4:05 PM Monday23 - December 2024
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಬಂಧನಕ್ಕೊಳಗಾಗಿ ಬಿಡುಗಡೆಗೊಂಡ ಸಿ.ಟಿ. ರವಿಗೆ ಭಾರೀ ಸ್ವಾಗತ; ಮೆರವಣಿಗೆ ಸಿ. ಟಿ. ರವಿ ಸದಸ್ಯತ್ವ ಅನರ್ಹಗೊಳಿಸಿ: ಮಲೆನಾಡು ಪ್ರದೇಶಾಭಿವೃದ್ಧಿ ನಿಗಮ ಮಂಡಳಿ ಅಧ್ಯಕ್ಷ… ಎಲ್ಲರನ್ನೂ ಒಳಗೊಳ್ಳುವ ಸಮಾಜ ನಿರ್ಮಿಸೋಣ: ಆರ್ಚ್ ಬಿಷಪ್ಸ್ ಹೌಸ್ ಕ್ರಿಸ್ಮಸ್ ಆಚರಣೆಯಲ್ಲಿ ಮುಖ್ಯಮಂತ್ರಿ… ವಕ್ಫ್ ಹೋರಾಟಕ್ಕೆ ಮಣಿದು ಸಮಿತಿ ರಚನೆಗೆ ಸರಕಾರ ನಿರ್ಧಾರ: ಪ್ರತಿಪಕ್ಷ ನಾಯಕ ಆರ್‌.… ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ: ಮುಖ್ಯಮಂತ್ರಿ ನೇತೃತ್ವದಲ್ಲಿ ಸಭೆ ರಾತ್ರಿಯಡೀ ಪೊಲೀಸ್ ವಾಹನದಲ್ಲಿ ಸಿ.ಟಿ. ರವಿ ಸುತ್ತಾಟ!: ಕಾರಣ ಏನು ಗೊತ್ತೇ? ಸಿ.ಟಿ.ರವಿ ಬಂಧನ: ಚಿಕ್ಕಮಗಳೂರು, ಕೊಟ್ಟಿಗೆಹಾರದಲ್ಲಿ ಬಿಜೆಪಿ ಭಾರೀ ಪ್ರತಿಭಟನೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಪಿಒಸಿ ದರ್ಜೆ: ವಿಮಾನಯಾನ ಸಚಿವ ಜತೆ ಸಂಸದ ಕ್ಯಾಪ್ಟನ್… ಮಂಗಳೂರು: ಹೊಸ ವರ್ಷದ ಆಚರಣೆಗೆ ತರಿಸಿದ್ದ 9 ಲಕ್ಷ ರೂ. ಮೌಲ್ಯದ ಡ್ರಗ್ಸ್… ಎನ್.ಆರ್.ಪುರ: ತಂದೆ- ಮಗನ ಮೇಲೆ ಕಾಡಾನೆ ದಾಳಿ; ತಂದೆ ಸಾವು; ಮಗ ತಪ್ಪಿಸಿಕೊಂಡು…

ಇತ್ತೀಚಿನ ಸುದ್ದಿ

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ 2023-24ನೇ ಸಾಲಿನಲ್ಲಿ 3.3 ಕೋಟಿಗೂ ಅಧಿಕ ಲಾಭ: ಚಿತ್ತರಂಜನ್ ಬೋಳಾರ್‌

08/04/2024, 19:16

ಮಂಗಳೂರು(reporterkarnataka.com): ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) 2023-24ನೇ ಸಾಲಿನಲ್ಲಿ 2000 ಕೋಟಿಗೂ ಅಧಿಕ ವಾರ್ಷಿಕ ವಹಿವಾಟು ನಡೆಸಿ, 3.3 ಕೋಟಿಗೂ ಹೆಚ್ಚು ಲಾಭಗಳಿಸಿದೆ ಎಂದು ಸಂಘದ ಅಧ್ಯಕ್ಷ, ಸಹಕಾರ ರತ್ನ ಚಿತ್ತರಂಜನ್ ಬೋಳಾರ್‌ ಅವರು ತಿಳಿಸಿದ್ದಾರೆ.

ಸಹಕಾರ ತತ್ವದ ಮೂಲಕ ಸಾರ್ವಜನಿಕ ಸೇವೆಯ ಸದುದ್ದೇಶದ ಧ್ಯೇಯದೊಂದಿಗೆ ಸಾಕಾರಗೊಳಿಸುವ ಜೊತೆಗೆ ಬ್ರಹ್ಮಶ್ರೀ ನಾರಾಯಣಗುರುವರ್ಯರ ಆಶಯಗಳನ್ನು ಮತ್ತಷ್ಟು ಪ್ರಧಾನಗೊಳಿಸುವ ಮುಖ್ಯ ಉದ್ದೇಶದೊಂದಿಗೆ ಮಂಗಳೂರು ತಾಲೂಕಿನ ಬೆಂದೂರ್‌ವೆಲ್‌ನಲ್ಲಿ 2012 ರಲ್ಲಿ ಕೇಂದ್ರದ ಮಾಜಿ ವಿತ್ತ ಸಚಿವ ಬಿ. ಜನಾರ್ದನ ಪೂಜಾರಿಯವರ ಅಮೃತ ಹಸ್ತದಿಂದ ಸಂಘವು ಉದ್ಘಾಟನೆಗೊಂಡಿತು. ಸಂಘವು 2023-24ನೇ ಸಾಲಿನಲ್ಲಿ ವಾರ್ಷಿಕ ವಹಿವಾಟು ರೂ. 2000 ಕೋಟಿಗೂ ಮೀರಿ ವ್ಯವಹಾರ ನಡೆಸಿದೆ. ವರದಿ ಸಾಲಿನಲ್ಲಿ ರೂ. 225 ಕೋಟಿಗೂ ಅಧಿಕ ಠೇವಣಿ, ರೂ. 178 ಕೋಟಿಗೂ ಮಿಕ್ಕಿ ಸಾಲ, ರೂ. 1.48 ಕೋಟಿ ಪಾಲು ಬಂಡವಾಳದೊಂದಿಗೆ ಸಂಘವು ರೂ. 3.3 ಕೋಟಿಗೂ ಮಿಕ್ಕಿ ಲಾಭಗಳಿಸಿರುವುದು ಸಂಘದ ಹೆಗ್ಗಳಿಕೆಯಾಗಿದೆ ಎಂದು ಚಿತ್ತರಂಜನ್ ಬೋಳಾರ್‌ ಅವರು ಹೇಳಿದ್ದಾರೆ.
ಸಂಘದ ದಶಮಾನೋತ್ಸವದ ಸಂದರ್ಭದಲ್ಲಿ ಸುಮಾರು 14,000 ಚದರಡಿಯ ಸ್ವಂತ ಕಟ್ಟಡವನ್ನು ಹೊಂದಿದ ದಕ್ಷಿಣ ಕನ್ನಡ ಜಿಲ್ಲೆಯ ಏಕಮಾತ್ರ ವಿವಿಧೋದ್ದೇಶ ಸಹಕಾರಿ ಸಂಘವಾಗಿದೆ. ಅಲ್ಪಾವಧಿಯಲ್ಲಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 30 ಶಾಖೆಗಳು ಆರಂಭವಾಗಿ ನುರಿತ ಸಿಬ್ಬಂದಿ ವರ್ಗದ ಅತ್ಯುತ್ತಮ ಗುಣಮಟ್ಟದ ಸೇವೆಗಾಗಿ ಈಗಾಗಲೇ ರಾಜ್ಯ ಹಾಗೂ ರಾಷ್ಟçಮಟ್ಟದ ಹಲವು ಪ್ರಶಸ್ತಿಗಳ ಗರಿಗಳನ್ನು ಮುಡುಗೇರಿಸಿಕೊಂಡಿದೆ. ಆತ್ಮಶಕ್ತಿ ಸಹಕಾರಿ ಸಂಘವು ಮಹಿಳಾ ಸಬಲೀಕರಣದೊಂದಿಗೆ ಶೇ. 95% ಮಹಿಳಾ ಸಿಬ್ಬಂದಿಗಳಿಂದ ಗ್ರಾಹಕರಿಗೆ ಅತ್ಯುತ್ತಮ ಸೇವೆಯೊಂದಿಗೆ ನಿರಂತರವಾಗಿ ಲಾಭಗಳಿಸುತ್ತಾ ಬಂದಿದೆ. ಸಂಘವು ಮುಂದಿನ ದಿನಗಳಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆ ಮಾತ್ರವಲ್ಲದೇ, ಕೊಡಗು, ಚಿಕ್ಕಮಗಳೂರು ಹಾಗೂ ಮೈಸೂರು ಜಿಲ್ಲೆಗಳ ವ್ಯಾಪ್ತಿಗಳಿಗೆ ತನ್ನ ಶಾಖೆಗಳನ್ನು ವಿಸ್ತರಿಸುವ ಯೋಜನೆಯನ್ನು ಹಮ್ಮಿಕೊಂಡಿದೆ.
ಸಂಘದ ಸದಸ್ಯರಿಗೆ ನಿರಂತರ ಡಿವಿಡೆಂಡ್ ನೀಡಿದ ಕೀರ್ತಿಯನ್ನು ಈ ಸಂಘವು ಹೊಂದಿದೆ. ಸಂಘವು ಪ್ರಾರಂಭದಿಂದಲೂ ಆಡಿಟ್ ವರ್ಗೀಕರಣದಲ್ಲಿ “ಎ” ತರಗತಿಯನ್ನು ಗಳಿಸಿದೆ. ಸಂಘವು ತನ್ನ ಲಾಭಾಂಶದಲ್ಲಿ ಈಗಾಗಲೇ ಶೈಕ್ಷಣಿಕ, ಸಾಮಾಜಿಕ ಹಾಗೂ ಆರೋಗ್ಯ ಕ್ಷೇತ್ರದಲ್ಲಿ ಅತೀ ಅವಶ್ಯಕತೆ ಇರುವವರಿಗೆ ಸಹಾಯಧನವನ್ನು ನೀಡುತ್ತಾ ಬಂದಿದೆ. ಅಸಂಘಟಿತ ಮಹಿಳೆಯರಿಗೆ ಸ್ವ-ಸಹಾಯ ಸಂಘಗಳ ಮುಖೇನ ಸಾಲ ನೀಡಿದ್ದಲ್ಲದೇ ಮಹಿಳೆಯರ ಸಬಲೀಕರಣಕ್ಕೆ ಪ್ರಾಶಸ್ತ್ಯ ನೀಡಿದೆ. ಪ್ರತೀ ಶಾಖೆಗಳ ವಾರ್ಷಿಕೋತ್ಸವ ಸಮಾರಂಭದಂದು ಮಂಗಳೂರಿನ ಪ್ರಮುಖ ಆಸ್ಪತ್ರೆಗಳ ಸಹಯೋಗದೊಂದಿಗೆ ಹಾಗೂ ಇತರ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಉಚಿತ ವೈದ್ಯಕೀಯ ತಪಾಸಣಾ ಶಿಬಿರ, ರಕ್ತದಾನ ಶಿಬಿರ, ಉಚಿತ ಕಣ್ಣಿನ ತಪಾಸಣೆ, ಉಚಿತ ಕನ್ನಡಕ ವಿತರಣೆ ಮತ್ತು ಉಚಿತ ದಂತ ತಪಾಸಣಾ ಶಿಬಿರ, ಉಚಿತ ಆರೋಗ್ಯ ಕಾರ್ಡ್ ವಿತರಣೆ ಮುಂತಾದ ಶಿಬಿರಗಳನ್ನು ಆಯೋಜಿಸಿದೆ. ವಿಶೇಷವಾಗಿ ಉಚಿತ ಕಣ್ಣಿನ ತಪಾಸಣೆಯನ್ನು ನಡೆಸಿ 14500 ಹೆಚ್ಚು ಕನ್ನಡಕ ವಿತರಣೆ ಮಾಡಿರುವುದಲ್ಲದೇ 500ಕ್ಕೂ ಹೆಚ್ಚು ಜನರಿಗೆ ಕಣ್ಣಿನ ಉಚಿತ ಶಸ್ತçಚಿಕಿತ್ಸೆ ಮಾಡಿಸಲಾಗಿದೆ. ಇದುವರೆಗೆ ಒಟ್ತು 64ಕ್ಕೂ ಮಿಕ್ಕಿ ಉಚಿತ ಆರೋಗ್ಯ ಶಿಬಿರಗಳನ್ನು ನಡೆಸಲು ಸಹಕರಿಸಿದ ಎಲ್ಲಾ ವೈದ್ಯಾಧಿಕಾರಿಗಳನ್ನು ಮತ್ತು ಸಂಘ ಸಂಸ್ಥೆಗಳ ಮುಖ್ಯಸ್ಥರನ್ನು ಸಂಘವು ಗೌರವಿಸಿದೆ. ಸಂಘವು ಸಂಘದ ಸದಸ್ಯರ ಉಪಯೋಗಗೋಸ್ಕರ ನಗರದ ಪಡೀಲ್ ನಲ್ಲಿ ಬಸ್ ಸ್ಟಾಂಡ್ ನಿರ್ಮಾಣ, ನೀರುಮಾರ್ಗದಲ್ಲಿ ಮನೆಯ ಪುನರ್ ನವೀಕರಣ, ಅಸಹಾಯಕರಿಗೆ ಸಹಾಯಧನ ವಿತರಣೆ ಮುಂತಾದ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಸಂಘವು ಐಎಎಸ್, ಐಪಿಎಸ್ ಮುಂತಾದ ಸ್ಪರ್ಧಾತ್ಮಕ ನಾಗರಿಕ ಸೇವಾ ಪರೀಕ್ಷೆಗಳನ್ನು ಎದುರಿಸಲು ಪ್ರೇರಣಾ ಶಿಬಿರ ಮತ್ತು ಅರ್ಹ ಬಡ ವಿದ್ಯಾರ್ಥಿಗಳಿಗೆ ಉಚಿತ ತರಬೇತಿ ನೀಡುವುದರ ಜೊತೆಗೆ ಸರ್ಕಾರಿ ಪ್ರೌಢ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಬಡವಿಧ್ಯಾರ್ಥಿಗಳಿಗೆ ಎಸ್.ಎಸ್.ಎಲ್.ಸಿ ಪರೀಕ್ಷೆಯ ಮಾದರಿ ಪ್ರಶ್ನೋತ್ತರಗಳನ್ನು ಪ್ರಜಾವಾಣಿ ದಿನಪತ್ರಿಕೆಯ ಸಹಯೋಗದೊಂದಿಗೆ ವಿತರಿಸಿದೆ. ಸಹಕಾರ ಸಂಘಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗಳಿಗೆ ಸರಕಾರಿ ಆದೇಶದಂತೆ ಬಡ್ತಿ ಹೊಂದಲು ಸಹಕಾರಿ ನಿರ್ವಹಣೆಯಲ್ಲಿ ಉನ್ನತ ಶಿಕ್ಷಣದ ಅಗತ್ಯವಿದ್ದು ನಮ್ಮ ಸಂಘವು ಪ್ರಾದೇಶಿಕ ಸಹಕಾರ ತರಬೇತಿ ಕೇಂದ್ರ ಬೆಂಗಳೂರು ಇದರ ಸಹಯೋಗದೊಂದಿಗೆ ಮಂಗಳೂರು ಕೇಂದ್ರವಾಗಿ ಉನ್ನತ ಡಿಪ್ಲೋಮಾ ತರಬೇತಿಯನ್ನು ನೀಡುವ ವ್ಯವಸ್ಥೆಯನ್ನು ಮಾಡಿದೆ ಎಂದು ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್ ವಿವರ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು