ಇತ್ತೀಚಿನ ಸುದ್ದಿ
ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು ಮಂದಿ ಬೀದಿಪಾಲು
28/07/2026, 18:54
ಗೌಹಾಟಿ(reporterkarnataka.com): ಅಸ್ಸಾಂನಲ್ಲಿ ಪ್ರವಾಹ ಪರಿಸ್ಥಿತಿ ಈಗ ಕೊಂಚ ಸುಧಾರಿಸಿದೆ, 24 ಗಂಟೆಯಲ್ಲಿ ಸಾವು – ನೋವುಗಳು ಸಂಭವಿಸಿಲ್ಲ. ಆದಾಗ್ಯೂ ಇಲ್ಲಿನ 6 ಜಿಲ್ಲೆಗಳ ಸುಮಾರು 4.45 ಲಕ್ಷಕ್ಕೂ ಹೆಚ್ಚು ಮಂದಿ ಇನ್ನೂ ಸಂಕಷ್ಟದ ಪರಿಸ್ಥಿತಿಯಲ್ಲೇ ದಿನದೂಡುವಂತಾಗಿದೆ ಎಂದು ಅಸ್ಸಾಂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ASDMA) ಹೇಳಿದೆ.










ಪ್ರವಾಹಕ್ಕೆ ಈಗಾಗಲೇ ಅಸ್ಸಾಂ ರಾಜ್ಯದ 6 ಜಿಲ್ಲೆಗಳಲ್ಲಿ 70ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ. ಸಾವಿರಾರು ಮಂದಿ ನಾಪತ್ತೆಯಾಗಿದ್ದಾರೆ.
ASDMA ಬಿಡುಗಡೆ ಮಾಡಿದ ವರದಿ, ಶಿವಸಾಗರ್, ಗೋಲಾಘಾಟ್, ಚರೈದಿಯೋ, ಜೋರ್ಹಾಟ್, ನಾಗಾಂವ್ ಹಾಗೂ ಕಾಮರೂಪ್ (ಮೆಟ್ರೋಪಾಲಿಟನ್) ಜಿಲ್ಲೆಗಳ ಒಟ್ಟು 4,45,495 ಜನರು ಪ್ರವಾಹದಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ. ಗೋಲಾಘಾಟ್ ಜಿಲ್ಲೆಯ ನುಮಾಲಿಗಢದಲ್ಲಿ ಧನಸಿರಿ (ದಕ್ಷಿಣ) ನದಿ ಇನ್ನೂ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ.












