3:40 AM Tuesday18 - November 2025
ಬ್ರೇಕಿಂಗ್ ನ್ಯೂಸ್
Mandya | ಶಿವನಸಮುದ್ರ: 4 ದಿನಗಳಿಂದ ನಾಲೆಯಲ್ಲಿ ಸಿಲುಕಿದ್ದ ಮರಿಯಾನೆಯ ರಕ್ಷಣೆ Kodagu | ಪಿರಿಯಾಪಟ್ಟಣ: ಅತ್ತೆ ಮನೆಗೆ ಬಂದು ಈಜಲು ಹೋದ ಬಾಲಕ ನೀರಿನಲ್ಲಿ… Madikeri | ಕಾಡಾನೆ ದಾಳಿಗೆ ಸಿಲುಕಿದ್ದ ಟೀ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಅನಾಹುತ:… ಪೊಲೀಸರ ಕಟ್ಟುನಿಟ್ಟಿನ ಕ್ರಮಕ್ಕೆ ಸವಾಲು: ಚಾರ್ಮಾಡಿ ಅಡ್ಡದಾರಿಯಲ್ಲಿ ಅಳವಡಿಸಿದ್ದ 12 ಅಡಿ ಗೇಟ್‌… ಡಿಕ್ಕಿ ಹೊಡೆದ ಕಾರಿನ ಮೇಲೆಯೇ ಬಿದ್ದ ಕಾಡಾನೆ: ಕಾರಿನ ಮುಂಭಾಗ ಸಂಪೂರ್ಣ ಜಖಂ;… ಬೆಂಗಳೂರು: ಮತ ಕಳ್ಳತನ ವಿರುದ್ಧ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಬೆಳಗಾವಿ ಮೃಗಾಲಯದಲ್ಲಿ 19 ಜಿಂಕೆಗಳ ಸಾವು: ತನಿಖೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ… ಮೂಡಿಗೆರೆಯಲ್ಲಿ 80 ಮೂಟೆ ಕಾಳುಮೆಣಸು ಕಳ್ಳತನ ಪ್ರಕರಣ: ಮಹಿಳಾ ಆರೋಪಿ ಬಂಧನ, ಮೂವರು… ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ವಿರುದ್ಧ ಅವಾಚ್ಯ ಪದ ಬಳಕೆ: ಆರೋಪಿ ವಿರುದ್ಧ… Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ

ಇತ್ತೀಚಿನ ಸುದ್ದಿ

ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ನಿರೀಕ್ಷಣಾ ಜಾಮೀನಿಗೆ ಪ್ರಜ್ವಲ್ ರೇವಣ್ಣ ಅರ್ಜಿ

29/05/2024, 21:00

ಬೆಂಗಳೂರು(reporterkarnataka.com): ಸಂಸದ ಹಾಗೂ ಜನತಾದಳದಿಂದ ಅಮಾನತುಗೊಂಡ ನಾಯಕ ಪ್ರಜ್ವಲ್ ರೇವಣ್ಣ ಅವರು ತಮ್ಮ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದ ಮೂರು ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ಕೋರಿ ಬೆಂಗಳೂರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.
ಲೈಂಗಿಕ ಕಿರುಕುಳದ 2,900 ಕ್ಕೂ ಹೆಚ್ಚು ವೀಡಿಯೋಗಳ ನಂತರ ದೇಶದಿಂದ ಪರಾರಿಯಾಗಿರುವ ಪ್ರಜ್ವಲ್ ರೇವಣ್ಣ ವಿರುದ್ಧದ ಆರೋಪಗಳ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಗೆ ನ್ಯಾಯಾಲಯ ಬುಧವಾರ ನೋಟಿಸ್ ಜಾರಿ ಮಾಡಿದೆ.
ಪ್ರಜ್ವಲ್ ರೇವಣ್ಣ ಭಾರತಕ್ಕೆ ಮರಳುತ್ತಿದ್ದಂತೆ ಅವರನ್ನು ಬಂಧಿಸಲು ತನಿಖಾ ಸಂಸ್ಥೆ ಯೋಜಿಸಿದೆ. ಈ ಹಿನ್ನೆಲೆಯಲ್ಲಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. ಪ್ರಜ್ವಲ್ ರೇವಣ್ಣ ಅವರು ಭಾರತಕ್ಕೆ ಮರಳುವುದಾಗಿ ಸೋಮವಾರ ವಿಡಿಯೋ ಬಿಡುಗಡೆ ಮಾಡಿದ್ದರು. ಸಂಸದರ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದುಗೊಳಿಸುವಂತೆ ಕರ್ನಾಟಕ ಸರ್ಕಾರ ಈ ಹಿಂದೆ ಕೇಂದ್ರಕ್ಕೆ ಪತ್ರ ಬರೆದಿತ್ತು.
ಏಪ್ರಿಲ್ 28 ರಂದು, ಪ್ರಜ್ವಲ್ ರೇವಣ್ಣ ಮತ್ತು ಅವರ ತಂದೆ ಹೆಚ್.ಡಿ.ರೇವಣ್ಣ ವಿರುದ್ಧ ಸೆಕ್ಷನ್ 354A (ಲೈಂಗಿಕ ಕಿರುಕುಳ), 354D (ಹಿಂಬಾಲಿಸುವಿಕೆ), 506 (ಅಪರಾಧ ಬೆದರಿಕೆ), ಮತ್ತು 509 (ಮಹಿಳೆಗೆ ಅವಮಾನ) ಅಡಿಯಲ್ಲಿ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಿಸಲಾಗಿತ್ತು. ಹಾಸನ ಜಿಲ್ಲೆ ಹೊಳೆನರಸೀಪುರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು