9:30 AM Friday10 - January 2025
ಬ್ರೇಕಿಂಗ್ ನ್ಯೂಸ್
ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರಕಾರಿ ಬಸ್: ಪ್ರಯಾಣಿಕರಲ್ಲಿ ಆತಂಕ ಬಳ್ಳಾರಿಯಲ್ಲಿ ಜೀನ್ಸ್ ಪಾರ್ಕ್ ಸ್ಥಾಪನೆ, ರಾಹುಲ್ ಗಾಂಧಿ ಕೊಟ್ಟಿದ್ದ ಭರವಸೆ ಸಾಕಾರ: ಸಚಿವ… ನಿಮ್ಹಾನ್ಸ್‌ನಲ್ಲಿ ಕರ್ನಾಟಕ ಆಡಳಿತ ಸೇವೆಯ ಅಧಿಕಾರಿಯ ನೇಮಕಾತಿಗೆ ಕ್ರಮ ಕೈಗೊಳ್ಳಿ: ಮುಖ್ಯಮಂತ್ರಿ ಸೂಚನೆ ದೇಸಿ ತಿನಿಸಿನ ಬೇಡಿಕೆ ಹೆಚ್ಚಸಲು ಕ್ರಮ: ಸಚಿವ ಎನ್. ಚಲುವರಾಯಸ್ವಾಮಿ ನಂಜನಗೂಡು: ಶಿವಶರಣ ಒಕ್ಕಲಿಗರ ಮುದ್ದಣನವರ ಪ್ರಪ್ರಥಮ ಜಯಂತಿ ಆಚರಣೆ ಬಳ್ಳಾರಿ: ಎಲ್ಲ ರೈಲುಗಳ ಆರಂಭಕ್ಕಾಗಿ ರಾಜ್ಯ ರೈಲ್ವೆ ಕ್ರಿಯಾ ಸಮಿತಿಯಿಂದ ಒಂದು ತಿಂಗಳ… ಎಂಎಸ್‌ ಐಎಲ್‌ ಟೂರ್‌ ಪ್ಯಾಕೇಜ್‌ ಗೆ ಸಚಿವ ಎಂ. ಬಿ. ಪಾಟೀಲ್ ಚಾಲನೆ ಜ.10-12: ಸೌತ್ ಏಷ್ಯಾ ಮಾಸ್ಟರ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್-2025; ದೇಶ – ವಿದೇಶದ 2… ದೇಶದ ವೈವಿಧ್ಯತೆ, ಸೌಹಾರ್ದತೆ ಉಳಿಸಿಕೊಳ್ಳುವ ಮೂಲಕ ಆಂತರಿಕವಾಗಿ ಸಶಕ್ತವಾಗಬೇಕಿದೆ: ಧರ್ಮಸ್ಥಳದಲ್ಲಿ ಉಪ ರಾಷ್ಟ್ರಪತಿ… 60% ಕಮೀಷನ್; ನಿಮ್ಮ ಲೂಟಿ ಸಾಕ್ಷಿಗುಡ್ಡೆ ಇಲ್ಲಿದೆ ನೋಡಿ: ಸಿಎಂಗೆ ಕೇಂದ್ರ ಸಚಿವ…

ಇತ್ತೀಚಿನ ಸುದ್ದಿ

ಅತಿಥಿ ಉಪನ್ಯಾಸಕರ ಸೇವಾ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ ಇಂದಿನಿಂದ ತರಗತಿ ಬಹಿಷ್ಕರಿಸಲು ಕರೆ

06/12/2023, 12:34

ಮಂಗಳೂರು(reporterkarnataka.com): ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರು ಸೇವಾ ಭದ್ರತೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯವ್ಯಾಪಿ ತರಗತಿ ಬಹಿಷ್ಕರಿಸಿ, ಪ್ರತಿಭಟಿಸುತ್ತಿದ್ದು, ಇದನ್ನು ಬೆಂಬಲಿಸಿ ದ.ಕ., ಉಡುಪಿ ಜಿಲ್ಲೆಯ ಎಲ್ಲ ಸರ್ಕಾರಿ ಕಾಲೇಜುಗಳಲ್ಲಿ ಡಿ. 6ರಿಂದ ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸಲು ರಾಜ್ಯ ಕಾರ್ಯದರ್ಶಿ ಪ್ರಭಾಕರ ಆಚಾರ್ಯ, ದಕ ಜಿಲ್ಲಾ ಅಧ್ಯಕ್ಷ ಧೀರಜ್ ಕುಮಾರ್, ಪ್ರಧಾನ ಕಾರ್ಯದರ್ಶಿ ಮಹಾಂತೇಶ್ ಪ್ರಕಟಣೆಯಲ್ಲಿ ಕರೆ ನೀಡಿದ್ದಾರೆ.
ಸರ್ಕಾರದ ಸಿಬ್ಬಂದಿ ಸೇವಾ ನಿಯಮಾವಳಿಯಂತೆ ಅತಿಥಿ ಉಪನ್ಯಾಸಕರ ನೇಮಕಾತಿಯನ್ನು ಸಕ್ರಮಾತಿಗೊಳಿಸುವುದು, ಸಹಜ ನೌಕರನಿಗೆ ಸಿಗುವ ಎಲ್ಲಾ ಸೌಲಭ್ಯಗಳನ್ನು ನೀಡುವುದು. ಹಾಗೂ ಮಂಗಳೂರು ವಿವಿ ವ್ಯಾಪ್ತಿಯ ಎಲ್ಲ ಅತಿಥಿ ಉಪನ್ಯಾಸಕರಿಗೆ ಕಡಿಮೆ ಅವಧಿಯಲ್ಲಿ ನಿರ್ವಹಿಸಿರುವ ಹೆಚ್ಚುವರಿ ಕಾರ್ಯಭಾರಕ್ಕೆ ಹೆಚ್ಚುವರಿ ವೇತನವನ್ನು ನೀಡಬೇಕು ಎಂಬ ಬೇಡಿಕೆಯೊಂದಿಗೆ ಪ್ರತಿಭಟನೆಯನ್ನು ನಡೆಸಲಾಗುವುದು.
ಈ ಶಾಂತಿಯುತ ಪ್ರತಿಭಟನೆಗೆ ಸರಕಾರ ಸ್ಪಂದಿಸಿ ಅತಿಥಿ ಉಪನ್ಯಾಸಕರ ಮಾನವೀಯ ಬೇಡಿಕೆಗಳನ್ನು ಪರಿಗಣಿಸಬೇಕು. ಇಲ್ಲವಾದಲ್ಲಿ ಪ್ರತಿಭಟನೆಯನ್ನು ತೀವ್ರಗೊಳಿಸಬೇಕಾಗುತ್ತದೆ. ಸರಕಾರ ಡಿ.7ರ ಒಳಗೆ ಸೂಕ್ತ ಸ್ಪಂದನೆಯನ್ನು ನೀಡದೇ ಇದ್ದಲ್ಲಿ ತರಗತಿ ಬಹಿಷ್ಕಾರದೊಂದಿಗೆ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ತೀವ್ರ ಸ್ವರೂಪದ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗುವುದು ಎಂದು ಪ್ರಕಟಣೆಯಲ್ಲಿ ಎಚ್ಚರಿಕೆ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು