1:52 PM Monday7 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಅಥಣಿಯ ಹಲ್ಯಾಳ: ವಿವಿಧ ಅಭಿವೃದ್ಧಿ ಕಾಮಗಾರಿಗೆ ಶಾಸಕ ಮಹೇಶ್ ಕುಮಟಳ್ಳಿ ಚಾಲನೆ

01/02/2023, 22:08

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ತಾಲೂಕಿನ ಹಲ್ಯಾಳ ಗ್ರಾಮದ ಬಹುದಿನಗಳ ಬೇಡಿಕೆಯಾಗಿದ್ದ ಹಲ್ಯಾಳ ಗ್ರಾಮದಿಂದ ರೆಡ್ಡರಹಟ್ಟಿ ಗ್ರಾಮದವರೆಗೆ ರಸ್ತೆ ಅಭಿವೃದ್ಧಿ ಕಾಮಗಾರಿ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗೆ ಶಾಸಕ ಮಹೇಶ್ ಕುಮಠಳ್ಳಿ ಬುಧವಾರ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಿದರು.
ಗ್ರಾಮದ ಬಿಜೆಪಿ ಯುವ ಮುಖಂಡರಾದ ಸಂಗಮೇಶ್ ಇಂಗಳಿ ಅವರ ಸತತ ಪ್ರಯತ್ನದಿಂದ ಗ್ರಾಮದಲ್ಲಿ ಹಲವಾರು ಕಾಮಗಾರಿಗಳನ್ನು ಅನುಷ್ಠಾನಗೊಳಿಸಿ ಗ್ರಾಮದ ಅಭಿವೃದ್ಧಿಗೆ ಬಹು ಮುಖ್ಯ ಪಾತ್ರ ವಹಿಸಿದ್ದಾರೆ.

ಈ ವೇಳೆ ಮಾತನಾಡಿದ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರೂ ಆಗಿರುವ ಅಥಣಿ ಶಾಸಕ ಮಹೇಶ್ ಕುಮಟಳ್ಳಿ ಅವರು ಹಲ್ಯಾಳ ಗ್ರಾಮದಲ್ಲಿ ಎಲ್ಲಾ ಪ್ರಮುಖ ಕಾಮಗಾರಿಗಳನ್ನು ಕಾರ್ಯಗತಿಗೆ ತರಲಾಗಿದೆ. ಬಹುದಿನಗಳಿಂದ ಗ್ರಾಮಕ್ಕೆ ಒಂದು ಪದವಿಪೂರ್ವ ಮಹಾವಿದ್ಯಾಲಯದ ಅವಶ್ಯಕತೆ ಇದೆ ಎಂದು ಮಾಹಿತಿ ಇದ್ದು ಈಗಾಗಲೇ 11 ಕಾಲೇಜುಗಳ ಮುಂಜರಾತಿಗೆ ಸರಕಾರಕ್ಕೆ ಮನವಿಯನ್ನ ಸಲ್ಲಿಸಿದ್ದೇನೆ. ಮುಂಬರುವ ದಿನಗಳಲ್ಲಿ ಹಲ್ಯಾಳ ಗ್ರಾಮಕ್ಕೆ ಗ್ರಾಮಕ್ಕೆ ಪದವಿ ಪೂರ್ವ ಕಾಲೇಜು ಮಂಜೂರು ಮಾಡಿಕೊಡಲಾಗುವುದೆಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ಮುದಕಣ್ಣ ಸೇಗುಣಿಸಿ, ಊರಿನ ಪ್ರಮುಖರು ಕುಮಾರಗೌಡ ಪಾಟೀಲ, ಸುರೇಶ್ ವಾಡೆದ, ರಾವಸಾಬ ಪಾಟೀಲ, ದೀಪಕ್ ಮುರಗುಂಡಿ, ಸಿದ್ದಪ್ಪ ಲೋಕುರ ರಮೇಶ್ ಗುಮಚಿ, ಅಣ್ಣಪ್ಪ ಬಾಗಿ, ಮಾಂತೇಶ ಇಂಗಳಿ, ಸಂತೋಷ್ ಕಾಂಬಳೆ ರಾಹುಲ್ ಮಾದರ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು