2:40 PM Sunday14 - September 2025
ಬ್ರೇಕಿಂಗ್ ನ್ಯೂಸ್
Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ ಕರಾವಳಿಯಲ್ಲಿ ಸಂಭ್ರಮದ ಮೊಂತಿ ಹಬ್ಬ: ಚರ್ಚ್ ಗಳಲ್ಲಿ ವಿಶೇಷ ಬಲಿಪೂಜೆ; ತೆನೆ ವಿತರಣೆ ಮೈಸೂರು ದಸರಾ: ಗೋಲ್ಡ್​ ಕಾರ್ಡ್​; ಟಿಕೆಟ್​ ದರ ಎಷ್ಟು? ಖರೀದಿ ಹೇಗೆ? ಇಲ್ಲಿದೆ… Kodagu | ಮಡಿಕೇರಿ: ಮಾಂದಲಪಟ್ಟಿಗೆಯಲ್ಲಿ ಪ್ರವಾಸಿಗನ ಮೇಲೆ ಜೀಪ್ ಚಾಲಕ ಹಲ್ಲೆ

ಇತ್ತೀಚಿನ ಸುದ್ದಿ

ಅಥಣಿ: ಕೃಷ್ಣಾ ನದಿ ಪ್ರವಾಹ ಸಂತ್ರಸ್ತರಿಗೆ ಈಗ ಮೊಸಳೆ, ವಿಷ ಜಂತುಗಳ ಕಾಟ: ಇನ್ನೂ ಕೈಗೆಟಕದ ಪರಿಹಾರದ ಬಿಡಿಗಾಸು !

15/10/2021, 18:23

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ತಾಲೂಕಿನ ಪ್ರವಾಹ ಪೀಡಿತ ಗ್ರಾಮಗಳಿಗೆ ಸದ್ಯ ಬೃಹದಾಕಾರದ ಮೊಸಳೆಗಳು ಬರುತ್ತಿದ್ದು, ಈ ಮೊದಲು ಜೀವ ಭಯದಿಂದ ಕೃಷ್ಣಾ ನದಿಯ ಪ್ರವಾಹದ ವೇಳೆ ತಮ್ಮ ಮನೆಗಳನ್ನು ತೊರೆದಿದ್ದ ಸಂತ್ರಸ್ತರಿಗೆ ಮತ್ತೆ  ಆತಂಕದ ಪರಿಸ್ಥಿತಿ ಎದುರಾಗಿದೆ.

ಹಲ್ಯಾಳ ಗ್ರಾಮದ ಸೇತುವೆಯ ಮೇಲೆ ನಿತ್ಯವೂ ಸಾವಿರಾರು ವಾಹನಗಳು ಓಡಾಡುತ್ತಿದ್ದರೂ ಕೂಡ ಹದಿನೈದು ಅಡಿಯಷ್ಟು ಉದ್ದದ ಮೊಸಳೆ ಜತ್ತ ಜಾಂಬೋಟಿ ಹೆದ್ದಾರಿಯಲ್ಲಿ ಪತ್ತೆಯಾಗಿತ್ತು.

ಇದರಿಂದ ಭಯಗೊಂಡ ವಾಹನ ಸವಾರರು ಕೆಲಹೊತ್ತು ಸಂಚಾರ ಸ್ಥಗಿತಗೊಳಿಸಿದ್ದರು.

ಮೊಸಳೆ ರಸ್ತೆ ದಾಟಿದ ಬಳಿಕ ನಿಟ್ಟುಸಿರು ಬಿಟ್ಟಿದ್ದಾರೆ. ಇನ್ನು ಪರಿಹಾರ ವಿಳಂಬವಾಗಿದ್ದು ಬೀಳುವ ಸ್ಥಿತಿಯಲ್ಲಿ ಇರುವ ಮನೆಗಳಲ್ಲೆ ಸಂತ್ರಸ್ತರು ಜೀವ ಕೈಯಲ್ಲಿ ಹಿಡಿದುಕೊಂಡು ಬದುಕು ಸಾಗಿಸುತ್ತಿದ್ದಾರೆ.


ಕೃಷ್ಣಾ ನದಿಯಲ್ಲಿ  ನೀರಿನ ಇಳಿಮುಖವಾಗಿದ್ದರೂ ಕೂಡ ಆಗಾಗ ಕಾಣಿಸಿಕೊಳ್ಳುತ್ತಿರುವ ವಿಷ ಜಂತುಗಳು ಮತ್ತು ಬೃಹದಾಕಾರದ ಮೊಸಳೆಗಳಿಂದಾಗಿ ಪ್ರವಾಹ ಸಂತ್ರಸ್ತರು ರಾತ್ರಿ ನಿದ್ದೆ ಇಲ್ಲದೆ ದಿನ ಕಳೆಯುವಂತಾಗಿದೆ. ಸರಕಾರ ತಕ್ಷಣ ಎಚ್ಚೆತ್ತುಕೊಳ್ಳುವ ಅಗತ್ಯವಿದೆ.

ಇತ್ತೀಚಿನ ಸುದ್ದಿ

ಜಾಹೀರಾತು