8:05 PM Friday30 - January 2026
ಬ್ರೇಕಿಂಗ್ ನ್ಯೂಸ್
ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ವಿ ಬಿ ಜಿ ರಾಮ್… 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ ಕನ್ನಡ ಭಾಷೆ ಎಂದರೆ ಹಲವು ಆಯಾಮಗಳ ಸಾಧ್ಯತೆ: ಪುರುಷೋತ್ತಮ ಬಿಳಿಮಲೆ 600ಕ್ಕೂ ಹೆಚ್ಚು ಜಿಟಿಸಿಸಿ ವಿದ್ಯಾರ್ಥಿಗಳಿಗೆ ಉದ್ಯೋಗ ನೀಡಲಿರುವ ರ‍್ಯಾಂಗ್‌ಸನ್ಸ್‌ ಏರೋಸ್ಪೇಸ್, ​​ಎಕ್ಸೈಡ್ ಎನರ್ಜಿ ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್

ಇತ್ತೀಚಿನ ಸುದ್ದಿ

ಅಥಣಿ: 4.80 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಕುಮಠಳ್ಳಿ ಚಾಲನೆ 

04/03/2022, 11:24

ರಾಹುಲ್ ಅಥಣಿ ಬೆಳಗಾವಿ

info.reporterkarnataka.com

ಬೆಳಗಾವಿ ಜಿಲ್ಲೆ ಅಥಣಿ ಶಾಸಕ ಮಹೇಶ್ ಕುಮಟಳ್ಳಿ ತಾಲೂಕಿನ ಬನ್ನೂರ್ ಸವದಿ ನಂದಗಾವ ಶೇಗುಣಸಿ ಸತ್ತಿ ಗ್ರಾಮಗಳಲ್ಲಿ ಸುಮಾರು 4 ಕೋಟಿ 80 ಲಕ್ಷ ರೂ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು,ಕ್ಷೇತ್ರದ ಅಭಿವೃದ್ಧಿಯಲ್ಲಿ ಯಾವುದೇ ಹಿಂಜರಿಕೆಯಿಲ್ಲ. ಇನ್ನೂ ಹತ್ತು ಹಲವಾರು ಅಭಿವೃದ್ಧಿ ಯೋಜನೆಗಳು ಮಾಡುವುದಾಗಿ ಭರವಸೆ ನೀಡಿದರು. ನೆರೆ ಸಂತ್ರಸ್ತರ ಮನೆ ಹಂಚಿಕೆಯಲ್ಲಿ ಅಲ್ಪ ದೋಷದ ಬಗ್ಗೆ ನನ್ನ ಗಮನಕ್ಕೆ ಬಂದಿದೆ ಅದನ್ನು ಕೂಡಲೇ ಸರಿಪಡಿಸಿ ತಕ್ಕ ಫಲಾನುಭವಿಗಳಿಗೆ ನ್ಯಾಯ ಕೊಡಿಸುವುದು ನಮ್ಮ ಧರ್ಮ. ಕೃಷ್ಣ ತೀರದ ನೆರೆಪೀಡಿತ ಸುಮಾರು 23 ಗ್ರಾಮಗಳ ಸವಳು ಜವಳಿನ ಅಭಿವೃದ್ಧಿ ಯೋಜನೆ ಹಾಗೂ ಬರಪೀಡಿತ ಭಾಗವಾದ ಕಕಮರಿ ಕೊಟ್ಟಲಗಿ ಏತನೀರಾವರಿ ಸುಮಾರು 948 ಕೋಟಿ ರೂಪಾಯಿ ಬೋರ್ಡ್ ಕ್ಲಿಯರನ್ಸ್ ಆಗಿದ್ದು ಅದನ್ನು ಕೂಡ ಬಹುಬೇಗನೆ ಮುಗಿಸಿಕೊಡುವ ಭರವಸೆ  ನೀಡಿದರು. ಮಹಾರಾಷ್ಟ್ರದಿಂದ ಬೇಸಿಗೆ ಕಾಲದಲ್ಲಿ ಕೃಷ್ಣಾನದಿಗೆ ಸುಮಾರು 4 ಟಿಎಂಸಿ ನೀರು ತರುವ ನಿರೀಕ್ಷೆಯಲ್ಲಿದ್ದೇವೆ ಎಂದು ಮಾಧ್ಯಮಕ್ಕೆ ಪ್ರತಿಕ್ರಿಯಿಸಿದರು ಇದೇ ಸಂದರ್ಭದಲ್ಲಿ ಬಿಜೆಪಿ ಯುವ ಮುಖಂಡರಾದ ವಿವೇಕ್ ನರಗೊಂಡ್ ಮಾತನಾಡಿ,ಶಾಸಕ ಮಹೇಶ್ ಕುಮಠಳ್ಳಿ ಅವರ ಕಾರ್ಯಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿ ಬರುವ ದಿನಮಾನಗಳಲ್ಲಿ ಇನ್ನು ಹೆಚ್ಚಿನ ಅಭಿವೃದ್ಧಿ ಯೋಜನೆಗಳ ನಿರೀಕ್ಷೆಯಲ್ಲಿದ್ದೇವೆ ಪೂರ್ಣಗೊಳಿಸುತ್ತಾರೆ ಎನ್ನುವ ಭರವಸೆಯೂ ಇದೆ ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು