1:57 AM Wednesday5 - November 2025
ಬ್ರೇಕಿಂಗ್ ನ್ಯೂಸ್
Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ

ಇತ್ತೀಚಿನ ಸುದ್ದಿ

ಅಥಣಿಯ ಯುವ ಪ್ರೇಮಿಗಳು ಆತ್ಮಹತ್ಯೆ; ವಿಜಯಪುರದ ನಿಡೋಣಿಯಲ್ಲಿ ನೇಣಿಗೆ ಕೊರಳೊಡ್ಡಿ ಸಾವಿಗೆ ಶರಣು

02/08/2021, 16:39

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಬಿಜಾಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ನಿಡೋಣಿ ಕೇಂದ್ರದಲ್ಲಿ ಇಬ್ಬರು ಪ್ರೇಮಿಗಳು ಜತೆಯಾಗಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ನಡೆದಿದೆ.


ಅಥಣಿ ತಾಲೂಕಿನ ಬಡಚಿ ಗ್ರಾಮದ ಸುನಿಲ್ ಮಾಯಪ್ಪ ಪೂಜಾರಿ( 21) ಹಾಗೂ ಕಟಗೇರಿ ಗ್ರಾಮದ ಸಿಲವ್ವ ಪದ್ಮನ್ನ್ ಹಬಗುಂಡ್ಡಿ( 24) ಆತ್ಮಹತ್ಯೆ ಶರಣಾದ ಯುವ ಜೋಡಿಗಳು ಎಂದು ಗುರುತಿಸಲಾಗಿದೆ.

ಸಿಲವ್ವಗೆ 8 ವರ್ಷದ ಹಿಂದೆ ವಿವಾಹವಾಗಿತ್ತು.ಮೂವರು ಮಕ್ಕಳು ಕೂಡ ಇದ್ದಾರೆ. ಇವರಿಬ್ಬರುಬಿಜಾಪುರ ಬಬಲೇಶ್ವರದ ನಿಡೋಣಿಗೆ ಬೈಕ್ ನಲ್ಲಿ
ತೆರಳಿ ಅಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನಾ ಸ್ಥಳದಲ್ಲಿ ಬೈಕ್ ಕೂಡ ಪತ್ತೆಯಾಗಿದೆ.

ಎರಡು ವರ್ಷಗಳಿಂದ ಇವರಿಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು ಎಂದು ತಿಳಿದು ಬಂದಿದೆ.


ಬಬಲೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು