1:37 PM Tuesday2 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದಿಂದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

22/06/2024, 21:36

ಮಂಗಳೂರು(reporterkarnataka.com):ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘ ಮಂಗಳೂರು
ವತಿಯಿಂದ ನಗರದ ಪಡೀಲ್‌ನಲ್ಲಿರುವ ಆತ್ಮಶಕ್ತಿ ಸೌಧದಲ್ಲಿ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಹಾಗೂ ಗಣ್ಯರು ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತಾನಾಡಿದ ಸಂಘದ ಅಧ್ಯಕ್ಷರು ಯೋಗ ದಿನಾಚರಣೆಯ ಮಹತ್ವದ ಬಗ್ಗೆ ಸಂಘದ ಸಿಬ್ಬಂದಿಗಳಿಗೆ ಮಾಹಿತಿ ನೀಡಿದರು. ಶ್ರೀ ಪತಾಂಜಲಿ ಯೋಗ ಶಿಕ್ಷಣ ಪ್ರತಿಷ್ಠಾನದ ರಾಜ್ಯ ಸಂಚಾಲಕರಾದ ರವೀಶ್ ಅವರು ಸಂಘದ ಸಿಬ್ಬಂದಿಗಳಿಗೆ ಯೋಗಾಸನ ಮಾಡಿಸುವ ಮೂಲಕ ಯೋಗ ದಿನಾಚರಣೆ ನಡೆಸಿಕೊಟ್ಟರು. ಈ ಕಾರ್ಯಕ್ರಮದಲ್ಲಿ ಶ್ರೀ ಪತಾಂಜಲಿ ಯೋಗ ಶಿಕ್ಷಣ ಪ್ರತಿಷ್ಠಾನದ ರಾಜ್ಯ ಸಂಚಾಲಕರು ಹಾಗೂ ಯೋಗ ಶಿಕ್ಷಕರಾದ ರವೀಶ್ ಅವರನ್ನು ಸಂಘದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಸಂಘದ ಉಪಾಧ್ಯಕ್ಷರಾದ ನೇಮಿರಾಜ್. ಪಿ., ನಿರ್ದೇಶಕರಾದ ಗೋಪಾಲ್ ಎಂ., ಉಮಾವತಿ, ಸಲಹೆಗಾರರಾದ ಅಶೋಕ್ ಕುಮಾರ್ ಹಾಗೂ ಸಂಘದ ಸಿಬ್ಬಂದಿ ವರ್ಗದವರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು