ಇತ್ತೀಚಿನ ಸುದ್ದಿ
ಆತ್ಮಶಕ್ತಿ ವಿವಿಧೋದ್ಧೇಶ ಸಹಕಾರಿ ಸಂಘದ 31ನೇ ನೂತನ ಎಲ್ಯಾರ್ ಪದವು ಶಾಖೆಯ ಶುಭಾರಂಭ
03/05/2024, 22:51
ಮಂಗಳೂರು(reporterkarnataka.com): ಸಹಕಾರಿ ಕ್ಷೇತ್ರದ ಅಗ್ರಗಣ್ಯ ಸಹಕಾರಿ ಸಂಘ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ, ರಾಜ್ಯ ಮತ್ತು ರಾಷ್ಟ್ರೀಯ ಪುರಸ್ಕಾರ ಪಡೆದಿರುವ ಮಂಗಳೂರು ಪಡೀಲ್‍ನ ಆತ್ಮಶಕ್ತಿ ಸೌಧದಲ್ಲಿ ಕೇಂದ್ರ ಕಚೇರಿಯನ್ನು ಹೊಂದಿರುವ ಆತ್ಮಶಕ್ತಿ ವಿವಿಧೋದ್ಧೇಶ ಸಹಕಾರಿ ಸಂಘ ನಿಯಮಿತ ಇದರ 31ನೇ ನೂತನ ಎಲ್ಯಾರ್ ಪದವು ಶಾಖೆ ಹೋಲಿಕ್ರಾಸ್ ಚರ್ಚ್ ನ ಬಳಿಯಿರುವ ಶರೂನ್ ಸ್ಟ್ರಕ್ಟರ್ ನ ಮೊದಲನೇ ಮಹಡಿಯಲ್ಲಿ ಬುಧವಾರ ಶುಭಾರಂಭಗೊಂಡಿತು.
ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷ ಯು.ಟಿ.ಖಾದರ್ ಅವರು ನೂತನ ಶಾಖೆಯನ್ನು ಉದ್ಘಾಟಿಸಿ, ಶ್ರೀಮಂತ ವರ್ಗದವರಿಗೆ ನಗರ ಪ್ರದೇಶದಲ್ಲಿ ರಾಷ್ಟ್ರೀಕೃತ ಬ್ಯಾಂಕುಗಳು ಸಾಲ ನೀಡುತ್ತದೆ. ಆದರೆ ಗ್ರಾಮೀಣ ಪ್ರದೇಶದ ಜನರ ಆರ್ಥಿಕ ಮಟ್ಟವನ್ನು ಉತ್ತಮ ಪಡಿಸುವ ನಿಟ್ಟಿನಲ್ಲಿ ಸಹಕಾರಿ ಸಂಘಗಳ ಸ್ಥಾಪನೆಗೆ ಆದ್ಯತೆ ನೀಡಿದ್ದು, ಇದೀಗ ಎಲ್ಯಾರ್ ಪದವಿನಂತಹ ಹಿಂದುಳಿದ ಪ್ರದೇಶದಲ್ಲಿ ಆತ್ಮಶಕ್ತಿ ವಿವಿಧೋದ್ಧೇಶ ಸಹಕಾರಿ ಸಂಘ ನೂತನ ಶಾಖೆಯನ್ನು ಆರಂಬಿಸುವ ಮೂಲಕ ಸಹಕಾರಿ ಕ್ಷೇತ್ರದ ನಿಜವಾದ ಧ್ಯೇಯ ಉದ್ಧೇಶವನ್ನು ಈ ಸಂಘ ಮಾಡಿ ತೋರಿಸಿದೆ. ಮೂರು ಗ್ರಾಮಗಳ ಸಮ್ಮಿಲನದ ಈ ಪ್ರದೇಶ ವಾಣಿಜ್ಯವಾಗಿ ಅಭಿವೃದ್ಧಿ ಹೊಂದಿಲ್ಲ. ಇಂತಹ ಪ್ರದೇಶದಲ್ಲಿ ಜನರಿಗೆ ಸಹಕಾರಿ ಸೇವೆಯನ್ನು ನೀಡುವ ಸಾಮಾಜಿಕ ಕಳಕಳಿ ಶ್ಲಾಘನೀಯವಾಗಿದ್ದು. ಈ ಪ್ರದೇಶದ ಜನರ ಆರ್ಥಿಕ ಕಾರ್ಯಕ್ಕೆ ಬೆಂಬಲ ನೀಡುವ ಮೂಲಕ ಉತ್ತಮ ಗ್ರಾಹಕ ಸೇವೆಯೊಂದಿಗೆ ಪ್ರದೇಶದ ಅಭಿವೃದ್ಧಿಗೂ ಕೊಡುಗೆ ನೀಡಲಿ ಎಂದರು.
ಆತ್ಮಶಕ್ತಿ ವಿವಿಧೋದ್ಧೇಶ ಸಹಕಾರಿ ಸಂಘದ ಅಧ್ಯಕ್ಷ, ಸಹಕಾರ ರತ್ನ ಚಿತ್ತರಂಜನ್ ಬೋಳಾರ ಮಾತನಾಡಿ, ಆತ್ಮಶಕ್ತಿ ವಿವಿಧೋದ್ಧೇಶ ಸಹಕಾರಿ ಸಂಘದ ಎರಡನೇ ಶಾಖೆ ಆರಂಭಗೊಂಡಿದ್ದು ಉಳ್ಳಾಲದ ಮಾಡೂರಿನಲ್ಲಿ. ಅಂದಿನಿಂದ ಇಂದಿನವರೆಗೆ ಯು.ಟಿ.ಖಾದರ್ ಅವರು ಸಂಘದ ಶಾಖೆಯನ್ನು ಉದ್ಘಾಟಿಸಿದ್ದು ಲಾಭದಾಯಕವಾಗಿ ನಡೆಯುತ್ತಿದೆ. ಸಂಘ ಯಶಸ್ವಿಯಾಗಿ ಇಷ್ಟು ಶಾಖೆಗಳು ಆರಂಭಗೊಳ್ಳಲು ಮತ್ತು ಹತ್ತನೇ ವರ್ಷದಲ್ಲಿ ಸ್ವಂತ ಪ್ರಧಾನ ಕಚೇರಿ ನಿರ್ಮಾಣಕ್ಕೆ ಮುಖ್ಯ ಕಾರಣ ಸಂಘದ ಗ್ರಾಹಕರು, ಸದಸ್ಯರು ಮತ್ತು ಸಂಘದ ಆಡಳಿತ ಮಂಡಳಿಯೊಂದಿಗೆ ಸಿಬಂದಿ ವರ್ಗ ಕಾರಣವಾಗಿದ್ದಾರೆ ಎಂದು ನುಡಿದರು.
ಎಲ್ಯರ್ ಪದವು ಹೊಲಿ ಕ್ರಾಸ್ ಚರ್ಚ್‌ನ ಧರ್ಮಗುರು ಎಫ್.ಆರ್.ಜಾನ್ ಡಿ’ಸೋಜ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕುತ್ತಾರು ಶ್ರೀ ಪಂಜದಾಯ ಬಂಟ ದೈವಗಳ ಆದಿ ಕೊರಗತನಿಯ ಸೇವಾ ಟ್ರಸ್ಟ್‌ನ ಉಪಾಧ್ಯಕ್ಷ ದೆಬ್ಬೇಲಿ ಮಹಾಬಲ ಹೆಗ್ಡೆ ಮಾಗಣ್ತಡಿ ಭದ್ರತಾಕೋಶ ಉದ್ಘಾಟಿಸಿದರು. ಕೊಣಾಜೆ ಬೆಳ್ಮ ಸಿಎಸ್‍ಐ ಬೆತಾನೀಯ ಚರ್ಚ್‌ನ ಧರ್ಮಗುರು ರೆ| ವಿನಯಲಾಲ್ ಬಂಗೇರ ನಿರಖು ಠೇವಣಿ ಪತ್ರ ಬಿಡುಗಡೆಗೊಳಿಸಿದರು. ಕೊಣಾಜೆ ಗ್ರಾಪಂ ಅಧ್ಯಕ್ಷೆ ಗೀತಾ ದಾಮೋದರ ಗಣಕೀಕೃತ ಬ್ಯಾಂಕಿಂಗ್‍ಗೆ ಚಾಲನೆ ನೀಡಿದರು. ಅಂಬ್ಲಮೊಗರು ಗ್ರಾಪಂನ ಎಸ್.ಮಹಮ್ಮದ್ ಇಕ್ಬಾಲ್ ಇ ಮುದ್ರಾಂಕ ಸೇವೆಗೆ ಚಾಲನೆ ನೀಡಿದರು. ಗ್ರಾಮಚಾವಡಿ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘದ ಅಧ್ಯಕ್ಷ ರವೀಂದ್ರ ಬಂಗೇರ ಆವರ್ತನ ಠೇವಣಿಗೆ ಚಾಲನೆ ನೀಡಿದರು. ಶ್ರೀ ಆದಿಮಾಯೆ ರಾಮ ದತ್ತಾಂಜನೇಯ ಭಜನಾ ಮಂದಿರದ ಅಧ್ಯಕ್ಷ ಚಂದ್ರಹಾಸ್ ನಾಯ್ಕ ಉಳಿತಾಯ ಖಾತೆಗೆ ಚಾಲನೆ ನೀಡಿದರು. ನಿವೃತ್ತ ಮುಖ್ಯ ಶಿಕ್ಷಕ ರವೀಂದ್ರ ರೈ ಕಲ್ಲಿಮಾರು, ಎಲ್ಯಾರ್ ಪದವು ಹಾಲು ಉತ್ಪಾದಕರ ಸಂಘದ ಅಧ್ಯಕ್ಷೆ ಎಡ್‍ಲೈನ್ ಐಮನ್, ಕಟ್ಟಡದ ಮಾಲಕ ರೆನೋಲ್ಡ್ ಜಿ ಅಮ್ಮಣ್ಣ, ಪಜೀರ್ ಗೋಶಾಲೆಯ ಟ್ರಸ್ಟಿ ಶಿವಪ್ರಸಾದ್ ಅವರು
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ನಿರ್ದೇಶಕರಾದ ಪರಮೇಶ್ವರ ಪೂಜಾರಿ, ಆನಂದ ಎಸ್. ಕೊಂಡಾಣ, ಚಂದ್ರಹಾಸ ಮರೋಳಿ, ಗೋಪಾಲ್ ಎಂ. ಸಲಹೆಗಾರರಾದ ಅಶೋಕ್ ಕುಮಾರ್ ಉಪಸ್ಥಿತರಿದ್ದರು.
ಮುಖ್ಯಕಾರ್ಯನಿರ್ವಹಣಾಧಿಕಾರಿ ಸೌಮ್ಯವಿಜಯ್ ಸ್ವಾಗತಿಸಿದರು. ಉಪಾಧ್ಯಕ್ಷ ನೇಮಿರಾಜ್ ಪಿ. ವಂದಿಸಿದರು. ಸಿಬ್ಬಂದಿ ಹರ್ಷಿತಾ ಕಾರ್ಯಕ್ರಮ ನಿರ್ವಹಿಸಿದರು.
* ಕೊರೊನಾ ಸಂದರ್ಭದಲ್ಲಿ ಕಡಿಮೆ ಬಡ್ಡಿದರದಲ್ಲಿ ಚಿನ್ನಾಭರಣ ಸಾಲ ನೀಡಿ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿತ್ತು. ಸಂಘ ಸಾಮಾಜಿಕ, ಶೈಕ್ಷಣಿಕ, ಆರೋಗ್ಯ ಕ್ಷೇತ್ರದಲ್ಲಿಯೂ ಸಾಧನೆ ಮಾಡಿದೆ. ನೂತನ ಶಾಖೆಯಿಂದ ಬೇರೆ ಬ್ಯಾಂಕ್‍ಗಳಿಗೆ ಡಿಪಾಸಿಟ್ ಮಾಡಲು ಆರ್‍ಟಿಜಿಎಸ್ ಸೌಲಭ್ಯ, ಇಮುದ್ರಾಂಕ, ಆರೋಗ್ಯ ವಿಮೆ, ಸಾಲ ವಿಮಾ ಭದ್ರತೆ ಸೇರಿದಂತೆ ವಿವಿಧ ಬ್ಯಾಂಕಿಂಗ್ ಸವಲತ್ತುಗಳನ್ನು ಗ್ರಾಹಕರು ಪಡೆದುಕೊಳ್ಳಬಹುದು.
– ಸಹಕಾರ ರತ್ನ ಚಿತ್ತರಂಜನ್ ಬೋಳಾರ