10:17 PM Tuesday26 - November 2024
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ: ತನಿಖೆ ಆರಂಭ ಕಳೆದ ಬಾರಿ ಅರ್ಧಂಬರ್ಧ ಸುಣ್ಣಬಣ್ಣ ಕಂಡ ತುಂಗಾ ಕಮಾನು ಸೇತುವೆಗೆ ಈ ಬಾರಿ… ಅಟಲ್ ಜೀ ಜನಸ್ನೇಹಿ ಕೇಂದ್ರ ಯೋಜನೆಯಲ್ಲಿ ಕೋಲಾರ ಪ್ರಥಮ: ಜಿಲ್ಲಾಧಿಕಾರಿ ಅಕ್ರಂ ಪಾಷಾಗೆ… ಚನ್ನಪಟ್ಟಣದಲ್ಲಿ ಸೋಲು: ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದು ಧೈರ್ಯ ತುಂಬಿದ ಕಾರ್ಯಕರ್ತ! ಮೂಡಿಗೆರೆ: ಬೆಂಕಿ ಆಕಸ್ಮಿಕದಲ್ಲಿ ಗುಡಿಸಲು ಸಂಪೂರ್ಣ ಭಸ್ಮ; ಬೀದಿಗೆ ಬಿದ್ದ ಬಡ ಕುಟುಂಬ ರಾಜ್ಯ ವಿಧಾನಸಭೆಯ 3 ಕ್ಷೇತ್ರಗಳ ಉಪ ಚುನಾವಣೆ; ಕಾಂಗ್ರೆಸ್ ಭರ್ಜರಿ ಜಯ; ಕೇಸರಿ… ಸಂಡೂರಿನಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಅನ್ನಪೂರ್ಣಗೆ ಜಯ: ಬಿಜೆಪಿ ಮೈತ್ರಿಕೂಟಕ್ಕೆ ತೀವ್ರ ಮುಖಭಂಗ ​ ಮಹಾರಾಷ್ಟ್ರ: ಆಡಳಿತಾರೂಢ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟ ಮತ್ತೆ ಅಧಿಕಾರಕ್ಕೆ? ಆರೆಸ್ಸೆಸ್ ಮುಖ್ಯಸ್ಥ ಡಾ. ಭಾಗವತ್ ಡಿ. 7ರಂದು ಕಲ್ಲಡ್ಕಕ್ಕೆ: ಶ್ರೀರಾಮ ವಿದ್ಯಾಕೇಂದ್ರ ಕ್ರೀಡೋತ್ಸವದಲ್ಲಿ… ಬೆಂಗಳೂರು ಮತ್ತು ಚೆನ್ನೈಗೆ ಆಸ್ಟ್ರೇಲಿಯನ್ ಡಿಜಿಟೆಕ್ ಟ್ರೇಡ್ ಮಿಷನ್ ಭೇಟಿ

ಇತ್ತೀಚಿನ ಸುದ್ದಿ

ಅಸ್ಸಾಂ, ಮೇಘಾಲಯ ಭಾರಿ ಮಳೆ: ಮಂಗಳೂರು ಅಡಿಕೆ ಮಾರುಕಟ್ಟೆ ಮತ್ತೆ ಚೇತರಿಕೆ: ಏರಿಕೆಯತ್ತ ಮುಖ ಮಾಡಿದ ಒಕ್ಕಣ್ಣ!

21/07/2022, 10:43

ಮಂಗಳೂರು(reporterkarnataka.com):.ಅಡಿಕೆ ಮಾರುಕಟ್ಟೆ ಮತ್ತೆ ಚೇತರಿಸಿಕೊಂಡಿದೆ. ಕಳೆದ 2 ತಿಂಗಳಿನಿಂದ ಸ್ಥಿರವಾಗಿದ್ದ ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆ ಧಾರಣೆ ಏರಿಕೆಯತ್ತ ಮುಖ ಮಾಡಿದೆ. ಖಾಸಗಿ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ಕೆ.ಜಿ.ಗೆ 450 ರೂ.ಗಳ ಅಂಚಿಗೆ ತಲುಪಿದೆ.

ಕ್ಯಾಂಪ್ಕೋಗೆ ಹೋಲಿಸಿದರೆ ಹೊರ ಮಾರುಕಟ್ಟೆಯಲ್ಲಿ ಹೊಸ ಅಡಿಕೆಗೆ ಕೆ.ಜಿ.ಗೆ 7 ರೂ., ಹಳೆ ಅಡಿಕೆಗೆ 10 ರೂ.ಗಳಷ್ಟು ಅಧಿಕ ಇದ್ದು ಬೆಳೆಗಾರರು ಹೊರ ಮಾರುಕಟ್ಟೆಯತ್ತ ದೃಷ್ಟಿ ನೆಟ್ಟಿದ್ದಾರೆ.

ಕಳೆದ ಬಾರಿ ಹೊರ ಮಾರುಕಟ್ಟೆ ಧಾರಣೆಗೆ ಸರಿಸಾಟಿಯಾಗಿ ಅಡಿಕೆ ಖರೀದಿ ಸಹಕಾರಿ ಸಂಸ್ಥೆಗಳು ಕೂಡ ಧಾರಣೆ ನೀಡಿದ್ದವು. ಇದರಿಂದ ದರ ಏರಿಕೆಯ ವಿಚಾರದಲ್ಲಿ ಪೈಪೋಟಿ ನಡೆದಿತ್ತು.

ಕೆಲವು ದಿನಗಳ ಹಿಂದೆ ಕ್ಯಾಂಪ್ಕೋದಲ್ಲಿ ಹೊಸ ಅಡಿಕೆಯನ್ನು 430 ರೂ., ಹಳೆ ಅಡಿಕೆಯನ್ನು 520 ರೂ.ಗೆ ಖರೀದಿಸಲಾಗುತ್ತಿತ್ತು. ಇದೀಗ ಧಾರಣೆ ಕೊಂಚ ಏರಿದೆ. ಜು. 11ರಂದು ಪುತ್ತೂರು ಕ್ಯಾಂಪ್ಕೋದಲ್ಲಿ ಹೊಸದಕ್ಕೆ 435-450 ರೂ. ಇದ್ದರೆ ಹಳೆಯದಕ್ಕೆ 510-550 ರೂ., ಜು. 19ರಂದು ಹೊಸದಕ್ಕೆ 440 ರೂ., ಹಳೆಯದಕ್ಕೆ 565 ರೂ. ಇತ್ತು. ಬೆಳ್ಳಾರೆ ಹೊರ ಮಾರುಕಟ್ಟೆಯಲ್ಲಿ ಜು. 11ರಂದು ಹೊಸದಕ್ಕೆ 442 ರೂ. ಇದ್ದರೆ ಹಳೆಯದಕ್ಕೆ 560 ರೂ. ಇತ್ತು. ಜು. 19ರಂದು ಕ್ರಮವಾಗಿ 447 ರೂ. ಮತ್ತು 565 ರೂ.ಗಳಲ್ಲಿತ್ತು.ಧಾರಣೆ ಏರಿದರೂ ಬೇಡಿಕೆಗೆ ತಕ್ಕಷ್ಟು ಅಡಿಕೆ ಮಾರುಕಟ್ಟೆಗೆ ಬರುತ್ತಿಲ್ಲ.

ಅಸ್ಸಾಂ, ಮೇಘಾಲಯ ಸೇರಿದಂತೆ ಉತ್ತರದ ಭಾಗದಲ್ಲಿ ಭಾರೀ ಮಳೆಯ ಕಾರಣ ಅಡಿಕೆ ವಹಿವಾಟು ಕುಸಿತ ಕಂಡಿದ್ದು, ಮಾರುಕಟ್ಟೆಯು ದಕ್ಷಿಣ‌‌ ಭಾರತವನ್ನು ಅವಲಂಬಿ ಸಿರುವುದು ಕೂಡ ಬೇಡಿಕೆ ಹೆಚ್ಚಳಕ್ಕೆ ಕಾರಣ ಎಂದು ಹೇಳಲಾಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು