1:17 PM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಮಲ್ಲೇಶ್ವರ ಬಿಜೆಪಿ ಕಚೇರಿಯಲ್ಲಿ ಅರುಣ್ ಸಿಂಗ್ ಸಭೆ ಆರಂಭ: ಸಚಿವ ಸಿ.ಪಿ.ಯೋಗೀಶ್ವರ್ ಗೈರು, 28 ಸಚಿವರು ಹಾಜರು

16/06/2021, 19:36

ಬೆಂಗಳೂರು(reporterkarnataka news): ರಾಜ್ಯ ಬಿಜೆಪಿಯಲ್ಲಿ ಉಂಟಾಗಿರುವ ಭಿನ್ನಮತ ಸಂಬಂಧಿಸಿದಂತೆ ಮಾತುಕತೆ ನಡೆಸಲು 

ಇಂದು ಬೆಂಗಳೂರಿಗೆ ಆಗಮಿಸಿದ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರು ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಸಭೆ ನಡೆಸುತ್ತಿದ್ದು, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಅವರ ಸಂಪುಟದ 28 ಮಂದಿ ಸಚಿವರು ಹಾಜರಾಗಿದ್ದಾರೆ. ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೀಶ್ವರ್ ಮಾತ್ರ ಗೈರು ಹಾಜರಾಗಿದ್ದಾರೆ.

ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಡಿಸಿಎಂ ಲಕ್ಷ್ಮಣ ಸವದಿ ಸೇರಿದಂತೆ ಎಲ್ಲ ಹಿರಿಯ ನಾಯಕರು ಉಪಸ್ಥಿತರಿದ್ದಾರೆ.

ಸಚಿವ ಯೋಗೀಶ್ವರ್ ಅವರು ಸಭೆಯಲ್ಲಿ ಸೇರಿಕೊಳ್ಳಲಿದ್ದಾರೆ ಎನ್ನಲಾಗಿದೆ.

ಮಧ್ಯಾಹ್ನ 3.45ರ ವೇಳೆಗೆ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅರುಣ್ ಸಿಂಗ್ ಅವರು ಅಲ್ಲಿ ಮಾಧ್ಯಮದವರ ಜತೆ ಮಾತನಾಡಿ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ಬಿಜೆಪಿ ಉತ್ತಮ ಕಾರ್ಯನಿರ್ವಹಿಸುತ್ತಿದೆ. ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿಯನ್ನು ಚೆನ್ನಾಗಿ ನಿಭಾಯಿಸಿದ್ದಾರೆ ಎಂದು ಶ್ಲಾಘಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು