನಲ್ಲೇ ಹತ್ಯೆ: ಸಹ ಕೈದಿಯಿಂದ ಕೊಲೆ

10/02/2026, 18:27

ಲಕ್ನೋ(reporterkarnataka com): ಅಯೋಧ್ಯೆಯ ರಾಮ ಮಂದಿರದ ಮೇಲೆ ದಾಳಿ ನಡೆಸಲು ಸಂಚು ರೂಪಿಸಿದ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದ ಅಬ್ದುಲ್ ರೆಹಮಾನ್ ಎಂಬಾತನನ್ನು ಹರಿಯಾಣದ ಫರಿದಾಬಾದ್ ಜೈಲಿನಲ್ಲಿ ಸಹ ಕೈದಿಯೊಬ್ಬ ಕೊಲೆ ಮಾಡಿದ್ದಾನೆ.

*ಯಾರೀ ಅಬ್ದುಲ್ ರೆಹಮಾನ್?:* ಉತ್ತರ ಪ್ರದೇಶದ ಮಿಲ್ಕಿಪುರ ನಿವಾಸಿಯಾದ ಅಬ್ದುಲ್ ರೆಹಮಾನ್ (20), 2025ರ ಮಾರ್ಚ್‌ನಲ್ಲಿ ಎರಡು ಹ್ಯಾಂಡ್ ಗ್ರೆನೇಡ್‌ಗಳೊಂದಿಗೆ ಬಂಧಿತನಾಗಿದ್ದ. ರಾಮಮಂದಿರದ ಮೇಲೆ ಸ್ಫೋಟ ನಡೆಸಲು ಈತ ಸಂಚು ರೂಪಿಸಿದ್ದ ಮತ್ತು ಪಾಕಿಸ್ತಾನದ ಐಎಸ್‌ಐ (ISI) ಜೊತೆ ಸಂಪರ್ಕ ಹೊಂದಿದ್ದ ಎಂದು ತನಿಖಾ ಸಂಸ್ಥೆಗಳು ಶಂಕಿಸಿದ್ದವು.

*ಹತ್ಯೆ ನಡೆದದ್ದು ಹೇಗೆ ?:* ಜೈಲಿನಲ್ಲಿದ್ದ ಕಾಶ್ಮೀರಿ ಮೂಲದ ಕೈದಿ ಅರುಣ್ ಚೌಧರಿ ಎಂಬಾತನ ಜೊತೆ ರೆಹಮಾನ್ ಭಾನುವಾರ ಜಗಳವಾಡಿದ್ದ. ಜಗಳ ವಿಕೋಪಕ್ಕೆ ತಿರುಗಿ, ರಾತ್ರಿ ಸುಮಾರು 2:30ರ ವೇಳೆಗೆ ಅರುಣ್ ಚೌಧರಿ ಹರಿತವಾದ ವಸ್ತುವಿನಿಂದ ರೆಹಮಾನ್ ತಲೆಗೆ ಬಲವಾಗಿ ಹೊಡೆದಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ರೆಹಮಾನ್‌ನನ್ನು ಜೈಲಿನ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಅಷ್ಟರಲ್ಲೇ ಆತ ಮೃತಪಟ್ಟಿದ್ದಾನೆ ಎಂದು ವೈದ್ಯರು ಘೋಷಿಸಿದ್ದಾರೆ.
ಗುಜರಾತ್ ಮತ್ತು ಹರಿಯಾಣ ಎಸ್‌ಟಿಎಫ್‌ (STF) ಜಂಟಿ ಕಾರ್ಯಾಚರಣೆ ನಡೆಸಿ ಈತನನ್ನು ಬಂಧಿಸಿದ್ದವು. ಈತನ ಮೊಬೈಲ್‌ನಲ್ಲಿ ರಾಮಮಂದಿರಕ್ಕೆ ಸಂಬಂಧಿಸಿದ ಹಲವು ವಿಡಿಯೋಗಳು ಹಾಗೂ ನಕ್ಷೆಗಳು ಪತ್ತೆಯಾಗಿದ್ದವು. ಪ್ರಸ್ತುತ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಅಧಿಕಾರಿಗಳು ತನಿಖೆಗೆ ಆದೇಶಿಸಿದ್ದು, ಭದ್ರತಾ ಲೋಪದ ಬಗ್ಗೆಯೂ ಪರಿಶೀಲನೆ ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು