5:54 AM Sunday5 - October 2025
ಬ್ರೇಕಿಂಗ್ ನ್ಯೂಸ್
ಗ್ಯಾರಂಟಿ ಯೋಜನೆಗಳ ಯಶಸ್ಸು ಬಿಜೆಪಿಗರ ಆತಂಕಗೊಳಿಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ Kodagu | ಡಿವೈಎಸ್ಪಿ ಮೇಲೆ ಹಲ್ಲೆ ಪ್ರಕರಣ: ಆರೋಪಿಗೆ ಅ. 16 ರವರೆಗೆ… ಹೆತ್ತಬ್ಬೆಯನ್ನೇ ಕೊಂದ ಪಾಪಿ ಪುತ್ರ: ಅಡುಗೆ ಮಾಡಿಲ್ಲ ಎಂಬ ಕಾರಣಕ್ಕೆ ಹತ್ಯೆ; ಆರೋಪಿಯ… Kodagu | ಮಂಜಿನ ನಗರಿ ಮಡಿಕೇರಿಯಲ್ಲಿ ಜನೋತ್ಸವಕ್ಕೆ ಜನಜoಗುಳಿ: ದಶ ಮಂಟಪಗಳಿಂದ ಶೋಭಾ… Bangaluru | ವೈದ್ಯ ದಂಪತಿಯಿಂದ ಮನೆಯಲ್ಲೇ ನವದುರ್ಗೆಯರ ಆರಾಧನೆ: ಸಾಲು ಸಾಲು ದಸರಾ… ಮಡಿಕೇರಿ ದಸರಾ ಶೋಭಯಾತ್ರೆಗೆ ತೆರೆ: ದಶಮoಟಪಗಳ ತೀರ್ಪುಗಾರರ ವಿರುದ್ದ ಆಕ್ರೋಶ; ಪ್ರತಿಭಟನೆ ಮುಂದಿನ ವರ್ಷವೂ ನಾನೇ ದಸರಾ ಪುಷ್ಪಾರ್ಚನೆ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ ಭರವಸೆಯ ನುಡಿ ಮೈಸೂರು ದಸರಾ: ಅರಮನೆ ಆವರಣದಲ್ಲಿ ಯದುವೀರ್ ಒಡೆಯರ್ ರಿಂದ ಶಮಿ ಪೂಜೆ ವಿಶ್ವ ವಿಖ್ಯಾತ ಮೈಸೂರು ದಸರಾ: ಜಂಬೂ ಸವಾರಿಗೆ ಗಜಪಡೆ ಸಜ್ಜು ಮೈಸೂರು ಅರಮನೆಗೆ ಬೆಳ್ಳಿ ರಥದಲ್ಲಿ ಹೊರಟ ಚಾಮುಂಡಿ ದೇವಿ: ಬಿಗಿ ಬಂದೋಬಸ್ತ್

ಇತ್ತೀಚಿನ ಸುದ್ದಿ

ಆತ್ಮಶಕ್ತಿ ಮಡಂತ್ಯಾರು ಶಾಖೆಯಲ್ಲಿ ಉಚಿತ ವೈದ್ಯಕೀಯ, ನೇತ್ರ ಮತ್ತು ದಂತ ತಪಾಸಣೆ ಚಿಕಿತ್ಸಾ ಶಿಬಿರ

10/01/2025, 13:22

ಮಂಗಳೂರು(reporterkarnataka.com):ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಮಡಂತ್ಯಾರು ಶಾಖೆಯ ದ್ವಿತೀಯ ವಾರ್ಷಿಕೋತ್ಸವದ ಪ್ರಯುಕ್ತ ಮಡವು ಸ್ವರ್ಣ ಸಂಜೀವಿನಿ ಸೇವಾ ಟ್ರಸ್ಟ್ ಮತ್ತು ಮಡಂತ್ಯಾರು ಜೆಸಿಐ ಜಂಟಿ ಸಹಯೋಗದೊಂದಿಗೆ ಎ.ಜೆ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ನ ನುರಿತ ತಜ್ಞ ವೈದ್ಯ ತಂಡದಿಂದ ಉಚಿತ ವೈದ್ಯಕೀಯ, ನೇತ್ರ ಮತ್ತು ದಂತ ತಪಾಸಣೆ ಚಿಕಿತ್ಸಾ ಶಿಬಿರವು ಮಡಂತ್ಯಾರಿನ ಶ್ರೀ ದುರ್ಗಾ ಕಾಂಪ್ಲೆಕ್ಸ್ ನ ಕಲಾ ಸಭಾಂಗಣದಲ್ಲಿ ಜರುಗಿತು.
ಈ ಕಾರ್ಯಕ್ರಮವನ್ನು ಮಡಂತ್ಯಾರು ಗ್ರಾಮ ಪಂಚಾಯತ್‌ನ ಅಧ್ಯಕ್ಷರಾದ ರೂಪಾ ನವೀನ್ ಅವರು ಉದ್ಘಾಟಿಸಿ, ಮಾತನಾಡಿ, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಬ್ಯಾಂಕಿಂಗ್ ವ್ಯವಹಾರದ ಜೊತೆಗೆ ಸಾಮಾಜಿಕ ಚಟುವಟಿಕೆಯಲ್ಲಿ ತೊಡಗಿಸಿಕೊಂಡು ಸಮಾಜದ ಎಲ್ಲಾ ವರ್ಗದ ಜನರಿಗೆ ಆರೋಗ್ಯದ ದೃಷ್ಟಿಯಿಂದ ಜನರ ಕಾಳಜಿ ಮಾಡುತ್ತಿರುವುದು ಸಂಘದ ಉನ್ನತಿಗೆ ಮುಖ್ಯವಾದ ಕಾರಣ ಎಂದರು.
ಮುಖ್ಯ ಅಥಿತಿಯಾಗಿ ಆಗಮಿಸಿದ ಜೆಸಿಐ ಅಧ್ಯಕ್ಷರಾದ ಅಮಿತಾ ಆಶೋಕ್ ಅವರು ಮಾತನಾಡಿ, ಯಾವುದೇ ಸಹಕಾರಿ ಸಂಘವು ಆರೋಗ್ಯ ಶಿಬಿರವನ್ನು ಆಯೋಜಿಸುವುದಿಲ್ಲ, ಆದರೆ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಈ ನಿಟ್ಟಿನಲ್ಲಿ ಆರೋಗ್ಯ ಶಿಬಿರಗಳನ್ನು ಆಯೋಜಿಸಿ ಜನರ ಆರೋಗ್ಯದ ಕಾಳಜಿ ವಹಿಸುತ್ತಿರುವುದು ತುಂಬಾ ಶ್ಲಾಘನೀಯ ಎಂದರು.
ಈ ಕಾರ್ಯಕ್ರಮದ ಇನ್ನೋರ್ವ ಮುಖ್ಯ ಅತಿಥಿಯಾದ ಮಾಲಾಡಿ ಗ್ರಾಮ ಪಂಚಾಯತ್‌ನ ಅಧ್ಯಕ್ಷರಾದ ಪುನೀತ್ ಅವರು ಮಾತನಾಡಿ, ಸಮಾಜ ಏನು ಕೊಡುತ್ತದೆ ಎಂಬ ಈ ಕಾಲದಲ್ಲಿ ನಾವು ಸಮಾಜಕ್ಕೆ ಏನು ನೀಡಬೇಕು ಎಂಬುದನ್ನು ಆಲೋಚಿಸಿ ಸಾಮಾಜಿಕ ಕಾರ್ಯ ನಡೆಸುತ್ತಿರುವ ಈ ಸಂಸ್ಥೆಯು ಇನ್ನಷ್ಟೂ ಅಭಿವ್ರೃದ್ದಿಯಾಗಲಿ ಎಂದು ಶುಭ ಹಾರೈಸಿದರು.
ಈ ಕಾರ್ಯಕ್ರಮದ ಇನ್ನೋರ್ವ ಅತಿಥಿಯಾದ ಸ್ಥಳೀಯ ಜುಮ್ಮಾ ಮಸೀದಿಯ ಅಧ್ಯಕ್ಷರಾದ ಶೇಕ್ ಅಬ್ದುಲ್ ಲತೀಫ್ ಸಾಹೆಬ್ ಅವರು ಮಾತನಾಡಿ, ಮನುಷ್ಯರಿಗೆ ಆರೋಗ್ಯವೇ ಭಾಗ್ಯ, ಎಲ್ಲಾ ರೀತಿಯ ಸಾಧನೆಗೆ ಆರೋಗ್ಯವು ಮುಖ್ಯವಾದದ್ದು. ರೋಗದ ಸೂಚನೆ ಬಂದಾಗಲೇ ಸೂಕ್ತ ಚಿಕಿತ್ಸೆ ಪಡೆಯುವುದು ಮುಖ್ಯವೆಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್‌ ಅವರು ಮಾತಾನಾಡಿ, ಇತ್ತೀಚಿನ ದಿನಗಳಲ್ಲಿ ಬದಲಾದ ಆಹಾರ ಪದ್ದತಿಯಿಂದಾಗಿ ಯುವಕ ಯುವತಿಯರು ಮಾರಕ ರೋಗಗಳಿಗೆ ತುತ್ತಾಗುತ್ತಿದ್ದಾರೆ. ಆದುದರಿಂದ ಆರೋಗ್ಯ ತಪಾಸಣೆಯನ್ನು ಮಾಡುವುದು ಉತ್ತಮ. ಹಣವನ್ನು ಯಾವಾಗ ಬೇಕಾದರೂ ಸಂಪಾದಿಸಬಹುದು. ಆದರೆ ಆರೋಗ್ಯವನ್ನು ಸಂಪಾದಿಸಿಲು ಸಾಧ್ಯವಿಲ್ಲ , ಜನರು ತಮ್ಮ ಆರೋಗ್ಯ ಕಡೆಗೆ ಗಮನವನ್ನು ಹರಿಸಬೇಕೆಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನಿರ್ದೇಶಕರಾದ ಗೋಪಾಲ್ ಎಂ., ಮುಖ್ಯಕಾರ್ಯನಿರ್ವಾಹಣಾಧಿಕಾರಿ ಸೌಮ್ಯ ವಿಜಯ್, ಎ.ಜೆ. ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ನ ಸಾಮಾನ್ಯ ವೈದ್ಯಕೀಯ ವಿಭಾಗದ ಡಾ. ರಾಹುಲ್, ಸ್ವರ್ಣ ಸಂಜೀವಿನಿ ಸೇವಾ ಟ್ರಸ್ಟ್ ನ ಅಧ್ಯಕ್ಷರಾದ ಸಚಿನ್ ಕೊಡ್ಲಕ್ಕೆ, ಮಡಂತ್ಯಾರು ಪಂಚಾಯತ್ ಸದಸ್ಯರಾದ ವಿಶ್ವನಾಥ್ ಪೂಜಾರಿ ಮತ್ತಿತರರು ಉಪಸ್ಧಿತರಿದ್ದರು.
ಕಾರ್ಯಕ್ರಮದಲ್ಲಿ ಸುಮಾರು 250ಕ್ಕೂ ಮಿಕ್ಕಿ ಶಿಬಿರಾರ್ಥಿಗಳಿಗೆ ಆರೋಗ್ಯ ತಪಾಸಣೆ ಹಾಗೂ ದಂತ ಚಿಕಿತ್ಸೆ, ಕಣ್ಣಿನ ತಪಾಸಣೆ ಮತ್ತು ಇ.ಸಿ.ಜಿ ತಪಾಸಣೆ ಮಾಡಲಾಯಿತು.
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಹಿರಿಯ ಶಾಖಾಧಿಕಾರಿ ರವಿಕಲಾ ಇವರು ಸ್ವಾಗತಿಸಿ, ಪ್ರಜ್ಞಾ ವಂದಿಸಿದರು. ಕಾವ್ಯ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು