ಇತ್ತೀಚಿನ ಸುದ್ದಿ
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ‘ಉತ್ತಮ ವಿವಿಧೋದ್ದೇಶ ಸಹಕಾರಿ ಸಂಘ’ ವಿಶೇಷ ಪ್ರಶಸ್ತಿ
19/11/2024, 15:06
ಮಂಗಳೂರು(reporterkarnataka.com):71ನೇ ಅಖಿಲ ಭಾರತ ಸಹಕಾರ ಸಪ್ತಾಹ 2024 ಇದರ ಪ್ರಯುಕ್ತ ನ.16ರಂದು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನೇತ್ರತ್ವದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್, ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ, ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್, ಸಹಕಾರ ಇಲಾಖೆ ಹಾಗೂ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಎಲ್ಲಾ ಕೃಷಿ ಪತ್ತಿನ ಸಹಕಾರ ಸಂಘಗಳು, ಪಟ್ಟಣ ಸಹಕಾರ ಬ್ಯಾಂಕ್‌ಗಳು ಹಾಗೂ ಎಲ್ಲಾ ವಿಧದ ಸಹಕಾರ ಸಂಘಗಳ ಸಹಯೋಗದೊಂದಿಗೆ ಮಂಗಳೂರಿನಲ್ಲಿ ಆಯೋಜಿಸಿದ್ದ ರಾಜ್ಯಮಟ್ಟದ ಸಹಕಾರಿ ಸಪ್ತಾಹದ ಅಂಗವಾಗಿ ಉತ್ತಮ ಸಹಕಾರ ಸಂಘಗಳಿಗೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ಜರುಗಿತು.
ಕಾರ್ಯಕ್ರಮದಲ್ಲಿ ಸಹಕಾರ ಸಚಿವ ಕೆ. ಎನ್. ರಾಜಣ್ಣ , ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷರ ಜಿ.ಟಿ. ದೇವೇಗೌಡರು ಹಾಗೂ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರ ಗೌರವ ಉಪಸ್ಥಿತಿಯಲ್ಲಿ, ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕ ಲಕ್ಷ್ಮಣ ಸಂಗಪ್ಪ ಸವದಿ ಯವರು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ಸಹಕಾರ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಗೆ 2024ನೇ ಸಾಲಿನ “ಉತ್ತಮ ವಿವಿಧೋದ್ದೇಶ ಸಹಕಾರಿ ಸಂಘ” ಪ್ರಶಸ್ತಿಯನ್ನು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಅವರಿಗೆ ನೀಡಿ ಗೌರವಿಸಿದರು.
ಮುಖ್ಯ ಅತಿಥಿಗಳಾಗಿ ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಪರೀದ್ , ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಸಂಸದ ಕ್ಯಾಪ್ಟನ್ ಬೃಜೇಶ್ ಚೌಟ, ಶಾಸಕರಾದ ಡಾ. ಭರತ್ ಶೆಟ್ಟಿ ವೈ. ಯಶ್‌ಪಾಲ್ ಎ. ಸುವರ್ಣ, ಮಂಗಳೂರು ಮೇಯರ್ ಮನೋಜ್ ಕುಮಾರ್, ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷರ ಕೆ.ಪಿ. ಸುಚರಿತ ಶೆಟ್ಟಿ, ಮುಡಾ ಅಧ್ಯಕ್ಷ ಸದಾಶಿವ ಉಳ್ಳಾಲ್, ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಬೆಳ್ಳಿಪ್ಪಾಡಿ ಪ್ರಸಾದ್ ಕೌಶಲ್ ಶೆಟ್ಟಿ ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷರ ಬಿ.ಜಯಕರ ಶೆಟ್ಟಿ ಇಂದ್ರಾಳಿ, ಎಸ್‌ಸಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ವಿನಯ್ ಕುಮಾರ್ ಸೂರಿಂಜೆ, ಸಹಕಾರ ಸಂಘಗಳ ಅಪರ ಉಪನಿಬಂಧಕ ಕೆ.ಎಸ್. ನವೀನ್, ಎಚ್. ಬಾಲಶೇಖರ್, ಸಹಕಾರ ಮಾರಾಟ ಮಹಾ ಮಂಡಲದ ವ್ಯವಸ್ಥಾಪಕ ನಿರ್ದೇಶಕ ಗುರುಸ್ವಾಮಿ, ಮೈಸೂರು ಪ್ರಾಂತ ಸಹಕಾರ ಸಂಘಗಳ ಜಂಟಿ ನಿಬಂಧಕ ಪ್ರಸಾದ್ ರೆಡ್ಡಿ ಪಿ., ದ.ಕ ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕ ರಮೇಶ್ ಎಚ್.ಎನ್., ಉಡುಪಿ ಸಹಕಾರ ಸಂಘಗಳ ಉಪ ನಿಬಂಧಕಿಯಾದ ಲಾವಣ್ಯಾ ಕೆ . ಆರ್. ಎಸ್‌ಸಿಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಭಾಸ್ಕರ್ ಎಸ್. ಕೋಟ್ಯಾನ್, ಶಶಿಕುಮಾರ್ ರೈ ಬಾಲ್ಯೂಟ್ಟು, ರಾಜು ಪೂಜಾರಿ, ಮಹೇಶ್ ಹೆಗ್ಡೆ, ಅಶೋಕ್ ಕುಮಾರ್ ಶೆಟ್ಟಿ, ಎಸ್. ಬಿ. ಜಯರಾಮ ರೈ, ಮೋನಪ್ಪ ಶೆಟ್ಟಿ ಎಕ್ಕಾರು, ಕೆ. ಹರಿಶ್ಚಂದ್ರ, ಕೆ.ಜೈರಾಜ್ ಬಿ.ರೈ, ರಾಜೇಶ್ ರಾವ್, ಎಸ್.ಎನ್.ಮನ್ಮಥ, ಸಿಇಒ ಕೆ. ಗೋಪಾಲಕೃಷ್ಣ ಭಟ್ ಮೊದಲಾದವರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷರ ನೇಮಿರಾಜ್ ಪಿ., ನಿರ್ದೇಶಕರಾದ ಜಿ. ಪರಮೇಶ್ವರ ಪೂಜಾರಿ, ಆನಂದ ಎಸ್. ಕೊಂಡಾಣ, ರಮಾನಾಥ್ ಸನಿಲ್, ಗೋಪಾಲ್ ಎಂ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೌಮ್ಯ ವಿಜಯ್ ಹಾಗೂ ಸಲಹೆಗಾರ ಅಶೋಕ್ ಕುಮಾರ್ ಅವರು ಉಪಸ್ಥಿತರಿದ್ದರು.