9:52 AM Saturday10 - October 2026
ಬ್ರೇಕಿಂಗ್ ನ್ಯೂಸ್
ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:… ಕಾಡಿನಲ್ಲಿ ಕಾದಾಟದಿಂದ ತೀವ್ರ ಗಾಯ | ದುಬಾರೆ ಶಿಬಿರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಂಡಾನೆ… ದೋಷಪೂರಿತ ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಗೊಳಿಸಿ: ನಟ ಪ್ರಕಾಶ್ ರೈ ಆಗ್ರಹ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಿ ಬಂಧಿಸಿ: ಕಾಂಗ್ರೆಸ್ ಪಾದಯಾತ್ರೆಯಲ್ಲಿ ಆಗ್ರಹ

ಇತ್ತೀಚಿನ ಸುದ್ದಿ

ಅಸಾನಿ ಚಂಡಮಾರುತ ಎಫೆಕ್ಟ್: 23 ವಿಮಾನ ಸಂಚಾರ, 37 ರೈಲು ಯಾನ ರದ್ದು: ಕರಾವಳಿಯಲ್ಲಿ ಜನಜೀವನ ಅಸ್ತವ್ಯಸ್ತ

11/05/2022, 19:41

ಹೊಸದಿಲ್ಲಿ(reporterkarnataka.com): ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ಅಸಾನಿ ಚಂಡಮಾರುತದಿಂದ ಕರಾವಳಿ ರಾಜ್ಯಗಳು ತತ್ತರಿಸಿದ್ದು, ಹಲವೆಡೆ ವಿಮಾನ ಹಾಗೂ ರೈಲು ಸಂಚಾರ ಸ್ಥಗಿತಗೊಳಿಸಲಾಗಿದೆ.

ಕರಾವಳಿ ರಾಜ್ಯಗಳಲ್ಲಿ ಭಾರೀ ಗಾಳಿ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ. ಅಸಾನಿ ಚಂಡಮಾರುತ ವಿಮಾನ, ರೈಲು ಸಂಚಾರದ ಮೇಲೆ ಪರಿಣಾಮ ಬೀರಿದೆ.

ಈಗಾಗಲೇ ಹಲವಾರು ವಿಮಾನಗಳನ್ನು ರದ್ದುಗೊಳಿಸಲಾಗಿದೆ. ಇನ್ನು ಕೆಲವು ವಿಮಾನಗಳ ಮಾರ್ಗ ಬದಲಾವಣೆಯಾಗಿದೆ. ಮಂಗಳವಾರದವರೆಗೆ 19 ವಿಮಾನ ಸೇವೆಗಳನ್ನು ರದ್ದುಗೊಳಿಸಲಾಗಿತ್ತು. ಬುಧವಾರ, ಇಂಡಿಗೋ ಸಂಸ್ಥೆ 23 ವಿಮಾನಗಳನ್ನು ರದ್ದುಗೊಳಿಸುವುದಾಗಿ ಘೋಷಿಸಿದೆ. ದೆಹಲಿ-ವಿಶಾಖಪಟ್ಟಣಂ, ಬೆಂಗಳೂರು-ವಿಶಾಖಪಟ್ಟಣಂ ಸೇವೆಗಳನ್ನು ರದ್ದುಗೊಳಿಸಲಾಗಿದೆ. ಏರ್ ಇಂಡಿಯಾ ಮುಂಬೈ-ರಾಯಪುರ ಮತ್ತು ವಿಶಾಖಪಟ್ಟಣ-ದೆಹಲಿ ಸೇವೆಗಳನ್ನು ರದ್ದುಗೊಳಿಸಿದೆ. ವಿಮಾನಗಳು ಲ್ಯಾಂಡಿಂಗ್‌ ಆಗಲು ಪ್ರತಿಕೂಲ ಹವಾಮಾನ ಕಾರಣ ಎಂದು ಏರ್‌ಪೋರ್ಟ್‌ ಅಧಿಕಾರಿಗಳು ತಿಳಿಸಿದ್ದಾರೆ.

ಈ ಮಧ್ಯೆ ದಕ್ಷಿಣ ಮಧ್ಯ ರೈಲ್ವೆ ಬುಧವಾರ ಒಟ್ಟು 37 ರೈಲುಗಳನ್ನು ರದ್ದುಗೊಳಿಸಲಾಗಿದೆ. ಕೆಲವನ್ನು ರಿಷೆಡ್ಯೂಲ್‌ ಮಾಡಲಾಗಿದೆ. ವಿಜಯವಾಡ-ಮಚಿಲಿಪಟ್ಟಣಂ, ಮಚಿಲಿಪಟ್ಟಣಂ-ವಿಜಯವಾಡ, ವಿಜಯವಾಡ-ನರಸಾಪುರ, ನರಸಾಪುರ-ನಿಡದವೋಲು, ನಿಡದವೋಲು-ನರಸಾಪುರ, ನರಸಾಪುರ-ವಿಜಯವಾಡ, ವಿಜಯವಾಡ-ನರಸಾಪುರ, ನಿಡದವೋಲು-ಭೀಮಾವರಂ ಜಂಕ್ಷನ್, ಭೀಮಾವರಂ ಜಂಕ್ಷನ್- ಮಚಲಿಪಟ್ಟಣಂ-ಗುಡಿವಾಡ, ಭೀಮಾವರಂ ಜಂಕ್ಷನ್-ಮಚಿಲಿಪಟ್ಟಣಂ, ಗುಡಿವಾಡ-ಮಚಿಲಿಪಟ್ಟಣಂ, ನರಸಾಪುರ-ಗುಂಟೂರು, ಗುಂಟೂರು-ನರಸಾಪುರ, ಕಾಕಿನಾಡ ಬಂದರು-ವಿಜಯವಾಡ ರೈಲುಗಳು ರದ್ದಾಗಿದೆ. ಇದರಿಂದಾಗಿ ಪ್ರಯಾಣಿಕರು ಪರದಾಡುವ ಪರಿಸ್ಥಿತಿ ಎದುರಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು