11:09 AM Friday9 - May 2025
ಬ್ರೇಕಿಂಗ್ ನ್ಯೂಸ್
Karnataka CM | ಮೈಶುಗರ್ ಕಾರ್ಖಾನೆಗೆ 50 ಕೋಟಿ ಕೊಟ್ಟಿದ್ದಷ್ಟೆ ಅಲ್ಲ, ವಿದ್ಯುತ್… ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಸ್ವಾಗತಿಸಿದ ಮಾಜಿ… ಬೆಂಗಳೂರು ಜ್ಞಾನಭಾರತಿ ವಿಶ್ವವಿದ್ಯಾಲಯದಲ್ಲಿ ರಿಜಿಸ್ಟ್ರಾರ್ ಹುದ್ದೆಗೆ 35 ಲಕ್ಷ ರೂ. ವಂಚನೆ: ಎಫ್… Doddaballapura | ಘಾಟಿ ಸುಬ್ರಹ್ಮಣ್ಯ ಕ್ಷೇತ್ರ: ಸರಳ ಸಾಮೂಹಿಕ ವಿವಾಹದಲ್ಲಿ 66 ಜೋಡಿಗಳಿಗೆ… Ex CM | ಸಿಂಧೂರ ಕಳೆದುಕೊಂಡ ಹೆಣ್ಣು ಮಕ್ಕಳ ಪ್ರತೀಕಾರ: ಮಾಜಿ ಮುಖ್ಯಮಂತ್ರಿ… Chikkamagaluru | ಮಲೆನಾಡಿನಲ್ಲಿ ಮಿತಿಮೀರಿದ ಕಾಡುಪ್ರಾಣಿಗಳ ಉಪಟಳ: ಮೂಡಿಗೆರೆ ಸಮೀಪ ಹಸುವನ್ನು ಕೊಂದ… ಮಾಜಿ ಮುಖ್ಯಮಂತ್ರಿ, ದಿವಂಗತ ಕೆ.ಸಿ.ರೆಡ್ಡಿ ಅವರ ಜನ್ಮದಿನ: ಭಾವಚಿತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಲಾರ್ಪಣೆ ಮಾವಿನ ರಾಜಧಾನಿ ಶ್ರೀನಿವಾಸಪುರ ಮತ್ತೆ ಸಜ್ಜು: ಮೇ 15ರಿಂದ ಮಾರಾಟ ಭರ್ಜರಿ ಆರಂಭ Chikkamagaluru | ಕಾಶ್ಮೀರದಲ್ಲಿ ಉಗ್ರರ ದಾಳಿ: ಕೊಟ್ಟಿಗೆಹಾರ ಬಂದ್; ಅಂಗಡಿ-ಮುಂಗಟ್ಟು ಸ್ತಬ್ದ Murder | ನಾರಾಯಣಪುರ: ಗೌಡಪ್ಪ ಕೊಲೆ ಪ್ರಕರಣಕ್ಕೆ ಹೊಸ ಟ್ವಿಸ್ಟ್; ಅಪ್ರಾಪ್ತ ವಯಸ್ಸಿನ…

ಇತ್ತೀಚಿನ ಸುದ್ದಿ

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಉಪ್ಪಿನಂಗಡಿ ಶಾಖೆ: ಉಚಿತ ಆಯುರ್ವೇದ ವೈದ್ಯಕೀಯ ತಪಾಸಣಾ ಶಿಬಿರ

09/07/2024, 12:38

ಮಂಗಳೂರು(reporterkarnataka.com): ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಉಪ್ಪಿನಂಗಡಿ ಶಾಖೆಯ 6ನೇ ವಾರ್ಷಿಕೋತ್ಸವದ ಪ್ರಯುಕ್ತ ಜೇಸಿಐ ಉಪ್ಪಿನಂಗಡಿ ಚಾರಿಟೇಬಲ್ ಟ್ರಸ್ಟ್, ಉಪ್ಪಿನಂಗಡಿ ಜೇಸಿಐ ಜಂಟಿ ಸಹಯೋಗದೊಂದಿಗೆ ದೇರಳಕಟ್ಟೆಯ ಕಣಚೂರು ಆಯುರ್ವೇದ ಆಸ್ಪತ್ರೆಯ ವೈದರ ತಂಡದಂದ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಉಪ್ಪಿನಂಗಡಿ ಎಚ್. ಎಂ.ಆಡಿಟೋರಿಯಂನಲ್ಲಿ ಜರುಗಿತು.
ಕಾರ್ಯಕ್ರಮವನ್ನು ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷ ಕೆ. ವಿ. ಪ್ರಸಾದ್‌ ಅವರು ಉದ್ಘಾಟಿಸಿ, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಅವರ ಮುಂದಾಳತ್ವದಲ್ಲಿ ಬ್ಯಾಂಕಿಂಗ್ ವ್ಯವಹಾರದ ಜೊತೆಗೆ ಸಾಮಾಜಿಕ ಚಟುವಟಿಕೆಯಲ್ಲಿ ತೊಡಗಿಸಿಕೊಂಡು ಜನರ ಆರೋಗ್ಯದ ದೃಷ್ಟಿಯಿಂದ ಇಂತಹ ಶಿಬಿರಗಳನ್ನು ಆಯೋಜಿಸಿ ಕಾಳಜಿ ಮಾಡುತ್ತಿರುವುದು ಶ್ಲಾಘನೀಯ ಎಂದರು.
ಮುಖ್ಯ ಅತಿಥಿಯಾದ ಜೇಸಿಐ ಉಪ್ಪಿನಂಗಡಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಪ್ರಶಾಂತ್ ಕುಮಾರ್ ರೈ ಅವರು ಮಾತನಾಡಿ ಹಲಸು ಹಬ್ಬದ ಕಾರ್ಯಕ್ರಮದ ಜೊತೆಗೆ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಇದರ ಸಹಭಾಗಿತ್ವದೊಂದಿಗೆ ನಡೆಯುತ್ತಿರುವ ಉಚಿತ ವೈದ್ಯಕೀಯ ಶಿಬಿರ ಜನರಿಗೆ ಅನುಕೂಲವಾಗಲಿ. ಇದು ಜೇಸಿಐ ಸಂಸ್ಥೆಗೂ ಕೂಡ ಹೆಮ್ಮೆ ಎಂದು ತಿಳಿಸಿದರು.
ಈ ಕಾರ್ಯಕ್ರಮದ ಇನ್ನೋರ್ವ ಮುಖ್ಯ ಅತಿಥಿಯಾದ ಜೇಸಿಐ ಉಪ್ಪಿನಂಗಡಿ ಇದರ ಅಧ್ಯಕ್ಷರಾದ ಲವೀನಾ ಪಿಂಟೋ ಇವರು ಮಾತನಾಡಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರವು ಗ್ರಾಮೀಣ ಭಾಗದ ಜನರಿಗೆ ತುಂಬಾ ಪ್ರಯೋಜನಕಾರಿಯಾಗಿದ್ದು, ಸಂಘವು ಇನ್ನು ಹೆಚ್ಚು ಹೆಚ್ಚು ಶಿಬಿರ ಗ್ರಾಮೀಣ ಪ್ರದೇಶಗಳಲ್ಲಿ ನಡೆಸಲಿ ಹಾಗೂ ಇನ್ನಷ್ಟು ಜನರು ಇದರ ಪ್ರಯೋಜನ ಪಡೆಯುವಂತಗಲಿ ಎಂದು ಶುಭ ಹಾರೈಸಿದರು.
ಅದ್ವಿಕ್ ದಂತ ಕ್ಲಿನಿಕ್ ಇದರ ದಂತ ವೈದ್ಯರಾದ ಡಾ. ಆಶಿತ್ ಎಮ್. ವಿ. ಇವರು ಮಾತನಾಡಿ, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಬ್ಯಾಂಕಿಂಗ್ ವ್ಯವಹಾರ ವಲ್ಲದೆ ಉಚಿತ ವೈದ್ಯಕೀಯ ಶಿಬಿರದ ಜೊತೆಗೆ ಇಂತಹುದೇ ಹಲವು ಸಮಾಜಮುಖಿ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬಂದಿದೆ ಎಂದು ಸಂಘದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಕಣಚೂರು ಆಯುರ್ವೇದ ಆಸ್ಪತ್ರೆಯ ವೈದ್ಯರಾದ ಡಾ. ಜೈನುದ್ದೀನ್ ಅವರು ಮಾತನಾಡಿ, ಕಣಚೂರು ಆಯುರ್ವೇದ ಆಸ್ಪತ್ರೆಯಲ್ಲಿ ಲಭ್ಯವಿರುವ ಸೌಲಭ್ಯಗಳ ಬಗ್ಗೆ ಶಿಬಿರಾರ್ಥಿಗಳಿಗೆ ಮಾಹಿತಿ ಯನ್ನು ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್‌ ಅವರು ಮಾತನಾಡಿ, ಸಂಘವು ಎಲ್ಲಾ ಶಾಖೆಗಳಲ್ಲಿ ವಾರ್ಷಿಕೋತ್ಸವದ ಸಂದರ್ಭದಲ್ಲಿ ಉಚಿತ ಆರೋಗ್ಯ ಶಿಬಿರವನ್ನು ಆಯೋಜಿಸಿದೆ. ಗ್ರಾಮೀಣ ಭಾಗದಲ್ಲಿ ಕೃಷಿ ಉತ್ಪನ್ನಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸಂಘವು ಕೃಷಿ ಮೇಳ ಹಾಗೂ ಹಲಸಿನ ಹಬ್ಬದಂತಹ ಕಾರ್ಯಕ್ರಮಗಳಿಗೆ ಪ್ರೋತ್ಸಾಹ ನೀಡುತ್ತಾ ಬಂದಿದೆ. ಉಪ್ಪಿನಂಗಡಿ ಪರಿಸರದ ಸದಸ್ಯರ ಸಹಕಾರದಿಂದಾಗಿ ಉಪ್ಪಿನಂಗಡಿ ಶಾಖೆಯು ಉತ್ತಮ ಪ್ರಗತಿಯನ್ನು ಸಾಧಿಸಿದೆ. ಇನ್ನು ಮುಂದಿನ ದಿನಗಳಲ್ಲಿಯೂ ಇದೇ ರೀತಿ ಸಹಕಾರವಿರಲಿ ಹಾಗೆಯೇ ಇಂದಿನ ಈ ಶಿಬಿರವು ಸಾರ್ವಜನಿಕರಿಗೆ ಉಪಯುಕ್ತವಾಗಲಿ ಎಂದು ಹೇಳಿದರು. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಶಿಬಿರಾರ್ಥಿಗಳಿಗೆ ಉಚಿತ ಔಷದಿ ವಿತರಣೆ , ಅಗತ್ಯವುಳ್ಳವರಿಗೆ ಉಚಿತ ಕಣ್ಣಿನ ಪೊರೆಯ ಚಿಕಿತ್ಸೆಯನ್ನು ಸಹಭಾಗಿ ಆಸ್ಪತ್ರೆಗಳಲ್ಲಿ ನಡೆಸುತ್ತಾ ಬಂದಿರುತ್ತದೆ. ನಮ್ಮ ಶಿಬಿರಗಳಲ್ಲಿ ಒಟ್ಟು ೧೫೦೦೦ ಕ್ಕೂ ಮಿಕ್ಕಿ ಕನ್ನಡಕವನ್ನು ಉಚಿತವಾಗಿ ವಿತರಿಸಲಾಗಿದೆ. ಸಂಘದ ಸ್ವಂತ ಮಾಲಿಕತ್ವದ ನೂತನ ೩೩ನೇ ಶಾಖೆಯು ಜುಲೈ ೧೫ರಂದು ಕೃಷ್ಣಾಪುರದಲ್ಲಿ ಸಾರ್ವಜನಿಕ ಸೇವೆಗಾಗಿ ಶುಭಾರಂಭಗೊಳ್ಳಲಿದೆ.
ಈ ಕಾರ್ಯಕ್ರಮದಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನಿರ್ದೇಶಕರಾದ ರಮನಾಥ್ ಸನಿಲ್, ಗೋಪಾಲ್ ಎಂ, ಚಂದ್ರಾವತಿ, ಮೂರ್ತೆದಾರರ ಸೇವಾ ಸಹಕಾರಿ ಸಂಘ, ಉಪ್ಪಿನಂಗಡಿ ಇದರ ಅಧ್ಯಕ್ಷ ಅಜಿತ್ ಪಾಲೇರಿ , ಜೇಸಿಐ ವಲಯ ನಿರ್ದೇಶಕ ಭರತ್ ಶೆಟ್ಟಿ, ಮತ್ತಿತರರು ಉಪಸ್ಧಿತರಿದ್ದರು.
ಕಾರ್ಯಕ್ರಮದಲ್ಲಿ ಸುಮಾರು ೧೬೦ ಕ್ಕೂ ಮಿಕ್ಕಿ ಶಿಬಿರಾರ್ಥಿಗಳು ಶಿಬಿರದ ಪ್ರಯೋಜನವನ್ನು ಪಡೆದುಕೊಂಡರು.
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಹಿರಿಯ ಶಾಖಾಧಿಕಾರಿ ರವಿಕಲಾ ಸ್ವಾಗತಿಸಿ, ಶಾಖಾಧಿಕಾರಿ ಭವ್ಯ ವಂದಿಸಿದರು. ಶಾಖಾಧಿಕಾರಿ ಧನಲಕ್ಷ್ಮೀ ಅವರು ಕಾರ್ಯಕ್ರಮ ನಿರೂಪಿಸಿದರು. ಉಚಿತ ವೈದ್ಯಕೀಯ ತಪಾಸಣಾ ಶಿಬಿರದ ಸಂಯೋಜನೆಯನ್ನು ಶಾಖಾಧಿಕಾರಿ ಕವಿತಾ ಐ. ನಡೆಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು