7:48 PM Thursday5 - March 2026
ಬ್ರೇಕಿಂಗ್ ನ್ಯೂಸ್
ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಆರತಕ್ಷತೆ: ಶುಭ ಹಾರೈಸಿದ ಡಿಕೆಶಿ- ಪೊನ್ನಣ್ಣ ಬೇಡ್ತಿ ಸಮೀಪ ಕೆಎಸ್ಸಾರ್ಟಿಸಿ ಬಸ್ -ಕಾರು ಡಿಕ್ಕಿ,: ಮಂಗಳೂರಿನ ಉದ್ಯಮಿ ಸಾವು ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ

ಇತ್ತೀಚಿನ ಸುದ್ದಿ

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದಿಂದ ಬ್ರಹ್ಮಶ್ರೀ ನಾರಾಯಣಗುರುಗಳ 170ನೇ ಜಯಂತಿ ಆಚರಣೆ

21/08/2024, 16:26

ಮಂಗಳೂರು(reporterkarnataka.com): ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘ ಮಂಗಳೂರು ವತಿಯಿಂದ ಬ್ರಹ್ಮಶ್ರೀ ನಾರಾಯಣಗುರುಗಳ 170ನೇ ಜಯಂತಿಯ ಆಚರಣೆಯನ್ನು ಸಂಘದ ಪ್ರಧಾನ ಕಚೇರಿಯಲ್ಲಿ ಆಚರಿಸಲಾಯಿತು.


ಧಾರ್ಮಿಕ ಚಿಂತಕ ಹಾಗೂ ಸಂಘದ ಹಿರಿಯ ಸದಸ್ಯರಾದ ಮಾಧವ ಸುವರ್ಣ ಅವರು ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದ ಸಿಬ್ಬಂದಿಗಳು ಭಜನಾ ಕಾರ್ಯಕ್ರಮವನ್ನು ಭಕ್ತಿಪೂರ್ವಕವಾಗಿ ನಡೆಸಿಕೊಟ್ಟರು. ಪುರೋಹಿತರಾದ ರಾಜೇಶ್ ಶಾಂತಿ ಅವರು ಗುರುಪೂಜೆ ನಡೆಸಿ, ನಂತರ ಪ್ರಸಾದ ವಿತರಣೆಯನ್ನು ನಡೆಸಿದರು.
ಈ ಶುಭ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್, ಉಪಾಧ್ಯಕ್ಷರಾದ ನೇಮಿರಾಜ್ ಪಿ , ನಿರ್ದೇಶಕರುಗಳಾದ ಜಿ. ಪರಮೇಶ್ವರ್ ಪೂಜಾರಿ, ಸೀತಾರಾಮ್ ಎನ್., ರಮಾನಾಥ್ ಸನಿಲ್, ಗೋಪಾಲ್ ಎಮ್, ಉಮಾವತಿ, ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೌಮ್ಯ ವಿಜಯ್, ಸಲಹೆಗಾರರಾದ ಅಶೋಕ್ ಕುಮಾರ್, ಬ್ರಹ್ಮಶ್ರೀ ನಾರಾಯಣಗುರು ಸ್ವಾಮಿ ಪ್ರಕಾಶನ ಮತ್ತು ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷರ ವಾಮನ್ ಕೆ. ಹಾಗೂ ಸಂಘದ ಸದಸ್ಯರುಗಳು ಹಾಗೂ ಸಂಘದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು