3:12 PM Monday15 - September 2025
ಬ್ರೇಕಿಂಗ್ ನ್ಯೂಸ್
ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ ಕರಾವಳಿಯಲ್ಲಿ ಸಂಭ್ರಮದ ಮೊಂತಿ ಹಬ್ಬ: ಚರ್ಚ್ ಗಳಲ್ಲಿ ವಿಶೇಷ ಬಲಿಪೂಜೆ; ತೆನೆ ವಿತರಣೆ ಮೈಸೂರು ದಸರಾ: ಗೋಲ್ಡ್​ ಕಾರ್ಡ್​; ಟಿಕೆಟ್​ ದರ ಎಷ್ಟು? ಖರೀದಿ ಹೇಗೆ? ಇಲ್ಲಿದೆ…

ಇತ್ತೀಚಿನ ಸುದ್ದಿ

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಅಧ್ಯಕ್ಷ ಸಹಕಾರ ರತ್ನ ಚಿತ್ತರಂಜನ್ ಬೋಳಾರ್‌ರಿಗೆ ಸನ್ಮಾನ

01/08/2024, 01:08

ಮಂಗಳೂರು(reporterkarnataka.com): ಮಂಗಳೂರಿನ ನಾರಾಯಣಗುರು ಯುವ ವೇದಿಕೆಯ ರಜತ ಸಂಭ್ರಮ ಸಲುವಾಗಿ ನಗರದ ಪುರಭವನದಲ್ಲಿ ಬ್ರಹ್ಮಶ್ರೀ ಬಂಗಾರದ ಪದಕ ಪ್ರದಾನ, ವಿದ್ಯಾರ್ಥಿ ವೇತನ ವಿತರಣೆ, ಸಾಧನಾಶೀಲರಿಗೆ ಸನ್ಮಾನ ಕಾರ್ಯಕ್ರಮ ಜರುಗಿತು. ನಾರಾಯಣ ಗುರು ಯುವ ವೇದಿಕೆ ಅಧ್ಯಕ್ಷ ಸುದರ್ಶನ್ ಕೊಟ್ಯಾನ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಸಹಕಾರ ಕ್ಷೇತ್ರದಲ್ಲಿ ಸಲ್ಲಿಸಿರುವ ಅತ್ಯುತ್ತಮ ಸಾಧನೆಗಾಗಿ ವಿಧಾನ ಪರಿಷತ್ ಸದಸ್ಯರಾದ ಬಿ.ಕೆ ಹರಿಪ್ರಸಾದ್‌ರವರು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್‌ ಅವರನ್ನು ಸನ್ಮಾನಿಸುವ ಮೂಲಕ ಗೌರವಿಸಿದರು.
ಶಾಸಕ ವೇದವ್ಯಾಸ್ ಕಾಮತ್, ಮಾಜಿ ಸಚಿವ ಕೃಷ್ಣ ಜೆ ಪಾಲೆಮಾರ್, ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನದ ಕೋಶಾಧಿಕಾರಿ ಪದ್ಮರಾಜ್ ಆರ್. ಪೂಜಾರಿ, ನಮ್ಮ ಕುಡ್ಲ ಸಂಸ್ಥೆಯ ಮುಖ್ಯಸ್ಥ ಲೀಲಾಕ್ಷ ಕರ್ಕೆರಾ, ಡೀನೆಟ್ ಮೆನೇಜಿಂಗ್ ಡೈರೆಕ್ಟರ್ ಸಂದೇಶ್ ಪೂಜಾರಿ, ಹಿಂದುಳಿದ ವರ್ಗಗಳ ಆಯೋಗದ ಮಾಜಿ ಸದಸ್ಯ ಕೆ ಟಿ. ಸುವರ್ಣ, ಶಿಕ್ಷಣ ತಜ್ಞೆ ಶಶಿಲೇಖ, ಪೋಲೀಸ್ ಅಧಿಕಾರಿ ಹರೀಶ್ ಪದವಿನಂಗಡಿ, ಹೋಮಿಯೋಪತಿ ವೈದ್ಯ ಡಾ. ಶಿವಪ್ರಸಾದ್, ಶಿರ್ಡಿಬಾಬ ರಿಯಲ್ ಎಸ್ಟೇಟ್ ಮಾಲೀಕ ರತೀಂದ್ರ ನಾಥ್, ಸಂಚಾಲಕರಾದ ಸುಧಾಕರ್ ಕರ್ಕೇರ, ಎಮ್. ಎಸ್ ಕೋಟ್ಯಾನ್ ಮತ್ತಿತ್ತರರು ಉಪಸ್ಥಿತರಿದ್ದರು.
ನಾರಾಯಣಗುರು ಯುವ ವೇದಿಕೆಯ ಸಹನಿರ್ದೇಶಕ ನೀಲಯ್ಯ ಅಗರಿ ಸ್ವಾಗತಿಸಿದರು. ಸುಮಂತ್ ಸುವರ್ಣ ವಂದಿಸಿದರು. ದಿನೇಶ್ ಸುವರ್ಣ ರಾಯಿ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು