8:08 AM Saturday9 - May 2026
ಬ್ರೇಕಿಂಗ್ ನ್ಯೂಸ್
ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು

ಇತ್ತೀಚಿನ ಸುದ್ದಿ

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಮಾಣಿ ಶಾಖೆಯ 3ನೇ ವಾರ್ಷಿಕೋತ್ಸವ, ಗ್ರಾಹಕರ ಸಭೆ

06/05/2026, 22:46

ಮಂಗಳೂರು(reporterkarnataka.com): ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಮಾಣಿ ಶಾಖೆಯ ತೃತೀಯ ವಾರ್ಷಿಕೋತ್ಸವ ಹಾಗೂ ಗ್ರಾಹಕರ ಸಭೆಯು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಅವರ ಅಧ್ಯಕ್ಷತೆಯಲ್ಲಿ ಮಾಣಿ ಶಾಖೆಯಲ್ಲಿ ಜರುಗಿತು.
ಸಂಘದ ಗ್ರಾಹಕರುಗಳಾದ ಶ್ರೀ ಕಮಲಾಕ್ಷ, ಶ್ರೀ ಪುಷ್ಪರಾಜ್ ಕೆ, ಶ್ರೀ ಶಿವಣ್ಣ ಎಸ್. ಎಸ್., ಶ್ರೀ ಪ್ರಕಾಶ್, ಶ್ರೀ ಪ್ರದೀಪ್, ಶ್ರೀ ಅಬ್ದುಲ್ ರಝಕ್ ಮತ್ತು ಶ್ರೀ ಅಬ್ದುಲ್ ರಿಯಾಜ್ ಎನ್ ಅವರು ದೀಪ ಪ್ರಜ್ವಲನೆ ಮಾಡುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿಯಾದ ಶ್ರೀಮತಿ ಸೌಮ್ಯ ವಿಜಯ್ ರವರು ಪ್ರಾಸ್ತಾವಿಕವಾಗಿ ಮಾತನಾಡಿ, “ಸಂಘದ ಮಾಣಿ ಶಾಖೆಯಲ್ಲಿ ಗ್ರಾಹಕರ ಸಹಕಾರದಿಂದ ಉತ್ತಮ ರೀತಿಯಲ್ಲಿ ನಿರಖು ಠೇವಣಿ ಹಾಗೂ ಆಭರಣ ಸಾಲವನ್ನು ನೀಡಲಾಗಿದೆ. ಶಾಖೆಯು ಉತ್ತಮ ಲಾಭದಾಯಕವಾಗಿ ಕಾರ್ಯಾಚರಿಸುತ್ತಿದೆ ಎಂದು ತಿಳಿಸಿದರು.
ನಮ್ಮ ಎಲ್ಲಾ ಶಾಖೆಗಳಲ್ಲಿ ಇ-ಮುದ್ರಾಂಕ, ನೆಫ್ಟ್, ಆರ್‌ಟಿಜಿಎಸ್ ಸೇವೆಯು ವ್ಯವಹಾರದ ಸಮಯದಲ್ಲಿ ಲಭ್ಯವಿದ್ದು, ಅದೇ ರೀತಿ ಎಲ್ಲಾ ಕಂಪೆನಿಗಳ ವಿಮಾ ಸೌಲಭ್ಯಗಳು ಲಭ್ಯವಿರುತ್ತದೆ. ಎಲ್ಲಾ ಗ್ರಾಹಕರು ಇದರ ಪ್ರಯೋಜನ ಪಡೆಯಬೇಕೆಂದು ವಿನಂತಿಸಿದರು.
ಸದಸ್ಯರಾದ ಶ್ರೀ ಪುಷ್ಪರಾಜ್ ಕೆ ರವರು ಮಾತನಾಡಿ, “ಸಂಘದ ಸಿಬ್ಬಂದಿಗಳ ಸೇವೆಯೂ ಉತ್ತಮವಾದದ್ದು” ಎಂದು ಮೆಚ್ಚುಗೆ ವ್ಯಕ್ತ ಪಡಿಸಿದರು.
ಸದಸ್ಯರಾದ ಶ್ರೀ ಅಬ್ದುಲ್ ರಿಯಾಜ್ ಎನ್ ರವರು “ಸಂಘವು ಶೀಘ್ರಗತಿಯಲ್ಲಿ ಚಿನ್ನಾಭರಣ ಸಾಲವನ್ನು ನೀಡುತ್ತಿದ್ದು, ಇದರಿಂದ ಗ್ರಾಹಕರಿಗೆ ತುಂಬಾ ಅನುಕೂಲವಾಗುತ್ತಿದೆ” ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ರವರು ಮಾತನಾಡಿ “ಗ್ರಾಹಕರ ಪ್ರೋತ್ಸಾಹದಿಂದ ಸಂಘವು ಉತ್ತಮ ಪ್ರಗತಿಯನ್ನು ಹೊಂದಲು ಸಾಧ್ಯವಾಗಿದೆ. ಸಂಘದ ಸದಸ್ಯರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಚಿನ್ನಾಭರಣ ಸಾಲದ ಸೇವೆಯನ್ನು ಹೆಚ್ಚಾಗಿ ನೀಡುತಿದ್ದು, ಈಗಾಗಲೇ ಸುಮಾರು 200 ಕೋಟಿಗೂ ಮಿಕ್ಕಿ ಹೆಚ್ಚಿನ ಚಿನ್ನಾಭರಣ ಸಾಲವನ್ನು ನೀಡಲಾಗಿದ್ದು, ಗ್ರಾಹಕರ ಸಹಕಾರದಿಂದ ಮಾತ್ರ ಇದು ಸಾಧ್ಯ ಎಂಬುವುದಾಗಿ ತಿಳಿಸಿದರು. ಸಂಸ್ಥೆಯು ಕೇವಲ ಬ್ಯಾಂಕಿ೦ಗ್ ಮಾತ್ರವಲ್ಲದೆ, ಜೀವ ವಿಮೆ, ಆರೋಗ್ಯ ವಿಮೆ ಮತ್ತು ವಾಹನ ವಿಮಾ ಸೌಲಭ್ಯಗಳನ್ನು ಹೊಂದಿರುವುದಾಗಿ ತಿಳಿಸಿದರು. ಆಯ್ದ ರಜಾ ದಿನಗಳಲ್ಲಿ ನಮ್ಮ ಸೇವೆಯು ನಿರಂತರವಾಗಿರುತ್ತದೆ. ಮುಂದಿನ ದಿನಗಳಲ್ಲಿ ಆರೋಗ್ಯ ಶಿಬಿರ ನಡೆಸುವುದಾಗಿ ಹೇಳಿದರು.
ಶಾಖೆಯ ಸಿಬ್ಬಂದಿಯಾದ ಕುಮಾರಿ ದೀಪ್ತಿ ಡಿ.ಎನ್. ರವರು ಸ್ವಾಗತಿಸಿ, ಶಾಖೆಯ ಶಾಖಾಧಿಕಾರಿಯಾದ ಶ್ರೀಮತಿ ಚಿತ್ರಾವತಿ ಎಚ್ ರವರು ಕಾರ್ಯಕ್ರಮ ನಿರೂಪಿಸಿದರು. .

ಇತ್ತೀಚಿನ ಸುದ್ದಿ

ಜಾಹೀರಾತು