1:59 AM Wednesday6 - May 2026
ಬ್ರೇಕಿಂಗ್ ನ್ಯೂಸ್
ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ…

ಇತ್ತೀಚಿನ ಸುದ್ದಿ

ಆಸ್ಪತ್ರೆಗೆ ಕಾಂಗ್ರೆಸ್ ನಾಯಕರ ದಂಡು: ಆಸ್ಕರ್ ಆರೋಗ್ಯ ವಿಚಾರಿಸಿದ ಸಿದ್ದರಾಮಯ್ಯ, ಡಿಕೆಶಿ, ಸಲೀಂ ಅಹಮ್ಮದ್

22/07/2021, 19:44

ಮಂಗಳೂರು(reporterkarnataka news): ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಗುರುವಾರ ಅನಾರೋಗ್ಯದಿಂದ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವ ಕೇಂದ್ರ ಮಾಜಿ ಸಚಿವ, ರಾಜ್ಯಸಭೆ ಸದಸ್ಯ ಆಸ್ಕರ್ ಫೆರ್ನಾಂಡಿಸ್ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿದರು.


ಗುರುವಾರ ಸಂಜೆ 5.10ಕ್ಕೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಸಿದ್ದರಾಮಯ್ಯ ಅವರುಮಂಗಳೂರಿಗೆ ಆಗಮಿಸಿದರು. ಸಂಜೆ 6.10ಕ್ಕೆ ಮಂಗಳೂರಿಗೆ ಆಗಮಿಸುವ ಅವರು ನಂತರ ಪಕ್ಷದ ಹಿರಿಯ ನಾಯಕ ಆಸ್ಕರ್ ಫೆರ್ನಾಂಡಿಸ್ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದರು. ಸಿದ್ದರಾಮಯ್ಯ ಜತೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಮಾಜಿ ಸಚಿರಾದ ಬಿ.ರಮಾನಾಥ ರೈ, ಯು.ಟಿ. ಖಾದರ್, ಅಭಯಚಂದ್ರ ಜೈನ್, ಮಾಜಿ ಶಾಸಕರಾದ ಜೆ. ಆರ್. ಲೋಬೊ, ಮೊಯ್ದೀನ್ ಬಾವಾ, ಐವನ್ ಡಿಸೋಜ, ಯುವ ಕಾಂಗ್ರೆಸ್ ನಾಯಕ ಮಿಥುನ್ ರೈ ಮುಂತಾದವರು ಉಪಸ್ಥಿತರಿದ್ದರು.

 ಆಸ್ಕರ್ ಫೆರ್ನಾಂಡಿಸ್ ಅವರು ಯೋಗಾಭ್ಯಾಸದ ವೇಳೆ ತನ್ನ ಅತ್ತಾವರದ ಫ್ಲ್ಯಾಟ್ ನಲ್ಲಿ  ಬಿದ್ದು ಗಾಯಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು