11:25 AM Sunday26 - January 2025
ಬ್ರೇಕಿಂಗ್ ನ್ಯೂಸ್
ಕಲ್ಲು ಗಣಿಗಾರಿಕೆ: ಡೈನಮೈಟ್ ಸ್ಫೋಟಕ್ಕೆ ಹಲವು ಮನೆಗಳಿಗೆ ಹಾನಿ; 6 ಸೆಕೆಂಡ್ ಕಂಪಿಸಿದ… ಚಾರ್ಮಾಡಿ ಘಾಟಿ ಕಾಡ್ಗಿಚ್ಚು: ಅಗ್ನಿಶಾಮಕ‌ ದಳ, ಅರಣ್ಯ ಇಲಾಖೆ ಸಿಬ್ಬಂದಿ ಶ್ರಮದಿಂದ ಬೆಂಕಿ… ಮೈಕ್ರೋ ಫೈನಾನ್ಸ್‌ ನಿಯಂತ್ರಣಕ್ಕೆ ಸುಗ್ರೀವಾಜ್ಞೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಐತಿಹಾಸಿಕ ಸುತ್ತೂರು ಜಾತ್ರಾ ಮಹೋತ್ಸಕ್ಕೆ ಸುತ್ತೂರು ಶ್ರೀಗಳು ಚಾಲನೆ; ಮಹಾ ದಾಸೋಹಕ್ಕೆ ಕ್ಷಣಗಣನೆ ಕುವೆಂಪು ಆಶಯಕ್ಕೆ ಕೊಳ್ಳಿ: ಕುಪ್ಪಳಿಯಲ್ಲಿ ಅದ್ದೂರಿ ಮಂತ್ರ ಮಾಂಗಲ್ಯ; ಸಿನಿಮಾ ತಾರೆಯರಿಗಾಗಿ ರಂಗು… ಮನೆ ಸೀಝ್ ಮಾಡಿ ಬಾಣಂತಿ- ಮಗುವನ್ನು ಹೊರಹಾಕಿದ ಖಾಸಗಿ ಫೈನಾನ್ಸ್: ಬೀಗ ತೆರವುಗೊಳಿಸಿದ… ಗೃಹಲಕ್ಷ್ಮೀ ಮೂಲಕ ಮಹಿಳೆಯರ ಸಬಲೀಕರಣ, ಮೈಕ್ರೋ ಫೈನಾನ್ಸ್ ಮೂಲಕ ಜೀವಹರಣ: ಕೇಂದ್ರ ಸಚಿವ… 7-8 ವರ್ಷ ಕಳೆದರೂ ಹಸ್ತಾಂತರವಾಗದ ಶಾಲಾ ಕೊಠಡಿ: ಮಾಹಿತಿ ಇಲ್ಲವೆಂದ ಬಿಇಒ; ಶಿಕ್ಷಣ… ಯುನಿಸೆಕ್ಸ್ ಸೆಲೂನ್ ದಾಳಿಕೋರರ ವಿರುದ್ದ ಕ್ರಮಕ್ಕೆ ಸೂಚನೆ ನೀಡಿದ್ದೇನೆ: ಉಡುಪಿಯಲ್ಲಿ ಗೃಹ ಸಚಿವ… ಏಪ್ರಿಲ್ ಅಂತ್ಯದೊಳಗೆ 3 ಸಾವಿರ ಲೈನ್ ಮೆನ್ ಗಳ ನೇಮಕ: ಬೀದರ್ ನಲ್ಲಿ…

ಇತ್ತೀಚಿನ ಸುದ್ದಿ

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಹಂಪನಕಟ್ಟೆ: ಉಚಿತ ವೈದ್ಯಕೀಯ ತಪಾಸಣಾ ಶಿಬಿರ

25/08/2024, 20:22

ಮಂಗಳೂರು(reporterkarnataka.com): ದ.ಕ. ಜಿಲ್ಲಾ ನಿವೃತ್ತ ಸರಕಾರಿ ನೌಕರರ ಸಂಘ ಮಂಗಳೂರು ಮತ್ತು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಜಂಟಿ ಸಹಯೋಗದೊಂದಿಗೆ ನಾಟೆಕಲ್ ನ ಕಣಚೂರು ಮೆಡಿಕಲ್ ಕಾಲೇಜು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ವೈದ್ಯರ ತಂಡದವರಿಂದ ಉಚಿತ ನೇತ್ರ ತಪಾಸಣಾ ಮತ್ತು ಸಾಮಾನ್ಯ ವೈದ್ಯಕೀಯ ತಪಾಸಣಾ ಶಿಬಿರವು ರಾಜ್ಯ ಸರ್ಕಾರಿ ನೌಕರರ ಸಂಘದ ಸಮುದಾಯ ಭವನ ಕಟ್ಟಡದ ಎರಡನೇ ಮಹಡಿಯಲ್ಲಿ ಜರುಗಿತು.
ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ದ. ಕ. ಜಿಲ್ಲೆಯ ಅಧ್ಯಕ್ಷ ಎಚ್.ಗಣೇಶ್ ರಾವ್ ಉದ್ಘಾಟಿಸಿ, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಅವರ ಮುಂದಾಳತ್ವದಲ್ಲಿ ಬ್ಯಾಂಕಿಂಗ್ ವ್ಯವಹಾರದ ಜೊತೆಗೆ ಸಾಮಾಜಿಕ ಚಟುವಟಿಕೆಯಲ್ಲಿ ತೊಡಗಿಸಿಕೊಂಡು ಸಮಾಜದ ಎಲ್ಲಾ ವರ್ಗದ ಜನರಿಗೆ ಆರೋಗ್ಯದ ದೃಷ್ಟಿಯಿಂದ ಜನರ ಕಾಳಜಿ ಮಾಡುತ್ತಿರುವುದು ಸಂಘದ ಉನ್ನತಿಗೆ ಮುಖ್ಯವಾದ ಕಾರಣ ಎಂದರು.
ಈ ಕಾರ್ಯಕ್ರಮದಲ್ಲಿ ದ. ಕ. ಜಿಲ್ಲಾ ನಿವೃತ್ತ ಸರಕಾರಿ ನೌಕರರ ಸಂಘದ ಅಧ್ಯಕ್ಷರು, ಹಾಗೂ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನಿರ್ದೇಶಕರಾದ ಸೀತಾರಾಮ್ ಎನ್ ಮಾತನಾಡಿ, ನಿವೃತ್ತರಿಗೆ ಆರೋಗ್ಯ ತಪಾಸಣಾ ಶಿಬಿರಗಳು ತುಂಬಾ ಅಗತ್ಯವಾಗಿರುತ್ತದೆ. ಇಂತಹ ವ್ಯವಸ್ಥಿತವಾದ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲು ನಮ್ಮೊಂದಿಗೆ ಸಹಕರಿಸಿದ ಆತ್ಮಶಕ್ತಿ ಸಹಕಾರಿ ಸಂಘದ ಸೇವೆಯು ಶ್ಲಾಘನೀಯ ವಾದುದು. ಆದ್ದರಿಂದ ಎಲ್ಲರೂ ಈ ಶಿಬಿರದ ಪ್ರಯೋಜನೆಯನ್ನು ಪಡೆದು ಶಿಬಿರವನ್ನು ಯಶಸ್ವಿಗೊಳಿಸಬೇಕಾಗಿ ಕೇಳಿಕೊಳ್ಳುತ್ತೇನೆ ಎಂದರು.
ಅಧ್ಯಕ್ಷತೆಯನ್ನು ವಹಿಸಿದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್‌ ಅವರು ಮಾತಾನಾಡಿ, ಸಂಘವು ಎಲ್ಲಾ ಶಾಖೆಗಳಲ್ಲಿ ವಾರ್ಷಿಕೋತ್ಸವದ ಸಂದರ್ಭದಲ್ಲಿ ಉಚಿತ ಆರೋಗ್ಯ ಶಿಬಿರವನ್ನು ಆಯೋಜಿಸುತ್ತಾ ಬಂದಿದೆ. ಈ ಬಾರಿಯ ವೈದ್ಯಕೀಯ ಶಿಬಿರಕ್ಕೆ ಸಹಕಾರ ನೀಡಿದ ದ.ಕ ಜಿಲ್ಲಾ ನಿವೃತ್ತ ಸರಕಾರಿ ನೌಕರರ ಸಂಘಕ್ಕೆ ಧನ್ಯವಾದಗಳನ್ನು ಅರ್ಪಿಸುವುದರೊಂದಿಗೆ ಇನ್ನು ಮುಂದಿನ ದಿನಗಳಲ್ಲಿಯೂ ಇದೇ ರೀತಿ ಸಹಕಾರವಿರಲಿ.
ಇಂದಿನ ಈ ಶಿಬಿರವು ಎಲ್ಲರಿಗೂ ಉಪಯುಕ್ತವಾಗಲಿ ಎಂದು ಹೇಳಿದರು.

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಕಳೆದ 11 ವರ್ಷಗಳಿಂದ ಸುಮಾರು 72ಕ್ಕೂ ಮಿಕ್ಕಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಿ, ಶಿಬಿರಾರ್ಥಿಗಳಿಗೆ ಉಚಿತ ಔಷಧಿ ವಿತರಣೆ , ಉಚಿತ ಕನ್ನಡಕ ವಿತರಣೆ, ಅಗತ್ಯವುಳ್ಳವರಿಗೆ ಉಚಿತ ಕಣ್ಣಿನ ಪೊರೆಯ ಚಿಕಿತ್ಸೆಯನ್ನು ಸಹಭಾಗಿ ಆಸ್ಪತ್ರೆಗಳಲ್ಲಿ ನಡೆಸುತ್ತಾ ಬಂದಿರುತ್ತದೆ ಎಂದರು.
ಈ ಕಾರ್ಯಕ್ರಮದಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಉಪಾಧ್ಯಕ್ಷ ನೇಮಿರಾಜ್ ಪಿ. ನಿರ್ದೇಶಕರಾದ ಜಿ. ಪರಮೇಶ್ವರ ಪೂಜಾರಿ, ರಮನಾಥ್ ಸನಿಲ್, ಗೋಪಾಲ್ ಎಂ., ದ.ಕ. ಜಿಲ್ಲಾ ನಿವೃತ್ತ ಸರಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷರಾದ ಬಿ.ಎಂ. ರಾಜ್ ಗೋಪಾಲ್, ಹಾಗೂ ಗೌರವಾಧ್ಯಕ್ಷರಾದ ಉಮೇಶ್ ಕುಮಾರ್, ಕಣಚೂರು ಮೆಡಿಕಲ್ ಕಾಲೇಜು, ಆಸ್ಪತ್ರೆಯ ಕಣ್ಣಿನ ತಜ್ಞರಾದ ಆಶಾ , ಸಾರ್ವಜನಿಕ ಸಂಪರ್ಕ ಅಧಿಕಾರಿ ರಶೀದ್, ಮುಂತಾದವರು ಉಪಸ್ಧಿತರಿದ್ದರು.
ಕಾರ್ಯಕ್ರಮದಲ್ಲಿ ಸುಮಾರು 200ಕ್ಕೂ ಮಿಕ್ಕಿ ಶಿಬಿರಾರ್ಥಿಗಳು ಈ ಶಿಬಿರದ ಪ್ರಯೋಜನವನ್ನು ಪಡೆದುಕೊಂಡರು.
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಹಿರಿಯ ಶಾಖಾಧಿಕಾರಿ ರವಿಕಲಾ ಅವರು ಸ್ವಾಗತಿಸಿ,ಶಾಖಾಧಿಕಾರಿ ಚಿತ್ರಾವತಿ ವಂದಿಸಿದರು. ಸ್ವಾತಿ ಕಾರ್ಯಕ್ರಮ ನಿರೂಪಿಸಿದರು. ಉಚಿತ ವೈದ್ಯಕೀಯ ತಪಾಸಣಾ ಶಿಬಿರದ ಸಂಯೋಜನೆಯನ್ನು ಶಾಖಾಧಿಕಾರಿ ಅಕ್ಷತಾ ಕೆ. ನಡೆಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು