1:21 PM Thursday8 - October 2026
ಬ್ರೇಕಿಂಗ್ ನ್ಯೂಸ್
ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:… ಕಾಡಿನಲ್ಲಿ ಕಾದಾಟದಿಂದ ತೀವ್ರ ಗಾಯ | ದುಬಾರೆ ಶಿಬಿರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಂಡಾನೆ… ದೋಷಪೂರಿತ ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಗೊಳಿಸಿ: ನಟ ಪ್ರಕಾಶ್ ರೈ ಆಗ್ರಹ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಿ ಬಂಧಿಸಿ: ಕಾಂಗ್ರೆಸ್ ಪಾದಯಾತ್ರೆಯಲ್ಲಿ ಆಗ್ರಹ

ಇತ್ತೀಚಿನ ಸುದ್ದಿ

ಅಸ್ಪೃಶ್ಯತೆ ನಿವಾರಣೆಗೆ `ವಿನಯ್ ಸಾಮರಸ್ಯ ಯೋಜನೆ’: ಸಚಿವ ಕೋಟ ಶ್ರೀನಿವಾಸ ಪೂಜಾರಿ

08/06/2022, 20:53

ಉಡುಪಿ(reporterkarnataka.com):  ರಾಜ್ಯದಲ್ಲಿ ಅಸ್ಪೃಶ್ಯತೆ ಇನ್ನೂ ಜೀವಂತವಾಗಿದೆ ಎಂಬುದನ್ನು ಸರಕಾರ ಒಪ್ಪಿಕೊಂಡಿದೆ. ಅಸ್ಪೃಶ್ಯತೆ ನಿವಾರಣೆ ಮತ್ತು ಸಾಮರಸ್ಯ ಬೆಳೆಸುವ ನಿಟ್ಟಿನಲ್ಲಿ ವಿನಯ್‌ ಸಾಮರಸ್ಯ ಯೋಜನೆಯನ್ನು ಈ ತಿಂಗಳ ಅಂತ್ಯ ಅಥವಾ ಮುಂದಿನ ತಿಂಗಳ ಮೊದಲ ವಾರದಿಂದ ಶುರು ಮಾಡಲಿದ್ದೇವೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪೇಜಾವರ ಮಠಾಧೀಶರಾದ ವಿಶ್ವಪ್ರಸನ್ನತೀರ್ಥ ಶ್ರೀಪಾದರು, ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಸಹಿತವಾಗಿ ಧಾರ್ಮಿಕ ಮುಖಂಡರನ್ನು ಸೇರಿಸಿಕೊಂಡು ಅಸ್ಪೃಶ್ಯತೆ ನಿವಾರಿಸಲು ದೊಡ್ಡ ಅಭಿಯಾನ ನಡೆಸಲಾಗುವುದು ಎಂದು ಹೇಳಿದ್ದಾರೆ.

ರಾಜ್ಯದ ಗ್ರಾಮ ಪಂಚಾಯಿತಿ ಮತ್ತು ಸ್ಥಳೀಯಾಡಳಿತಗಳಲ್ಲಿ ಸಾಮಾಜಿಕ ನ್ಯಾಯ ಸಮಿತಿ ಮೂಲಕ ಈ ಅಭಿಯಾನ ನಡೆಸಿ, ಅಸ್ಪೃಶ್ಯತೆ ಮುಕ್ತ ಗ್ರಾಮ, ನಗರಾಡಳಿತಗಳಿಗೆ ಇಲಾಖೆಯಿಂದ ಪ್ರೋತ್ಸಾಹ ನೀಡಲಾಗುವುದು ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು