9:01 PM Saturday7 - March 2026
ಬ್ರೇಕಿಂಗ್ ನ್ಯೂಸ್
Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ 1,000 ಕೋಟಿ ವೆಚ್ಚದ ‘ಕಲ್ಯಾಣ ಪಥ’ ಯೋಜನೆಡಿ ರಸ್ತೆ ಅಭಿವೃದ್ಧಿ:ಮುಖ್ಯಮಂತ್ರಿ ರಾಜ್ಯ ಬಜೆಟ್ | ಮೈಸೂರು ರಾಜ್ಯದ 2ನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ

ಇತ್ತೀಚಿನ ಸುದ್ದಿ

ಅಥಣಿಯಲ್ಲಿ ಕಾಂಗ್ರೆಸ್ ಬೃಹತ್ ಶಕ್ತಿ ಪ್ರದರ್ಶನ: ಲಕ್ಷ್ಮಣ ಸವದಿ ನಾಮಪತ್ರಕ್ಕೆ ಜನಸಾಗರ; ಟ್ರಾಫಿಕ್ ಜಾಮ್

18/04/2023, 17:17

ರಾಹುಲ್ ಅಥಣಿ ಬೆಳಗಾವಿ

info.reporterlarmataka@gmai.com

ಅಥಣಿ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ ಸವದಿ ಮಂಗಳವಾರ ಭಾರೀ ಜನಸ್ತೋಮ ದೊಂದಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದರು.
ಅಥಣಿ ತಹಸೀಲ್ದಾರ್ ಕಚೇರಿಗೆ ತೆರಳಿ ಸವದಿ ನಾಮಪತ್ರ ಸಲ್ಲಿಕೆ ಮಾಡಿದರು. ಲಕ್ಷ್ಮಣ್ ಸವದಿ ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ನಿರೀಕ್ಷೆಗೂ ಮೀರಿ ಜನಸಾಗರ ಹರಿದು ಬಂದಿತ್ತು. ರಸ್ತೆ ಉದ್ದಕ್ಕೂ ಜನ ಜಮಾವಣೆಗೊಂಡು ಅಥಣಿಯಲ್ಲಿ ಫುಲ್ ಟ್ರಾಫಿಕ್ ಜಾಮ್ ಆಗಿ ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಯಿತು.
ಸವದಿ ಅವರ ನಿವಾಸದಿಂದ ತಹಸೀಲ್ದಾರ್ ಕಚೇರಿವರೆಗೂ ಸಾಗರರೂಪದಲ್ಲಿ ಜನರು ಹರಿದು ಬಂದರು. ಪಾದಯಾತ್ರೆ ಮೂಲಕ ನಾಮಪತ್ರ ಸಲ್ಲಿಕೆ ಸ್ಥಳಕ್ಕೆ ಬರಲಾಯಿತು.


ಬೆಳಗಾವಿ ಜಿಲ್ಲೆಯಲ್ಲೇ ಸವದಿ ಅವರ ನಾಮಪತ್ರ ಸಲ್ಲಿಕೆಗೆ ಜನರು ಸೇರಿದ್ದಾರೆ ಎಂಬ ಮಾತು ಕೇಳಿ ಬರುತ್ತಿದೆ.
ನಾಮಪತ್ರ ಸಲ್ಲಿಕೆ ನಂತರ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಸವದಿ ಅವರು, ಆರೆಸ್ಸೆಸ್ ನವರು ಗುಪ್ತವಾಗಿ ನನಗೆ ಮಾತದಾನ ಮಾಡ್ತಾರೆ. ಬಹಳ ಅಂತರದಿಂದ ಗೆಲ್ಲುತ್ತೇನೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು