10:16 PM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಅಥಣಿ: ಕೃಷ್ಣಾನದಿ ಪ್ರವಾಹ ಪೀಡಿತ ಗ್ರಾಮಗಳಿಗೆ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಭೇಟಿ, ಪರಿಶೀಲನೆ 

08/08/2021, 13:52

ರಾಹುಲ್ ಅಥಣಿ ಬೆಳಗಾವಿ
info.reporterkarnataka@gmail.com

ಅಥಣಿ ತಾಲೂಕಿನ ಕೃಷ್ಣಾನದಿ ಪ್ರವಾಹ ಪೀಡಿತ ಗ್ರಾಮಗಳಿಗೆ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ವೇಳೆ  ಮಾಧ್ಯಮ ಜತೆ ಮಾತನಾಡಿದ ಅವರು, ಮಾಜಿ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರು ಅಥಣಿ ಭಾಗಕ್ಕೆ ಮಂಜೂರು ಮಾಡಿದ ನೀರಾವರಿ ಯೋಜನೆಗಳ ಬಗ್ಗೆ ನಾನು ಬೆಂಗಳೂರಿಗೆ ಹೊಗಿ ಪರಿಶೀಲನೆ ಮಾಡುತ್ತೇನೆಂದರು.

ಸಂಪುಟ ಖಾತೆ ಹಂಚಿಕೆ ಬಗ್ಗೆ ಕೆಲವು ಸಚಿವರು ಬಹಿರಂಗವಾಗಿ ಅಸಮಾಧಾನ ಹೊರಹಾಕಿರುವ ಕುರಿತಂತೆ ಪ್ರತಿಕ್ರಿಯಿಸಿ, ಸಚಿವರಲ್ಲಿ ಯಾವುದೇ ಅಸಮಾಧಾನ ಇಲ್ಲ ಎಂದು ಹೇಳಿದರು.

ಮಹಾರಾಷ್ಟ್ರದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಗಡಿ ಗ್ರಾಮಗಳು ಹಾಗೂ ಚೆಕ್​ಫೋಸ್ಟ್​ಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಕೋವಿಡ್​ ಮೂರನೇ ಅಲೆ ಹಿನ್ನೆಲೆಯಲ್ಲಿ ‌ಕೊರೊನಾ ಮುಂಜಾಗ್ರತಾ ಕ್ರಮಗಳನ್ನು ಸರ್ಕಾರ ಈಗಾಗಲೇ ಅನುಸರಿಸುತ್ತಿದೆ ಎಂದು ತಿಳಿಸಿದರು.ಈ ಸಂದರ್ಭದಲ್ಲಿ ಸಚಿವರು ನೆರೆ ಬಾಧಿತ ಗ್ರಾಮಗಳಿಗೆ ಶಾಶ್ವತ ಪರಿಹಾರ ಹಾಗೂ ಯಾರೂ ಪರಿಹಾರದಿಂದ ವಂಚಿತರಾಗದಂತೆ ಸರಿಯಾಗಿ ಕಾರ್ಯ ನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಈ ವೇಳೆ ಮಾಜಿ ಡಿಸಿಎಂ ಲಕ್ಷ್ಮಣ ಸವದಿ,ಚಿಕ್ಕೋಡ ಸಂಸದ ಅಣ್ಣಾಸಾಹೇಬ ಜೋಲ್ಲೆ ಸೇರಿದಂತೆ ಮುಖಂಡರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು