ಇತ್ತೀಚಿನ ಸುದ್ದಿ
ಅಥಣಿ: ಶಾಲೆ ಬಸ್ ಹಾಗೂ ಟ್ರಕ್ ನಡುವೆ ಅಪಘಾತ; ಇಬ್ಬರೂ ಚಾಲಕರು ಮೃತ್ಯು
21/08/2022, 17:59
ರಾಹುಲ್ ಅಥಣಿ ಬೆಳಗಾವಿ
info.reporterkarnataka@gmail.com
ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಹೊರವಲಯದ ಮೀರಜ್ ರಸ್ತೆಯಲ್ಲಿ ಶಾಲೆ ಬಸ್ ಹಾಗೂ ಟ್ರಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಎರಡೂ ವಾಹನಗಳ ಚಾಲಕರು ಮೃತಪಟ್ಟಿದ್ದಾರೆ.
ಬಣಜವಾಡ ಶಿಕ್ಷಣ ಸಂಸ್ಥೆಗೆ ಸೇರಿದ ಶಾಲೆ ವಾಹನ ಹಾಗೂ ಟ್ರಕ್ ನಡುವೆ ಅಪಘಾತ ನಡೆದಿತ್ತು. ಎರಡೂ ವಾಹನಗಳು ಮುಖಾಮುಖಿ ಡಿಕ್ಕಿಯ ತೀವ್ರತೆಗೆ ಇಬ್ಬರು ಚಾಲಕರು ಸ್ಥಳದಲ್ಲೇ ಸಾವನ್ನಪ್ಪಿದರು. 10ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಂಭೀರ ಗಾಯಗೊಂಡಿದ್ದಾರೆ.



ಗಾಯಾಳು ವಿದ್ಯಾರ್ಥಿಗಳನ್ನು ಸ್ಥಳಿಯ ಪಟ್ಟಣದ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾಲೇಜನಿಂದ ಅನತಿ ದೂರದಲ್ಲಿ ಈ ಅಪಘಾತ ಸಂಭವಿಸಿದೆ.














