6:59 PM Saturday13 - December 2025
ಬ್ರೇಕಿಂಗ್ ನ್ಯೂಸ್
ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ… ಕೆಪಿಟಿಸಿಎಲ್: 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ ಭಾರತದಲ್ಲಿ ಎಫ್ ಡಿಐ ಹೆಚ್ಚಳ: ಪ್ರಧಾನಿ ಮೋದಿಗೆ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ ಮೈಸೂರು ಅರಮನೆ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ: ವರಾಹ ಗೇಟ್ ಬಳಿ ಬ್ಯಾರಿಕೇಡ್… ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ; ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಮಧು… ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ: ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಭರವಸೆ

ಇತ್ತೀಚಿನ ಸುದ್ದಿ

ಅಥಣಿ: ಕಾಂಗ್ರೆಸ್ ನಿಂದ ಸತೀಶ್ ಜಾರಕಿಹೊಳಿ ಹುಟ್ಟುಹಬ್ಬ ಅಂಗವಾಗಿ ಕೊರೊನಾ ಸೇನಾನಿಗಳಿಗೆ ಊಟ

01/06/2021, 22:50

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ಬ್ಲಾಕ್  ಕಾಂಗ್ರೆಸ್ ವತಿಯಿಂದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರ ಹುಟ್ಟು ಹಬ್ಬದ ಪ್ರಯುಕ್ತ ಕೊರೊನಾ ವಾರಿಯರ್ ಗೆ ಊಟದ ವ್ಯವಸ್ಥೆ ಮಾಡಲಾಗಿತ್ತು.

ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ನಾಯಕ ಅನಿಲ್ ಸುಣದೋಳಿ,  ಈ ಲಾಕ್ಡೌನ್ ಸಂದರ್ಭದಲ್ಲಿ ಕೊರೊನಾ ವಾರಿಯರ್ಸ್

ನಮಗಾಗಿ ಹಗಲು-ರಾತ್ರಿಯೆನ್ನದೆ ಕರ್ತವ್ಯದಲ್ಲಿ ನಿರತರಾಗಿದ್ದಾರೆ. ಅವರ ಒಂದು ಶ್ರಮಕ್ಕೆ ಈ ಒಂದು ಕಾರ್ಯಕ್ರಮದ ಮೂಲಕ ಧನ್ಯವಾದವನ್ನು ಸಲ್ಲಿಸಲಾಗುವುದು ಎಂದರು

ಅಥಣಿ ಪಟ್ಟಣದ ಪೊಲೀಸ್ ಠಾಣೆ, ಸಮುದಾಯ ಆರೋಗ್ಯ ಕೇಂದ್ರ, ಪುರಸಭೆ ಕಚೇರಿ ಹಾಗೂ ಸ್ನೇಹ ಜ್ಯೋತಿ ಅಂಧ ವಿದ್ಯಾರ್ಥಿಗಳ ಶಾಲೆಗಳಿಗೆ ಕಾಂಗ್ರೆಸ್ ಮುಖಂಡ ಧರೇಪ್ಪಾ ಠಕ್ಕನ್ನವರ ಅವರಿಂದ ಕೊರೊನಾ ಸೇನಾನಿಗಳಿಗೆ ಉಪಹಾರದ ವ್ಯವಸ್ಥೆ ಮಾಡಲಾಗಿತು.

ಇದೇ ಸಂದರ್ಭದಲ್ಲಿ ಅಥಣಿ ಕಾಂಗ್ರೆಸ್ ಪಕ್ಷದ ಮುಖಂಡರಾದ ಅನಿಲ್ ಸುಣದೋಳಿ, ನಿಶಾಂತ್ ದಳವಾಯಿ, ರವಿ ಬಡಕಂಬಿ,  ಹರ್ಷದ್ ಗದ್ಯಾಳ , ಸಂಜು ಕಾಂಬಳೆ, ಅಕ್ಷಯ್ ಅಸ್ಕಿ , ವಿಜಯ್ ಮಯನ್ನವರ್,  ಸುನಿತಾ ಐಹೊಳೆ ಹಾಗೂ ಸಮಸ್ತ ಕಾಂಗ್ರೆಸ್ ಮುಖಂಡರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು