11:21 AM Tuesday19 - May 2026
ಬ್ರೇಕಿಂಗ್ ನ್ಯೂಸ್
ಒಂದು ದೇಶ – ಒಂದು ಚುನಾವಣೆ: ವಿವಿಧ ವರ್ಗಗಳ ಅಭಿಪ್ರಾಯ ಆಲಿಸಿದ ಜಂಟಿ… ದುಬಾರೆಯಲ್ಲಿ ಆನೆಗಳ ಸ್ನಾನ ನಾಳೆಯಿಂದ 100 ಅಡಿ ದೂರದಲ್ಲಿ ನಿಂತು ನೋಡಲಷ್ಟೇ ಅವಕಾಶ:… ಕೊಡಗಿನ ತಮ್ಮ ಕಾಫಿ ಎಸ್ಟೇಟ್‌ಗೆ ನುಗ್ಗಿದ ಆನೆಗಳ ಹಿಂಡಿನ ವಿಡಿಯೋ ಹಂಚಿಕೊಂಡ ಉದ್ಯಮಿ… ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿಗೆ ಹೆಚ್ಚುವರಿಯಾಗಿ 20 ಕೋಟಿ: ಮಂಗಳೂರಿನಲ್ಲಿ ಸಚಿವ ಖಂಡ್ರೆ ಚಿಕ್ಕಮಗಳೂರು | ದೇವನಗುಲ್ ಕಾಡಿನೊಳಗೆ ಅನಾಥ ಸ್ಥಿತಿಯಲ್ಲಿ ವೃದ್ಧನ ಶವ ಪತ್ತೆ ಬಳ್ಳಾರಿ | ಆಗಸ್ಟ್ 2ರಂದು ‘ಸ್ಟೀಲ್ ಸಿಟಿ ರನ್ 2026’ 5ನೇ ಆವೃತ್ತಿ:… ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು.

ಇತ್ತೀಚಿನ ಸುದ್ದಿ

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಅಡ್ಯಾರ್ ಶಾಖೆಯ ಚತುರ್ಥ ವಾರ್ಷಿಕೋತ್ಸವ ಹಾಗೂ ಗ್ರಾಹಕರ ಸಭೆ

19/05/2026, 11:21

ಮಂಗಳೂರು(reporterkarnataka.com):ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಅಡ್ಯಾರ್ ಶಾಖೆಯ ಚತುರ್ಥ ವಾರ್ಷಿಕೋತ್ಸವ ಹಾಗೂ ಗ್ರಾಹಕರ ಸಭೆಯು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ರವರ ಅಧ್ಯಕ್ಷತೆಯಲ್ಲಿ ಅಡ್ಯಾರ್ ಶಾಖೆಯಲ್ಲಿ ಜರುಗಿತು.
ಸಂಘದ ಗ್ರಾಹಕರುಗಳಾದ ಶ್ರೀ ಜಯಶೀಲ ಅಡ್ಯಂತಾಯ , ಶ್ರೀ ಉಮೇಶ್ ಶೆಟ್ಟಿ, ಹಾಗೂ ಶ್ರೀ ಹರೀಶ್ ಅಡ್ಯಾರ್ ರವರು ದೀಪ ಪ್ರಜ್ವಲನೆ ಮಾಡುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಸದಸ್ಯರಾದ ಶ್ರೀ ಉಮೇಶ್ ಶೆಟ್ಟಿ ಯವರು ಮಾತನಾಡಿ “ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ರವರ ಮೇಲುಸ್ತುವಾರಿಯಲ್ಲಿ ಗ್ರಾಹಕರಿಗೆ ಉತ್ತಮ ರೀತಿಯಲ್ಲಿ ಸೇವೆಯನ್ನು ನೀಡುತ್ತಾ ಬರುತ್ತಿದೆ” ಎಂದರು.
ಸಂಘದ ಸದಸ್ಯರಾದ ಶ್ರೀ ಜಯಶೀಲ ಅಡ್ಯಂತಾಯ ರವರು ಮಾತನಾಡಿ ” ಸಂಘವು 35 ಶಾಖೆಗಳನ್ನು ಹೊಂದಿದ್ದು ಇನ್ನಷ್ಟೂ ಎತ್ತರಕ್ಕೆ ಬೆಳೆಯಲಿ ಹಾಗೂ ಇನ್ನು ಮುಂದಕ್ಕೆ ಹೆಚ್ಚಿನ ಶಾಖೆಗಳನ್ನು ಹೊಂದಲಿ” ಎಂದು ಶುಭ ಹಾರೈಸಿದರು.
ಸದಸ್ಯರಾದ ಶ್ರೀ ಹರೀಶ್ ಅಡ್ಯಾರ್ ಅವರು ಮಾತನಾಡಿ “ಅಡ್ಯಾರು ಶಾಖೆಯು ಗ್ರಾಹಕರಿಗೆ ಉತ್ತಮ ಶಾಖೆಯಾಗಿದ್ದು, ಉತ್ತಮ ಸೇವೆಯನ್ನು ನೀಡುತ್ತಿದೆ” ಎಂದು ಶ್ಲಾಘಿಸಿದರು.
ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ರವರು ಮಾತನಾಡಿ “ನಮ್ಮ ಸಂಸ್ಥೆ ಯಲ್ಲಿ ಹೆಚ್ಚಿನ ಸಿಬ್ಬಂದಿಗಳು ಮಹಿಳೆಯರಾಗಿದ್ದು, ಗ್ರಾಹಕರ ಸಹಕಾರದಿಂದ ಈ ಸಂಸ್ಥೆಯನ್ನು ಉತ್ತಮ ರೀತಿಯಲ್ಲಿ ನಡೆಸಿಕೊಂಡು ಬರಲು ಸಾಧ್ಯವಾಗಿದೆ. ಸಂಘದ ಸದಸ್ಯರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಚಿನ್ನಾಭರಣ ಸಾಲದ ಸೇವೆಯನ್ನು ಹೆಚ್ಚಾಗಿ ನೀಡುತ್ತಿದೆ. ಸಂಘವು ಕೇವಲ ಬ್ಯಾಂಕಿಂಗ್ ಮಾತ್ರವಲ್ಲದೆ, ವಿವಿಧ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿದೆ. ಜೊತೆಯಲ್ಲಿ ಸದಸ್ಯರ ಆರೋಗ್ಯದ ಕಾಳಜಿಯಿಂದ ನಿರಂತರವಾಗಿ ವೈದ್ಯಕೀಯ ಶಿಬಿರಗಳನ್ನು ಆಯೋಜಿಸುತ್ತಾ ಬರುತ್ತಿದೆ. ಸಂಘದ ಸದಸ್ಯರಿಗೆ ಸ್ಮರ್ಧಾತ್ಮಕ ದರದಲ್ಲಿ ವಿಮಾ ಸೌಲಭ್ಯಗಳನ್ನು ನೀಡುತ್ತಿದೆ. ಅಡ್ಯಾರ್ ಶಾಖೆಯ ಚತುರ್ಥ ವಾರ್ಷಿಕೋತ್ಸವ ಪ್ರಯುಕ್ತ ೫೦೦ ದಿನಗಳ ಠೇವಣಿಗಳಿಗೆ ವಿಶೇಷ ಬಡ್ಡಿ ದರ ಶೇ. 10 ಹಾಗೂ 1000 ದಿನಗಳ ಠೇವಣಿಗಳಿಗೆ ವಿಶೇಷ ಬಡ್ಡಿ ದರ ಶೇ. 10.50 ವನ್ನು ನೀಡಲಾಗುತ್ತಿದ್ದು, ಚಿನ್ನಾಭರಣ ಸಾಲಗಳಿಗೆ ಪ್ರತಿ ಗ್ರಾಂ ಗೆ ಗರಿಷ್ಟ ಮೌಲ್ಯ ರೂ. 12000/- ರವರೆಗೆ ಯಾವುದೇ ಸೇವಾ ಶುಲ್ಕವಿಲ್ಲದೆ ಸಾಲವನ್ನು ಸದಸ್ಯರಿಗೆ ನೀಡಲಾಗುವುದು” ಎಂದರು.
ಕಾರ್ಯಕ್ರಮದಲ್ಲಿ ಸಂಘದ ಉಪಾಧ್ಯಕ್ಷರಾದ ಶ್ರೀ ನೇಮಿರಾಜ್ ಪಿ ನಿರ್ದೇಶಕರಾದ ಶ್ರೀ ಗೋಪಾಲ್ ಎಮ್ ಸಂಘದ ಮುಖ್ಯ ಕಾರ್ಯ ನಿರ್ವಹಣಧಿಕಾರಿ ಶ್ರೀಮತಿ ಸೌಮ್ಯ ವಿಜಯ್ ಉಪಸ್ಥಿತರಿದ್ದರು.
ಶಾಖೆಯ ಸಿಬ್ಬಂದಿಯಾದ ಕುಮಾರಿ ನವ್ಯ ರವರು ಸ್ವಾಗತಿಸಿ, ಶ್ರೀಮತಿ ಅಶ್ವಿನಿ ರವರು ವಂದಿಸಿದರು. ಶಾಖೆಯ ಶಾಖಾಧಿಕಾರಿಯಾದ ಶ್ರೀಮತಿ ಕವಿತಾ ರವರು ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು