1:42 AM Saturday28 - February 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ಆತ್ಮಶಕ್ತಿ ವಿವಿಧೊದ್ದೇಶ ಸಹಕಾರಿ ಸಂಘ 100 ಶಾಖೆಗಳನ್ನು ತೆರೆಯಲಿ: ಶಾಸಕ ಉಮಾನಾಥ ಕೋಟ್ಯಾನ್ ಹಾರೈಕೆ

12/05/2024, 23:04

ಮೂಡುಬಿದರೆ(reporterkarnataka.com): ಆತ್ಮಶಕ್ತಿ ವಿವಿಧೊದ್ದೇಶ ಸಹಕಾರಿ ಸಂಘ 32ನೇ ಶಾಖೆ ಪಕ್ಷಿಕೆರೆಯಲ್ಲಿ ಉದ್ಘಾಟನೆ ಸಹಕಾರಿ ಸಂಘದ ಬ್ಯಾಂಕ್‌ಗಳು ಗ್ರಾಮೀಣ ಜನರ ನಾಡಿ ಮಿಡಿತದಂತಿವೆ. ಇಂದು ಸಹಕಾರಿ ಸಂಘಗಳು ಜನರ ಸಹಕಾರದಿಂದ ಬೆಳೆಯುತ್ತಿವೆ. ಈ ಸಂಸ್ಥೆ 100 ಶಾಖೆಗಳನ್ನು ಆರಂಭಿಸಲಿ ಎಂದು ಮೂಲ್ಕಿ ಮೂಡುಬಿದಿರೆ ಶಾಸಕ ಉಮಾನಾಥ ಕೋಟ್ಯಾನ್ ಹೇಳಿದರು.
ಅವರು ಶುಕ್ರವಾರ ಪಕ್ಷಿಕೆರೆಯ ಮುಖ್ಯ ರಸ್ತೆಯ ಲಘುವಿ ಕಾಂಪ್ಲೆಕ್ಸ್ ನಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ 32ನೇ ಶಾಖೆಯನ್ನು ಉದ್ಘಾಟಿಸಿ ಮಾತನಾಡಿದರು.
ಪಕ್ಷಿಕೆರೆ ಸಂತ ಜೂದರ ಯಾತ್ರಿಕ ಕೇಂದ್ರದ ಧರ್ಮಗುರು ವಂ| ಮೆಲ್ವಿನ್ ನೋರೋನ್ನಾ ದೀಪ ಬೆಳಗಿಸಿ ಮಾತನಾಡಿ, ಅಭಿವೃದ್ದಿಯ ದೃಷ್ಟಿಯಿಂದ ಬ್ಯಾಂಕ್‌ಗಳು ಹಾಗೂ ವಾಣಿಜ್ಯ ಸಂರ್ಕೀಣಗಳು ಹುಟ್ಟಿಬರಬೇಕು. ಆಗ ಜನರಿಗೆ ಸೌಕರ್ಯ ಸೌಲಭ್ಯಗಳು ದೊರೆಯುತ್ತವೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಅಧ್ಯಕ್ಷ ಚಿತ್ತರಂಜನ್ ಬೋಳಾರ್ ಮಾತನಾಡಿ 2012ರಲ್ಲಿ ಆರಂಭಗೊಂಡ ಸಂಸ್ಥೆ ಇಂದು 32ನೇ ಶಾಖೆಯನ್ನು ತೆರೆಯುವ ತನಕ ಬೆಳೆದಿದೆ. 2 ಸಾವಿರ ಕೋ.ರೂ. ವಾರ್ಷಿಕ ವಹಿವಾಟು ಇದ್ದು, 3.3 ಕೋಟಿ ರೂ ಲಾಭ ಪಡೆದಿದೆ. ಮುಂದಿನ ದಿನಗಳಲ್ಲಿ ಹಲವಾರು ಯೋಜನೆಯನ್ನು ಅನುಷ್ಠಾನ ಮಾಡಲಿದ್ದೇವೆ ಎಂದರು .
ಸುರಗಿರಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ಸೀತಾರಾಮ ಶೆಟ್ಟಿ ಭದ್ರತಾಕೋಶವನ್ನು ಉದ್ಘಾಟಿಸಿದರು. ಕೆಮ್ರಾಲ್ ಗ್ರಾ.ಪಂ. ಅಧ್ಯಕ್ಷ ಮಯ್ಯದ್ದಿ ಗಣಕೀಕೃತ ಬ್ಯಾಂಕಿಂಗ್ ಸೇವೆಗೆ ಚಾಲನೆ ನೀಡಿದರು. ಎಸ್. ಕೋಡಿ ನಾರಾಯಣ ಗುರು ಸಂಘದ ಅಧ್ಯಕ್ಷ ನವೀನ್ ಹರಿಪಾದೆ ನಿರಖು ಠೇವಣಿ ಪತ್ರ ವಿತರಿಸಿದರು.
ಸಮಾಜ ಸೇವಕ ಧನಂಜಯ ಶೆಟ್ಟಿಗಾರ್ ಇ ಮುದ್ರಾಂಕ ಸೇವೆಗೆ ಚಾಲನೆ ನೀಡಿದರು. ಹಳೆಯಂಗಡಿ ಪ್ರಿಯದರ್ಶಿನಿ ಸಹಕಾರಿ ಸಂಘದ ಅಧ್ಯಕ್ಷ ವಸಂತ ಬೆರ್ನಾಡ್ ಆವರ್ತನ ಠೇವಣಿಗೆ ಚಾಲನೆ ನೀಡಿದರು. ಜಿ.ಪಂ. ಮಾಜಿ ಉಪಾಧ್ಯಕ್ಷ ಕಸ್ತೂರಿ ಪಂಜ ಉಳಿತಾಯ ಖಾತೆಗೆ ಚಾಲನೆ ನೀಡಿದರು.


ಕಟ್ಟಡದ ಮಾಲಕ ಶ್ರೀನಿವಾಸ ಕೋಟ್ಯಾನ್ , ಆಡಳಿತ ಮಂಡಳಿಯ ಜಿ. ಪರಮೇಶ್ವರ ಪೂಜಾರಿ, ಸೀತಾರಾಮ ಎನ್., ರಮನಾಥ ಸನಿಲ್, ಚಂದ್ರಹಾಸ ಮರೋಳಿ, ಗೋಪಾಲ್ ಎಂ., ಸಲಹೆಗಾರ ಅಶೋಕ್ ಕುಮಾರ್ ಮತ್ತಿತ್ತರರು ಉಪಸ್ಥಿತರಿದ್ದರು.
ಮುಖ್ಯಕಾರ್ಯನೀರ್ವಹಣಾಧಿಕಾರಿ ಸೌಮ್ಯ ವಿಜಯ್ ಸ್ವಾಗತಿಸಿದರು, ಉಪಾಧ್ಯಕ್ಷ ನೇಮಿರಾಜ್ ಪಿ. ವಂದಿಸಿದರು. ಸಿಬ್ಬಂದಿ ಹರ್ಷಿತಾ ನಿರ್ವಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು