1:26 AM Saturday11 - January 2025
ಬ್ರೇಕಿಂಗ್ ನ್ಯೂಸ್
ರಾಷ್ಟ್ರೀಯ ಜಲಮಾರ್ಗಗಳ ಪ್ರಮುಖ ಮೂಲಸೌಕರ್ಯ ನವೀಕರಣಕ್ಕೆ 5 ವರ್ಷಗಳಲ್ಲಿ 50,000 ಕೋಟಿ ಹೂಡಿಕೆ… ರಾಜ್ಯವನ್ನು “ಕೌಶಲ್ಯ ಅಭಿವೃದ್ಧಿ ಹಬ್‌” ಮಾಡುವುದೇ ನಮ್ಮ ಸರ್ಕಾರದ ಗುರಿ!;ಜಿಟಿಟಿಸಿ ಕೈಗಾರಿಕೆ-ಶೈಕ್ಷಣಿಕ ಸಮಾವೇಶದಲ್ಲಿ… ರಾಜ್ಯದಲ್ಲಿ ಪ್ರತಿಯೊಂದಕ್ಕೂ ರೇಟ್ ಫಿಕ್ಸ್ ಆಗಿದೆ: ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪ ಸಂಕಷ್ಟಕ್ಕೀಡಾದ ಬಿಗ್ ಬಾಸ್ ಸೀಸನ್ 11: ಶೋ ನಿಲ್ಲಿಸುವಂತೆ ಬೆಂಗಳೂರು ಜಿಪಂ ಸಿಇಒ… ಶೃಂಗೇರಿ ದೇಗುಲಕ್ಕೆ ನಾಳೆ ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿ: ಸುವರ್ಣ ಮಹೋತ್ಸವದಲ್ಲಿ ಭಾಗಿ ಸುಪ್ರೀಂ ಕೋರ್ಟ್ ತೀರ್ಪು ಉಲ್ಲಂಘನೆ: ಸರಕಾರಿ ನೌಕರರ ಸಂಘಕ್ಕೆ ಚುನಾವಣೆಗೆ ಸಿವಿಲ್ ಕೋರ್ಟ್… ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರಕಾರಿ ಬಸ್: ಪ್ರಯಾಣಿಕರಲ್ಲಿ ಆತಂಕ ಬಳ್ಳಾರಿಯಲ್ಲಿ ಜೀನ್ಸ್ ಪಾರ್ಕ್ ಸ್ಥಾಪನೆ, ರಾಹುಲ್ ಗಾಂಧಿ ಕೊಟ್ಟಿದ್ದ ಭರವಸೆ ಸಾಕಾರ: ಸಚಿವ… ನಿಮ್ಹಾನ್ಸ್‌ನಲ್ಲಿ ಕರ್ನಾಟಕ ಆಡಳಿತ ಸೇವೆಯ ಅಧಿಕಾರಿಯ ನೇಮಕಾತಿಗೆ ಕ್ರಮ ಕೈಗೊಳ್ಳಿ: ಮುಖ್ಯಮಂತ್ರಿ ಸೂಚನೆ ದೇಸಿ ತಿನಿಸಿನ ಬೇಡಿಕೆ ಹೆಚ್ಚಸಲು ಕ್ರಮ: ಸಚಿವ ಎನ್. ಚಲುವರಾಯಸ್ವಾಮಿ

ಇತ್ತೀಚಿನ ಸುದ್ದಿ

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನೂತನ 31ನೇ ಎಲ್ಯಾರ್‌ಪದವು ಶಾಖೆ ಮೇ 1ರಂದು ಉದ್ಘಾಟನೆ

29/04/2024, 23:23

ಮಂಗಳೂರು(reporterkarnataka.com): ನಗರದ ಪಡೀಲ್‌ನಲ್ಲಿ ಸ್ವಂತ ಆಡಳಿತ ಕಟ್ಟಡವನ್ನು ಹೊಂದಿರುವ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಾದ್ಯಂತ 30 ಶಾಖೆಗಳನ್ನು ಹೊಂದಿದ್ದು, ಇದೀಗ ತನ್ನ ನೂತನ 31ನೇ ಎಲ್ಯಾರ್‌ಪದವು ಶಾಖೆಯನ್ನು ಮಂಗಳೂರಿನ ಕೊಣಾಜೆಯ ಎಲ್ಯಾರ್‌ಪದವಿನಲ್ಲಿರುವ ಹೋಲಿ ಕ್ರಾಸ್ ಚರ್ಚ್ ಬಳಿಯ ‘ಶರೂನ್ ಸ್ಟçಕ್ಚರ್’ ಕಾಂಪ್ಲೆಕ್ಸ್ನಲ್ಲಿ ಮೇ 1ರಂದು ಬುಧವಾರ ಬೆಳಿಗ್ಗೆ 9.30 ಗಂಟೆಗೆ ಸಾರ್ವಜನಿಕ ಸೇವೆಗಾಗಿ ಲೋಕಾರ್ಪಣೆಗೊಳ್ಳಲಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ_ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಅವರು ವಹಿಸಲಿದ್ದಾರೆ. ವಿಧಾನಸಭೆ ಸಭಾಧ್ಯಕ್ಷ ಯು. ಟಿ. ಖಾದರ್ ನೂತನ ಶಾಖೆಯ ಉದ್ಘಾಟನೆಯನ್ನು ಮಾಡಲಿದ್ದಾರೆ. ಹೊಲಿ ಕ್ರಾಸ್ ಚರ್ಚ್, ಎಲ್ಯಾರ್‌ಪದವು ಇಲ್ಲಿಯ ಧರ್ಮಗುರುಗಳಾದ ಫಾ. ಆರ್. ಜಾನ್ ಡಿ ಸೋಜ ಅವರು ದೀಪ ಪ್ರಜ್ವಲನೆ ಮಾಡಲಿದ್ದಾರೆ. ಪಂಜದಾಯ ಬಂಟ ದೈವಗಳ ಆದಿ ಕೊರಗತನಿಯ ಸೇವಾ ಟ್ರಸ್ಟ್ ಕುತ್ತಾರು ಇದರ ಉಪಾಧ್ಯಕ್ಷ ಡಿ. ಮಹಾಬಲ ಹೆಗ್ಡೆ ಮಾಗಣ್ತಡಿ ಅವರು ಭದ್ರತಾಕೋಶ ಉದ್ಘಾಟನೆ ಮಾಡಲಿದ್ದಾರೆ. ಸಿ.ಎಸ್.ಐ ಬೆತಾನೀಯ ಚರ್ಚ್, ಬೆಳ್ಮ, ಕೊಣಾಜೆ ಇಲ್ಲಿಯ ಧರ್ಮಗುರುಗಳಾದ ರೆವರೆಂಡ್ ವಿನಯಲಾಲ್ ಬಂಗೇರ ಅವರು ನಿರಖು ಠೇವಣಿ ಪತ್ರ ಬಿಡುಗಡೆ ಮಾಡಲಿದ್ದಾರೆ. ಕೊಣಾಜೆ ಗ್ರಾಮ ಪಂಚಾಯತ್‌ನ ಅಧ್ಯಕ್ಷರಾದ ಗೀತಾ ದಾಮೋದರ್ ಅವರು ಗಣಕೀಕೃತ ಬ್ಯಾಂಕಿಂಗ್‌ಗೆ ಚಾಲನೆ ನೀಡಲಿದ್ದಾರೆ. ಅಂಬ್ಲಮೊಗರು ಗ್ರಾಮ ಪಂಚಾಯತ್‌ನ ಇಕ್ಬಲ್ ಅವರು ಇ-ಮುದ್ರಾಂಕ ಸೇವೆಗೆ ಚಾಲನೆ ನೀಡಲಿದ್ದಾರೆ. ಸಹಕಾರ ಸಂಘಗಳ ಉಪನಿಬಂಧಕರಾದ ರಮೇಶ್ ಎಚ್.ಎನ್, ಅವರು ಮೈಕ್ರೋ ಸಾಲ ಯೋಜನೆಗೆ ಚಾಲನೆ ನೀಡಲಿದ್ದಾರೆ. ಬ್ರಹ್ಮಶ್ರಿ ನಾರಾಯಣಗುರು ಸೇವಾ ಸಂಘ, ಗ್ರಾಮ ಚಾವಡಿ ಇದರ ಅಧ್ಯಕ್ಷ ರವೀಂದ್ರ ಬಂಗೇರ ಅವರು ಆವರ್ತನ ಠೇವಣಿಗೆ ಚಾಲನೆ ನೀಡಲಿದ್ದಾರೆ. ಆದಿಮಾಯೆ ರಾಮ ದತ್ತಾಂಜನೇಯ ಭಜನಾ ಮಂದಿರ (ರಿ.) ಎಲ್ಯಾರ್‌ಪದವು, ಇದರ ಅಧ್ಯಕ್ಷ ಚಂದ್ರಹಾಸ್ ನಾಯ್ಕ್ ಅವರು ಉಳಿತಾಯ ಖಾತೆಗೆ ಚಾಲನೆ ನೀಡಲಿದ್ದಾರೆ. ಎಲ್ಯಾರ್‌ಪದವು ಹಾಲು ಉತ್ಪಾದಕರ ಸಂಘದ ಅಧ್ಯಕ್ಷರಾದ ಎಡ್‌ಲೈನ್ ಐಮನ್, ಪಜೀರ್ ಗೋಶಾಲೆಯ ಟ್ರಸ್ಟಿಯಾದ ಶಿವಪ್ರಸಾದ್, ನಿವೃತ್ತ ಶಿಕ್ಷಕರಾದ ರವೀಂದ್ರ ರೈ ಕಲ್ಲಿಮಾರು ಹಾಗೂ ಕಟ್ಟಡದ ಮಾಲಕರಾದ ರೆನೋಲ್ಡ್ ಜಿ ಅಮ್ಮಣ್ಣ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ನೂತನ ಶಾಖೆಯ ಉದ್ಘಾಟನಾ ಸಮಾರಂಭದ ಪ್ರಯಕ್ತ ನಿರಖು ಠೇವಣಿಯ ಮೇಲೆ ವಿಶೇಷ ಬಡ್ಡಿ ದರವನ್ನು ನೀಡಲಾಗುವುದು. ಇ-ಮುದ್ರಾಂಕ, ಚಿನ್ನಾಭರಣ ಸಾಲ, ನೆಫ್ಟ್, ಆರ್‌ಟಿಜಿಎಸ್ ಸೇವೆಯು ಬೆಳಿಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಲಭ್ಯವಿದ್ದು, ಸಂಘದಲ್ಲಿ ಈಗಾಗಲೇ ಕೋರ್-ಬ್ಯಾಂಕಿಂಗ್ ಸೌಲಭ್ಯ ಅಳವಡಿಸಲಾಗಿದೆ. ಅದೇ ರೀತಿ ವಿಮಾ ಪಾಲಿಸಿಗಳಾದ ಎಲ್‌ಐಸಿ, ಕೇರ್, ಇಫ್ಕೋಟೋಕಿಯ ಜನರಲ್ ಇನ್ಸುರೆನ್ಸ್ ಕಂಪೆನಿಯ ವಿಮಾ ಸೌಲಭ್ಯಗಳು ಲಭ್ಯವಿರುತ್ತದೆ ಎಂದು ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೌಮ್ಯ ವಿಜಯ್‌ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು