11:26 AM Monday8 - June 2026
ಬ್ರೇಕಿಂಗ್ ನ್ಯೂಸ್
ಮಳೆಗಾಲ ಎಫೆಕ್ಟ್: ಜೂನ್ 10ರಿಂದ ಕೊಡಗು ಜಿಲ್ಲೆಯಲ್ಲಿ ಬುಲೆಟ್ ಟ್ಯಾಂಕರ್ ಸಹಿತ ಭಾರೀ… ಸೈಟ್ ಇಲ್ಲದವರಿಗೆ ಉಚಿತ ಸೈಟ್ ಭಾಗ್ಯ: ಮುಖ್ಯಮಂತ್ರಿ ಡಿಕೆಶಿ ಮಹತ್ವದ ಘೋಷಣೆ Mangaluru | ನೂತನ ಆರೋಗ್ಯ ಸಚಿವ ಯು.ಟಿ.ಖಾದರ್ ಗೆ ಕಡಲನಗರಿಯಲ್ಲಿ ಭಾರೀ ಸ್ವಾಗತ Chikkamagaluru | ಅಧಿಕಾರಿಗಳ ನಿರ್ಲಕ್ಷ: ಸ್ವಂತ ಖರ್ಚಿನಲ್ಲಿ ರಸ್ತೆ ದುರಸ್ತಿಗೆ ಮುಂದಾದ ಕಡಿದಾಳು… ತೀರ್ಥಹಳ್ಳಿ ತಾಲೂಕಿನ ಫಾರಂ ಹೌಸ್ ನಲ್ಲಿ ಕಳ್ಳತನ: 1 ಲಕ್ಷಕ್ಕೂ ಹೆಚ್ಚು ಮೌಲ್ಯದ… Belagavi | ಅಥಣಿ: ಮಳೆ ಅಬ್ಬರಕ್ಕೆ ನೆಲಕ್ಕುರುಳಿದ ಬೃಹತ್‌ ಕಟ್ಟಡ; ತಪ್ಪಿದ ಭಾರೀ… ಸಿಇಟಿ ಫಲಿತಾಂಶ ಪ್ರಕಟ: ತನಿಷಾ ಕಾರ್ತಿಕ್‌ಗೆ ಇಂಜಿನಿಯರಿಂಗ್‌ನಲ್ಲಿ ಪ್ರಥಮ ರ‍್ಯಾಂಕ್ ಆನೆ ತುಳಿತಕ್ಕೆ ಪತ್ನಿ ಬಲಿ: ಐಪಿಎಸ್ ಅಧಿಕಾರಿ ಸುನಿಲ್ ಅಚ್ಚಯ್ಯಗೆ ಸಿಎಂ ಡಿ… ಮುಲಾಜಿಲ್ಲದೇ ಕ್ರಮ ಎಂದ ರಾಗಾ: ರಾಗವೇ ಬದಲಿಸಿ ‘ಐ ಆಯಮ್ ಹ್ಯಾಪಿ’ ಎಂದ… ಯಾವ ಟ್ರಬಲ್ ಶೂಟರೂ ಇಲ್ಲ; ಅಸ್ಸಾಂಗೆ ಹೋಗಿ ಯಾಕೆ ಟ್ರಬಲ್ ಶೂಟರ್ ಆಗ್ಲಿಲ್ಲ:…

ಇತ್ತೀಚಿನ ಸುದ್ದಿ

ಅಥಣಿ: ಪ್ರೌಢಶಾಲೆ ಬಾಲಕ ಮತ್ತು ಬಾಲಕಿಯರ ಜಿಲ್ಲಾಮಟ್ಟದ ಥ್ರೋ ಬಾಲ್ ಸ್ಪರ್ಧೆ: ಐಗಳಿ ಅಪ್ಪಯ್ಯ ಸ್ವಾಮಿ ಪ್ರೌಢಶಾಲೆಗೆ ಗೆಲುವು

02/10/2024, 13:03

ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ

info.reporterkarnataka@gmail.com

ಪ್ರೌಢಶಾಲೆ ಬಾಲಕ ಮತ್ತು ಬಾಲಕಿಯರ ಜಿಲ್ಲಾಮಟ್ಟದ
ಥ್ರೋ ಬಾಲ್ ಸ್ಪರ್ಧೆ ಅಥಣಿ ತಾಲೂಕಿನ ಹಲ್ಯಾಳ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಜರುಗಿತು.
ಸುಮಾರು 8 ತಾಲೂಕುಗಳಿಂದ ವಿದ್ಯಾರ್ಥಿಗಳು ಸ್ಪರ್ಧೆಗೆ ಆಗಮಿಸಿದ್ದರು. ಶಾಲೆಯಲ್ಲಿ ಶುದ್ಧ ಕುಡಿಯುವ ನೀರು ಹಾಗೂ ಉಪಹಾರದ ವ್ಯವಸ್ಥೆ ಮಾಡಲಾಗಿತ್ತು.
ವಿದ್ಯಾರ್ಥಿಗಳು ತುಂಬಾ ಉತ್ಸಾಹದಿಂದ ಕ್ರೀಡೆಯಲ್ಲಿ ಭಾಗವಹಿಸಿ ತಮ್ಮ ತಮ್ಮ ತಂಡಗಳಿಗೆ ಪ್ರೋತ್ಸಾಹಿಸಿದರು.
ಐಗಳಿ ಮತ್ತು ಮೂಡಲಗಿ ಶಾಲೆಯ ಕೊನೆಯ ರೋಚಕ ಪಂದ್ಯಾವಳಿಯಲ್ಲಿ ಐಗಳಿ ಅಪ್ಪಯ್ಯ ಸ್ವಾಮಿ ಸರ್ಕಾರಿ ಪ್ರೌಢಶಾಲೆ ಬಾಲಕಿಯರ ತಂಡವು ಜಯಶಾಲಿಯಾಯಿತು.
ಇದೇ ವೇಳೆ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕರಾದ
ಎಂ. ಆರ್. ಹಲಸಂಗಿ ಮಾತನಾಡಿ, ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಭಾಗವಹಿಸುವುದರಿಂದ ದೈಹಿಕವಾಗಿ, ಮಾನಸಿಕವಾಗಿ ಸದೃಢರಾಗುತ್ತಾರೆ. ಈ ದಿನ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗೆ ಒಳಪಡುವ 8 ತಾಲೂಕಿನ ಪ್ರೌಢಶಾಲಾ ವಿದ್ಯಾರ್ಥಿಗಳು ಇಂದಿನ ತ್ರೋಬಾಲ್ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದು ಇದರಲ್ಲಿ ಜಯಶಾಲಿಯಾದ ತಂಡಗಳು ರಾಜ್ಯಮಟ್ಟಕ್ಕೆ ಆಯ್ಕೆಯಾಗಲಿವೆ. ಈ ಜಿಲ್ಲಾ ಮಟ್ಟದ ಸಹಕರಿಸಿದ ಕ್ರೀಡೆಗೆ ಹಲ್ಯಾಳ ಗ್ರಾಮದ ಗ್ರಾಮಸ್ಥರಿಗೆ ಧನ್ಯವಾದ ಎಂದರು.


ಇದೇ ವೇಳೆ ಎಸ್ ಡಿಎಂಸಿ ಅಧ್ಯಕ್ಷರಾದ ದೀಪಕ್ ಮುರಗುಂಡಿ, ಚಿದಾನಂದ ಮುಕುಣಿ ಕಾಂಗ್ರೆಸ್ ಯುವ ಮುಖಂಡರು, ಮಂಜುನಾಥ ಹತ್ತಿ ಮುಖ್ಯೋಪಾಧ್ಯರು ಪ್ರಾಚಾರ್ಯರು ಜಿ ಆರ್ ಎಂ ರಾಣಘಟ್ರ ಮುಖ್ಯ ಉಪಾಧ್ಯಾಯರು ಎಸ್. ಎಸ್. ಬಳ್ಳೊಳ್ಳಿ, ಎಸ್ .ಎಂ‌.ಜನಗೌಡ, ಎಸ್. ಎಚ್. ಕೊರಬು ದೈಹಿಕ ಶಿಕ್ಷಕರು ಆರ್ ಟಿ ಬಾಗಿ, ಸರ್ಕಾರಿ ಪ್ರೌಢಶಾಲೆ ಹಲ್ಯಾಳ ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕಿಯರು ವಿಧ್ಯಾರ್ಥಿಗಳು, ಹಲ್ಯಾಳದ ಗ್ರಾಮಸ್ಥರು ಈ ಕ್ರೀಡಾಕೂಟದಲ್ಲಿ ಭಾಗವಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು