7:12 AM Sunday5 - January 2025
ಬ್ರೇಕಿಂಗ್ ನ್ಯೂಸ್
ಬೆಂಗಳೂರು: ಬೀದಿ ಬದಿ ವ್ಯಾಪಾರ ಮಾಡಲು ಅವಕಾಶವಿರುವ ರಸ್ತೆಗಳನ್ನು ಗುರುತಿಸಲು ಸೂಚನೆ ಎನ್. ಆರ್. ಪುರ: ರಾಜ್ಯ ಹೆದ್ದಾರಿಯಲ್ಲಿ ಓಡಾಡಿದ ಕಾಡಾನೆ; ನಾಗರಿಕರಲ್ಲಿ ಹೆಚ್ಚಿದ ಆತಂಕ ದೀರ್ಘಾವಧಿ ಸಾಲ 137.85 ಕೋಟಿಗಳ ಅನುದಾನ ವಿನಿಯೋಗ: ರಾಜ್ಯ ಸಚಿವ ಸಂಪುಟ ಆಡಳಿತಾತ್ಮಕ… ರಾಜ್ಯದ 4 ಸಾರಿಗೆ ನಿಗಮಗಳಲ್ಲಿ ಶೇ.15ರಷ್ಟು ದರ ಹೆಚ್ಚಳ: ಸಚಿವ ಸಂಪುಟ ಅನುಮೋದನೆ ಮಂಗಳೂರು ಸಹಿತ ರಾಜ್ಯದ 6 ಸ್ಮಾರ್ಟ್‌ ಸಿಟಿ ಕಾಮಗಾರಿಗಳ ತನಿಖೆ: ಸಚಿವ ಬೈರತಿ… ಕ್ರೆಡಲ್ ನಿಂದ 40.53 ಕೋಟಿ ಲಾಭಾಂಶ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಹಸ್ತಾಂತರ ಬೆಂಗಳೂರು: ಬೈಕ್ ಶೋ ರೂಂನಲ್ಲಿ ಅಗ್ನಿ ಅನಾಹುತ: ಸುಟ್ಟು ಕರಕಲಾದ 60ಕ್ಕೂ ಹೆಚ್ಚು… ಮುಂದಿನ ವರ್ಷ ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಪ್ರಿಯಾಂಕ ಖರ್ಗೆ ರಾಜೀನಾಮೆ ನೀಡುವ ಪ್ರಶ್ನೆ… ಎಚ್.ಡಿ.ಕೋಟೆ ತಾಲೂಕು ಆಹಾರ ಸುರಕ್ಷತಾ ಅಧಿಕಾರಿಗಳ ದಿಢೀರ್ ಭೇಟಿ: ಪರಿಶೀಲನೆ

ಇತ್ತೀಚಿನ ಸುದ್ದಿ

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಮುಲ್ಕಿ ಶಾಖೆ: ಉಚಿತ ವೈದ್ಯಕೀಯ, ನೇತ್ರ ಮತ್ತು ದಂತ ತಪಾಸಣಾ ಶಿಬಿರ

11/11/2024, 19:41

ಮಂಗಳೂರು(reporterkarnataka.com): ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ(ನಿ.) ಮುಲ್ಕಿ ಶಾಖೆಯ ವಾರ್ಷಿಕೋತ್ಸವದ ಪ್ರಯುಕ್ತ ಉಚಿತ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ತಪಾಸಣೆ ಚಿಕಿತ್ಸಾ ಶಿಬಿರವು ಲಯನ್ಸ್ ಕ್ಲಬ್ ಮುಲ್ಕಿ ಎಂಜೆಎಂ ಲಿಯೋ ಕ್ಲಬ್ ಮುಲ್ಕಿ ಹಾಗೂ ಲಯನ್ಸ್ ಕ್ಲಬ್ ಬಪ್ಪನಾಡು ಇನ್ಸ್ಫಯರ್ ಇವರ ಜಂಟಿ ಸಹಯೋಗದೊಂದಿಗೆ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ದಿ ಕೇಂದ್ರ ಯೆನೆಪೋಯ ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯ, ದೇರಳಕಟ್ಟೆ ಹಾಗೂ ಸಮುದಾಯ ದಂತ ವಿಭಾಗ, ಇವರ ನುರಿತ ತಜ್ಞ ವೈದ್ಯರ ತಂಡದೊಂದಿಗೆ ಶಾಖೆಯ ಆವರಣದಲ್ಲಿ ಜರುಗಿತು.
ಕಾರ್ಯಕ್ರಮವನ್ನು ಮುಲ್ಕಿ ನಗರ ಪಂಚಾಯತ್ ಮತ್ತು ಬಪ್ಪನಾಡು ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಸತೀಶ್ ಅಂಚನ್‌ ಅವರು ಉದ್ಘಾಟಿಸಿ ಮಾತನಾಡಿ, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ವಿವಿಧ ಸಂಘ ಸಂಸ್ಥೆಗಳೊಂದಿಗೆ ಸೇರಿ ನಡೆಸುವ ಈ ಶಿಬಿರವು ಮುಲ್ಕಿ ಪರಿಸರದ ಜನರಿಗೆ ಆರೋಗ್ಯದ ಉತ್ತಮ ಸೇವೆ ನೀಡುವಂತಾಗಲಿ ಎಂದರು. ಸಮುದಾಯ ದಂತ ವಿಭಾಗ, ಯೆನೆಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ ದೇರಳಕಟ್ಟೆ ಇಲ್ಲಿನ ಮುಖ್ಯಸ್ಥರಾದ ಡಾ. ರೇಖಾ ಪಿ ಶೆಣೈ ಅವರು ಮಾತನಾಡಿ, ಆತ್ಮಶಕ್ತಿ ಸಹಕಾರಿ ಸಂಘದೊಂದಿಗೆ ನಿರಂತರ ಶಿಬಿರ ನಡೆಸುತ್ತಿದ್ದೇವೆ. ದಕ್ಷಿಣ ಕನ್ನಡ ಜಿಲ್ಲೆಯು ಹಲವಾರು ಆಸ್ಪತ್ರೆಯನ್ನು ಹೊಂದಿದ್ದರೂ ಸಹ ಇತಂಹ ಶಿಬಿರದಲ್ಲಿ ಶಿಬಿರಾರ್ಥಿಗಳು ಶಿಬಿರದ ಸದುಪಯೋಗ ಪಡೆದುಕೊಳ್ಳುತ್ತಿರುವುದು ತುಂಬಾ ಸಂತೋಷದ ವಿಷಯ, ಯಾವುದೇ ರೋಗವನ್ನು ಆರಂಭದಲ್ಲಿಯೇ ಪತ್ತೆ ಹಚ್ಚಿ ರೋಗವನ್ನು ಕಂಡುಕೊಂಡು ಚಿಕಿತ್ಸೆ ಪಡೆಯುವುದು ತುಂಬಾ ಉತ್ತಮ. ಜನರು ಕೆಲಸದ ಒತ್ತಡದ ಸಮಯದಲ್ಲಿ ತಮ್ಮ ಆರೋಗ್ಯದ ಕಾಳಜಿ ವಹಿಸದೇ ಇರುವುದರಿಂದ ಇಂತಹ ಶಿಬಿರವನ್ನು ರಜಾ ದಿನಗಳಲ್ಲಿ ಆಯೋಜಿಸುತ್ತಿರುವುದು ಜನರಿಗೆ ತುಂಬಾ ಉಪಯೋಗವಾಗುತ್ತಿದೆ ಎಂದು ಅವರು ನುಡಿದರು.
ಅತಿಥಿಯಾದ ಲಯನ್ಸ್ ಕ್ಲಬ್ ಬಪ್ಪನಾಡು ಇನ್ಸ್ಫಯರ್ ಇದರ ಪ್ರಾಂತ್ಯಾಧ್ಯಕ್ಷರಾದ ಲಯನ್ ವೆಂಕಟೇಶ ಹೆಬ್ಬಾರ್ ಅವರು ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ಇಂತಹ ಶಿಬಿರ ಆಯೋಜಿಸುತ್ತಿರುವುದು ತುಂಬಾ ಉಪಯುಕ್ತವಾಗಿದೆ. ಜನರ ಆಶೀರ್ವಾದದಿಂದಲೇ ಸಂಘವು ಒಟ್ಟು ೩೩ ಶಾಖೆಗಳನ್ನು ಹೊಂದಿದೆ, ಸಂಘದ ಅಧ್ಯಕ್ಷರು ಬ್ಯಾಂಕಿಂಗ್ ಮಾತ್ರವಲ್ಲದೇ ಜನರ ಆರೋಗ್ಯದ ಕಾಳಜಿ ವಹಿಸುತ್ತಿರುವುದು ತಂಬಾ ಸಂತೋಷದ ವಿಷಯ ಎಂದು ನುಡಿದರು.
ಅಧ್ಯಕ್ಷತೆಯನ್ನು ವಹಿಸಿದ್ದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್‌ರವರು ಮಾತನಾಡಿ, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಪ್ರತೀ ವರ್ಷ ಶಾಖೆಗಳ ವಾರ್ಷಿಕೋತ್ಸವದ ಸಂದರ್ಭದಲ್ಲಿ ಉಚಿತ ಆರೋಗ್ಯ ಶಿಬಿರ ನಡೆಸುತ್ತಿದ್ದು, ಇಂದು ಮುಲ್ಕಿ ಪರಿಸರದಲ್ಲಿ ಆಯೋಜಿಸುತ್ತಿರುವ ೭೬ನೇ ಆರೋಗ್ಯ ಶಿಬಿರವು ಇದಾಗಿದೆ. ಸಂಘವು ಪ್ರಾರಂಭವಾದ ನಂತರ ಗ್ರಾಮೀಣ ಪ್ರದೇಶದ ಜನರಿಗೆ ಉಪಯೋಗವಾಗುವಂತೆ ಉಚಿತ ಶಿಬಿರವನ್ನು ಆಯೋಜಿಸುತ್ತಾ ಬಂದಿದೆ. ಜನರ ಆರೋಗ್ಯ ಸರಿ ಇದ್ದರೆ ಮಾತ್ರ ಹಣವನ್ನು ಹೂಡಿಡಲು ಸಾಧ್ಯವಾಗುತ್ತದೆ. ಸಂಘವು ಸಾಮಾಜಿಕ ಬದ್ಧತೆಯೊಂದಿಗೆ ಪ್ರಾರಂಭವಾಗಿ ಕಡು ಬಡತನದಲ್ಲಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ , ಹಾಸ್ಟೆಲ್ ವ್ಯವಸ್ಥೆ, ಮನೆ ಪುನರ್ ನಿರ್ಮಾಣ, ಮತ್ತು ಬಸ್ ಸ್ಟಾಂಡ್ ವ್ಯವಸ್ಥೆಯನ್ನು ಕಲ್ಪಿಸಿ ಕೊಟ್ಟಿದೆ. ಈ ಸ್ಟಾಂಪಿAಗ್ ಸೇವೆಯೊಂದಿಗೆ ಪ್ರಾರಂಭವಾದ ಈ ಸಂಸ್ಥೆಯು ೨೦೨೩-೨೪ನೇ ಸಾಲಿನಲ್ಲಿ ಠೇವಣಿಯಲ್ಲಿ ಗುರಿ ಮೀರಿದ ಸಾಧನೆಯಿಂದ ಉತ್ತಮ ಲಾಭಗಳಿಸಿದೆ. ಇದು ಗ್ರಾಹಕರು ಇಟ್ಟ ಪ್ರೀತಿ ವಿಶ್ವಾಸದಿಂದ ಮತ್ತು ಸಾಲಮರುಪಾವತಿಯಲ್ಲಿ ಶೇ.೯೯ ವಸೂಲಾತಿಯಿಂದ ಮಾತ್ರ ಸಾಧ್ಯವಾಗಿದೆ. ಈಗಾಗಲೇ ಸಂಘವು ಸುಮಾರು ೧೬,೦೦೦ಕ್ಕೂ ಮಿಕ್ಕಿ ಶಿಬಿರಾರ್ಥಿಗಳಿಗೆ ಉಚಿತವಾಗಿ ಕನ್ನಡಕ ವಿತರಿಸಿದೆ. ಅಲ್ಲದೇ ೫೫೦ಕ್ಕೂ ಮಿಕ್ಕಿ ಶಿಬಿರಾರ್ಥಿಗಳಿಗೆ ಉಚಿತ ಕಣ್ಣಿನ ಪೊರೆಯ ಶಸ್ತçಚಿಕಿತ್ಸೆಯನ್ನು ಆಸ್ಪತ್ರೆಗಳ ಸಹಯೋಗದೊಂದಿಗೆ ಮಾಡಿಸಿದೆ. ಈ ಕಾರ್ಯಕ್ರಮವು ಬಡವರ್ಗದ ಜನರಿಗೆ ಮಾತ್ರವಲ್ಲದೇ ಶ್ರೀಮಂತ ವರ್ಗದ ಜನರಿಗೂ ಕೂಡ ತುಂಬಾ ಪ್ರಯೋಜನಕಾರಿಯಾಗಿದೆ. ಅದೇ ರೀತಿ ಇಂತಹ ಆರೋಗ್ಯ ಶಿಬಿರವನ್ನು ಏರ್ಪಡಿಸಲು ಸಹಕರಿಸುತ್ತಿರುವ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ, ಹಾಗೂ ಸಮುದಾಯ ದಂತ ವಿಭಾಗ ,ಯೆನೆಪೋಯ ದಂತ ಕಾಲೇಜು ಮತ್ತು ಆಸ್ಪತ್ರೆಯ ಆಡಳಿತ ವರ್ಗ, ವೈದ್ಯರು ಹಾಗೂ ಸಿಬ್ಬಂದಿ ವರ್ಗದವರಿಗೂ ಕೃತಜ್ಞತೆಯನ್ನು ಸಲ್ಲಿಸಿದರು. ಹಾಗೂ ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್ ನೋಂದಾವಣಿಯನ್ನು ಈ ಶಿಬಿರದಲ್ಲಿ ಮಾಡಲಾಗುತ್ತಿದ್ದು ಸಾರ್ವಜನಿಕರು ಇದರ ಸದುಪಯೋಗ ಪಡೆಯುವಂತೆ ತಿಳಿಸಿದರು.
ಕಾರ್ಯಕ್ರಮದಲ್ಲಿ ಲಯನ್ಸ್ ಕ್ಲಬ್ ಮುಲ್ಕಿ ಎಮ್.ಜೆ.ಎಫ್ ಲಿಯೋ ಕ್ಲಬ್ ಮುಲ್ಕಿ ಇದರ ಅಧ್ಯಕ್ಷರಾದ ಲಯನ್ ಪೌಲ್ ರಾಲ್ಫಿ ಡಿಕೋಸ್ತ ಮತ್ತು ಪ್ರಾಂತ್ಯಾಧ್ಯಕ್ಷರಾದ ಸುಜಿತ್ ಸಾಲಿಯಾನ್, ಲಯನ್ಸ್ ಕ್ಲಬ್ ಬಪ್ಪನಾಡು ಇನ್ಸ್ಫಯರ್ ಇದರ ಅಧ್ಯಕ್ಷರಾದ ಲಯನ್ ಬಿ ಶಿವಪ್ರಸಾದ್, ಮುಲ್ಕಿ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ವಾಮನ್ ಕೋಟ್ಯಾನ್ ನಡಿಕುದ್ರು, ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ದಿ ಕೇಂದ್ರ, ಯೆನೆಪೋಯ ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯ, ದೇರಳಕಟ್ಟೆ ಇಲ್ಲಿನ ವೈದ್ಯರಾದ ಡಾ. ಸಿರಾಸ್ ಹಾಗೂ ಸಾರ್ವಜನಿಕ ಸಂಪರ್ಕ ಅಧಿಕಾರಿ ಭರತ್, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನಿರ್ದೇಶಕರಾದ ರಮಾನಾಥ್ ಸನಿಲ್, ಗೋಪಾಲ್ ಎಮ್, ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೌಮ್ಯ ವಿಜಯ್ ಉಪಸ್ಥಿತರಿದ್ದರು.
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಹಿರಿಯ ಶಾಖಾಧಿಕಾರಿ ಸೌಮ್ಯಲತಾ ಸ್ವಾಗತಿಸಿ, ಶಾಖಾಧಿಕಾರಿ ಭಾಗ್ಯಶ್ರೀ ಧನ್ಯವಾದವಿತ್ತರು. ಕಾರ್ಯಕ್ರಮವನ್ನು ಹಿರಿಯ ಶಾಖಾಧಿಕಾರಿ ಸ್ವಾತಿ ಪ್ರದೀಪ್ ಮತ್ತು ರಾಜೇಶ್ ರವರು ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು