1:13 AM Saturday13 - September 2025
ಬ್ರೇಕಿಂಗ್ ನ್ಯೂಸ್
Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ ಕರಾವಳಿಯಲ್ಲಿ ಸಂಭ್ರಮದ ಮೊಂತಿ ಹಬ್ಬ: ಚರ್ಚ್ ಗಳಲ್ಲಿ ವಿಶೇಷ ಬಲಿಪೂಜೆ; ತೆನೆ ವಿತರಣೆ ಮೈಸೂರು ದಸರಾ: ಗೋಲ್ಡ್​ ಕಾರ್ಡ್​; ಟಿಕೆಟ್​ ದರ ಎಷ್ಟು? ಖರೀದಿ ಹೇಗೆ? ಇಲ್ಲಿದೆ… Kodagu | ಮಡಿಕೇರಿ: ಮಾಂದಲಪಟ್ಟಿಗೆಯಲ್ಲಿ ಪ್ರವಾಸಿಗನ ಮೇಲೆ ಜೀಪ್ ಚಾಲಕ ಹಲ್ಲೆ

ಇತ್ತೀಚಿನ ಸುದ್ದಿ

ಅಶಕ್ತರ ಆಶಾಕಿರಣ ಎಂ.ಪಿ.ವೀಣಾ: ಐಯ್ಯನಕೆರೆ ಮನೆ ಕಳೆದುಕೊಂಡವರಿಗೆ ಸಕಲ ವ್ಯವಸ್ಥೆ 

19/08/2021, 20:35

ವಿಜಯನಗರ(reporterkarnataka.com): ವಿಜಯನಗರ ಜಿಲ್ಲೆಯ ಹರಪನಹಳ್ಳಿ ಕ್ಷೇತ್ರದ ಐ‌ಯ್ಯನಕೆರೆ ಸಮೀಪದ ಆಂಜನೇಯ ಬಡಾವಣೆಯಲ್ಲಿ ಇತ್ತೀಚೆಗೆ ಬೆಂಕಿ ಆಕಸ್ಮಿಕದಿಂದ ಮನೆ ಕಳೆದುಕೊಂಡ ಕುಟುಂಬವನ್ನು ಭೇಟಿಯಾಗಿ ನಿರಾಶ್ರಿತರ ಆಶ್ರಯದಾತೆ ಎಂದೇ ಖ್ಯಾತರಾದ ಎಂ.ಪಿ. ವೀಣಾ ಅವರು ಸಕಲ ವ್ಯವಸ್ಥೆಯನ್ನು ಮಾಡಿದ್ದಾರೆ.

ನೊಂದವರಿಗೆ ಸಾಂತ್ವನ ಹೇಳುವ ಜತೆಗೆ ಆಹಾರದ ಕಿಟ್, ಹಾಸಿಗೆ, ಬಟ್ಟೆ, ಪಾತ್ರೆ ಪಗಡೆ ಸೇರಿದಂತೆ ಎಲ್ಕ ಅಗತ್ಯ ಗೃಹಬಳಕೆ ಸಾಮಗ್ರಿಗಳನ್ನು ನೀಡಿದ್ದಾರೆ. ಕೂಡಲೇ ತಾತ್ಕಾಲಿಕ ಶೆಡ್ ನಿರ್ಮಿಸಿಕೊಳ್ಳಲು ಬೇಕಾಗುವ ಸಲಕರಣೆಗಳನ್ನು ಕೂಡ ಒದಗಿಸಿದ್ದಾರೆ. ಈ ಮೂಲಕ ನಿರಾಶ್ರಿತರಿಗೆ ತುರ್ತು ಆಶ್ರಯ ವ್ಯವಸ್ಥೆ ಮಾಡಿ ವೀಣಾ ಅವರು ಮಾನವೀಯತೆ ಮೆರೆದಿದ್ದಾರೆ. 

ಇಷ್ಟೇ ಅಲ್ಲದೆ ನೊಂದ ಕುಟುಂಬಗಳ ಆಹುವಾಲಗಳನ್ನು ಸ್ವೀಕರಿಸಿದ್ದು, ಕಂದಾಯ ಅಧಿಕಾರಿಗಳ ಗಮನಕ್ಕೆ ತಂದು ಸೂಕ್ತ ಪರಿಹಾರ ದೊರಕುವಂತೆ ಪ್ರಯತ್ನಿಸುತ್ತೇನೆ ಎಂದು ಭರವಸೆ ನೀಡಿ ಧೈರ್ಯ ತುಂಬಿದ್ದಾರೆ.

ಡಾ. ಮಹಾಂತೇಶ್ ಚರಂತಿಮಠ, ಕೆಪಿಸಿಸಿ ವೈದ್ಯ ಘಟಕದ ಉಪಾಧ್ಯಕ್ಷರಾದ ಡಾ. ಕವಿತಾ ವಾಗೀಶ್, ಮಾಜಿ ಪುರಸಭೆ ಅಧ್ಯಕ್ಷ ದಾದಾಪೀರ್ ಮಕರಬ್ಬಿ, ಹರಪನಹಳ್ಳಿ ಬ್ಲಾಕ್ ಯುವ ಕಾಂಗ್ರೆಸ್ ಉಪಾಧ್ಯಕ್ಷ ಸಿ. ಮಂಜುನಾಥ್, ಹರಪನಹಳ್ಳಿ ಬ್ಲಾಕ್ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್, ಪ್ರಜ್ವಲ್, ಅರುಣ್ ಕುಮಾರ್, ಮದನ್ ಸ್ವಾಮಿ, ಸಾಗರ್ ಪಾಟೀಲ್, ಗುರು ಬಸವರಾಜ್, ಜೆ.ಕೆ.ಮಾರುತಿ, ರೂಪಾ ಮುಂತಾದವರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು