6:50 AM Monday29 - June 2026
ಬ್ರೇಕಿಂಗ್ ನ್ಯೂಸ್
2 ದಿನಗಳ ರಾಜ್ಯ ಪ್ರವಾಸ ಮುಗಿಸಿದ ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ… ಆರೆಸ್ಸೆಸ್ ವಿರುದ್ಧ ಪೋಸ್ಟ್ : ಗೃಹ ಸಚಿವ ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಕೋರ್ಟ್… ಕ್ರಿಪ್ಟೋ ಹೂಡಿಕೆ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಆರೋಪ: ತೀರ್ಥಹಳ್ಳಿ ಕಾಲೇಜು ಪ್ರಾಧ್ಯಾಪಕ… ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ತೂರಿದ ಪ್ರಕರಣ | 4 ಮಂದಿ… ಮುಂಬೈ | ಮೊಹರಂ ವೇಳೆ ಸಾಮೂಹಿಕ ವಿಷಪ್ರಾಶನಕ್ಕೆ ಸಂಚು: 14,900 ಕ್ಯಾಪ್ಸುಲ್‌ ವಶಕ್ಕೆ;… ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ…

ಇತ್ತೀಚಿನ ಸುದ್ದಿ

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಕರಂಗಲ್ಪಾಡಿ ಶಾಖೆಯ 11ನೇ ವಾರ್ಷಿಕೋತ್ಸವ ಹಾಗೂ ಗ್ರಾಹಕರ ಸಭೆ

13/05/2026, 20:29

ಮಂಗಳೂರು(reporterkarnataka.com):ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಕರಂಗಲ್ಪಾಡಿ ಶಾಖೆಯ 11ನೇ ವಾರ್ಷಿಕೋತ್ಸವದ ಪ್ರಯುಕ್ತ ಗ್ರಾಹಕರ ಸಭೆಯು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಅವರ ಅಧ್ಯಕ್ಷತೆಯಲ್ಲಿ ಕರಂಗಲ್ಪಾಡಿ ಶಾಖೆಯಲ್ಲಿ ಜರುಗಿತು.
ಕಾರ್ಯಕ್ರಮವನ್ನು ಸಂಘದ ಸದಸ್ಯರುಗಳಾದ ಶ್ರೀ ಪುಟ್ಟಸ್ವಾಮಿ ಎಚ್., ಶ್ರೀ ಬಿ. ಸತೀಶ್ ಶೆಟ್ಟಿ, ಶ್ರೀ ಮಾರಪ್ಪ ಪೂಜಾರಿ, ಶ್ರೀಮತಿ ಸುಮಾ ಪ್ರಸಾದ್ ಹಾಗೂ ಶ್ರೀಮತಿ ಶಾಲಿನಿ ಅವರುಗಳು ದೀಪ ಪ್ರಜ್ವಲನೆ ಮಾಡಿ ಉದ್ಘಾಟಿಸಿದರು.
ಸಂಘದ ಸದಸ್ಯರಾದ ಶ್ರೀ ಮಾರಪ್ಪ ಪೂಜಾರಿ ಯವರು ಮಾತನಾಡಿ “ಸಂಘದ ಬೆಳವಣಿಗೆಯನ್ನು ಶ್ಲಾಘಿಸಿದರು ಹಾಗೂ ಆತ್ಮಶಕ್ತಿ ಸಹಕಾರಿ ಸಂಘವು ಬ್ಯಾಂಕಿಂಗ್ ವ್ಯವಹಾರದ ಜೊತೆಗೆ ವಿವಿಧ ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದು, ಇದರ ಮಾಹಿತಿಯನ್ನು ನಾನು ದಿನಂಪ್ರತಿ ಪ್ರತಿಕೆಗಳಲ್ಲಿ ಗಮನಿಸುತ್ತಿದ್ದೇನೆ. ಸಂಘವು ಇನ್ನಷ್ಟು ಸೇವಾ ಕಾರ್ಯಕ್ರಮಗಳನ್ನು ಮುಂದಿನ ದಿನಗಳಲ್ಲಿ ಹಮ್ಮಿಕೊಳ್ಳಲಿ ಎಂದು ಶುಭ ಹಾರೈಸಿದರು.
ಸಂಘದ ಸದಸ್ಯರಾದ ಶ್ರೀ ನಾಗೇಶ್ ಶೆಣೈ ರವರು ಮಾತನಾಡಿ, “ಸಂಘದ ಸಿಬ್ಬಂದಿಗಳು ನಗುಮೊಗದಿಂದ ಗ್ರಾಹಕರಿಗೆ ಗುಣಮಟ್ಟದ ಬ್ಯಾಂಕಿಂಗ್ ಸೇವೆಯನ್ನು ನೀಡುತ್ತಿದ್ದಾರೆ” ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಸಂಘದ ಸದಸ್ಯರುಗಳಾದ ಶ್ರೀ ಎನ್.ಪಿ ಪೂವಪ್ಪ ರವರು ಮಾತನಾಡಿ, “ಆತ್ಮಶಕ್ತಿ ಸಹಕಾರಿ ಸಂಘವು ಹೆಸರಿಗೆ ತಕ್ಕಂತೆ ಆತ್ಮಸಾಕ್ಷಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಎಲ್ಲಾ ಸಂದರ್ಭದಲ್ಲಿಯೂ ಕೂಡ ಗ್ರಾಹಕರಿಗೆ ಉತ್ತಮ ಸೇವೆಯನ್ನು ನೀಡುತ್ತಿದೆ” ಎಂದು ತಿಳಿಸಿದರು.
ಸಂಘದ ಸದಸ್ಯರುಗಳಾದ ಶ್ರೀ ಸುಮನ್ ಕುಮಾರ್ ಕಂದಕ್, ಶ್ರೀ ಬಿ. ಸತೀಶ್ ಕುಮಾರ್ ಹಾಗೂ ಶ್ರೀ ಅಶೋಕ್ ಮೊಯ್ಲಿ ಅವರು ಶುಭ ಹಾರೈಸಿದರು.
ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ರವರು ಸಂಘವು ಬೆಳೆದು ಬಂದ ದಾರಿಯ ಬಗ್ಗೆ ಪ್ರಾಸ್ತವಿಕವಾಗಿ ಮಾತನಾಡಿದರು.“ಮಹಿಳಾ ಸಬಲೀಕರಣದ ಉದ್ದೇಶದಿಂದ ಸಂಘದಲ್ಲಿ ಹೆಚ್ಚಿನ ಮಹಿಳಾ ಸಿಬ್ಬಂದಿಗಳಿಗೆ ಉದ್ಯೋಗವಕಾಶವನ್ನು ನೀಡಲಾಗಿದೆ. ಸಂಘವು ಕೇವಲ ಬ್ಯಾಂಕಿಂಗ್ ಮಾತ್ರವಲ್ಲದೆ, ವಿವಿಧ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿದೆ. ಜೊತೆಯಲ್ಲಿ ಸದಸ್ಯರ ಆರೋಗ್ಯದ ಕಾಳಜಿಯಿಂದ ನಿರಂತರವಾಗಿ ವೈದ್ಯಕೀಯ ಶಿಬಿರಗಳನ್ನು ಆಯೋಜಿಸುತ್ತಾ ಬರುತ್ತಿದೆ. ಕರಂಗಲ್ಪಾಡಿ ಶಾಖೆಯ ವಾರ್ಷಿಕೋತ್ಸವದ ಪ್ರಯುಕ್ತ 500 ದಿನಗಳ ಠೇವಣಿಗಳಿಗೆ ವಿಶೇಷ ಬಡ್ಡಿ ದರ ಶೇ. 10 ಹಾಗೂ 1000 ದಿನಗಳ ಠೇವಣಿಗಳಿಗೆ ವಿಶೇಷ ಬಡ್ಡಿ ದರ ಶೇ. 10.50 ವನ್ನು ನೀಡಲಾಗುತ್ತಿದ್ದು, ಚಿನ್ನಾಭರಣ ಸಾಲಗಳಿಗೆ ಪ್ರತಿ ಗ್ರಾಂ ಗೆ ಗರಿಷ್ಟ ಮೌಲ್ಯ ರೂ. 12000/- ರವರೆಗೆ ಯಾವುದೇ ಸೇವಾ ಶುಲ್ಕವಿಲ್ಲದೆ ಸಾಲವನ್ನು ಸದಸ್ಯರಿಗೆ ನೀಡಲಾಗುವುದು” ಎಂದರು.
ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷರಾದ ಶ್ರೀ ನೇಮಿರಾಜ್ ಪಿ, ನಿರ್ದೇಶಕರಾದ ಶ್ರೀ ಜಿ. ಪರಮೇಶ್ವರ ಪೂಜಾರಿ, ಶ್ರೀ ಸೀತಾರಾಮ್ ಎನ್, ಶ್ರೀ ಗೋಪಾಲ್ ಎಮ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸೌಮ್ಯ ವಿಜಯ್ ಮತ್ತಿತರರು ಉಪಸ್ಥಿತರಿದ್ದರು.
ಸಂಘದ ಕರಂಗಲ್ಪಾಡಿ ಶಾಖೆಯ ಸಿಬ್ಬಂದಿಯಾದ ಕುಮಾರಿ ಪ್ರಮೀಳಾ ರವರು ಸ್ವಾಗತಿಸಿ , ಕುಮಾರಿ ಲಾವಣ್ಯ ರವರು ವಂದಿಸಿದರು. ಶಾಖಾಧಿಕಾರಿ ಶ್ರೀಮತಿ ಅನ್ವಿತಾ ರವರು ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು