12:59 PM Thursday4 - September 2025
ಬ್ರೇಕಿಂಗ್ ನ್ಯೂಸ್
ಮುಳ್ಳಯ್ಯನಗಿರಿ, ದತ್ತಪೀಠ ಮಾರ್ಗದಲ್ಲಿ ರಸ್ತೆ ಕುಸಿತದ ಭೀತಿ: ಸೆ. 14ವರೆಗೆ ಪ್ರವಾಸ ಮುಂದೂಡುವಂತೆ… ದಾವಣಗೆರೆಯಲ್ಲಿ ಎಸ್‌ಎಸ್ ಕೇರ್ ಟ್ರಸ್ಟ್ ವಿದ್ಯಾರ್ಥಿ ವಿಭಾಗದ “ಆರಂಭ”ಕ್ಕೆ ಚಾಲನೆ ಅಕ್ರಮ ಮಾದಕ ವಸ್ತು ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳು ಅರೆಸ್ಟ್: 2… ಸೌಜನ್ಯ ಪ್ರಕರಣ | ಸುಪ್ರೀಂಕೋರ್ಟ್ ಮೊರೆ ಹೋದರೆ ಸಂಪೂರ್ಣ ಬೆಂಬಲ: ಬಿಜೆಪಿ ರಾಜ್ಯಾಧ್ಯಕ್ಷ… ಸರಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ವಿಶೇಷ ಪೌಷ್ಟಿಕ ಆಹಾರ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್… ಕೊಡಗಿನಾದ್ಯoತ ಕೈಲೂ ಮುಹೂರ್ತ ಹಬ್ಬ ಸಂಭ್ರಮ: ಮಾಂಸ ಖರೀದಿ ಜೋರು ಮಗು ಹೊಟ್ಟೆಯಲ್ಲಿರುವಾಗಲೇ ವಾಕ್ ಮತ್ತು ಶ್ರವಣ ಸಮಸ್ಯೆ ಪತ್ತೆ ಹಚ್ಚಲು ಸಾಧ್ಯವಾಗಿರುವುದು ನಿಜಕ್ಕೂ… Kaali river | ಸೂಪಾ ಅಣೆಕಟ್ಟು ಪ್ರದೇಶದಲ್ಲಿ ಭಾರೀ ಮಳೆ: ಪ್ರವಾಹದ ಕುರಿತು… ಸಿದ್ದರಾಮನಹುಂಡಿಯಲ್ಲಿ ಪಿಎಂಶ್ರೀ ಕರ್ನಾಟಕ ಪಬ್ಲಿಕ್ ಶಾಲೆಯ ನೂತನ ಕಟ್ಟಡ ಉದ್ಘಾಟನೆ: ಸಿಎಂ ಚಾಲನೆ ಧರ್ಮಸ್ಥಳ ಯಾತ್ರೆಯಿಂದ ಬಿಜೆಪಿಗೆ ರಾಜಕೀಯ ಲಾಭ ಸಿಗಲಾರದು: ಸಿಎಂ ಸಿದ್ದರಾಮಯ್ಯ

ಇತ್ತೀಚಿನ ಸುದ್ದಿ

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ನೀರುಮಾರ್ಗ ಶಾಖೆ: ಉಚಿತ ವೈದ್ಯಕೀಯ ತಪಾಸಣಾ ಶಿಬಿರ

04/09/2025, 12:28

ಮಂಗಳೂರು(reporterkarnataka.com): ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ನೀರುಮಾರ್ಗ ಶಾಖೆಯ ತೃತೀಯ ವಾರ್ಷಿಕೋತ್ಸವದ ಪ್ರಯುಕ್ತ ಉಚಿತ ವೈದ್ಯಕೀಯ, ನೇತ್ರ ಮತ್ತು ದಂತ ತಪಾಸಣಾ ಶಿಬಿರವು ಲಯನ್ಸ್ ಮತ್ತು ಲಿಯೋ ಕ್ಲಬ್ ಮಂಗಳೂರು, ಶ್ರೀ ಸುಬ್ರಹ್ಮಣ್ಯ ಭಜನಾ ಮಂಡಳಿ ನೀರುಮಾರ್ಗ ಹಾಗೂ ಬ್ರಹ್ಮಶ್ರೀ ನಾರಾಯಣ ಗುರು ಬಿಲ್ಲವ ಸೇವಾ ಸಂಘ ಸುಬ್ರಹ್ಮಣ್ಯ ನಗರ ನೀರುಮಾರ್ಗ ಇದರ ಸಂಯುಕ್ತ ಆಶ್ರಯದಲ್ಲಿ ನೀರುಮಾರ್ಗದ ಶ್ರೀ ಸುಬ್ರಹ್ಮಣ್ಯ ಭಜನಾ ಮಂಡಳಿ ಸಭಾಭವನ ಜರುಗಿತು.
ಲಯನ್ಸ್ ಮತ್ತು ಲಿಯೋ ಕ್ಲಬ್ ಮಂಗಳೂರು ಇದರ ಅಧ್ಯಕ್ಷರಾದ ರಾಜೇಶ್ ಕಾಮತ್ ರವರು ಈ ಶಿಬಿರವನ್ನು ಉದ್ಘಾಟಿಸಿ ಮಾತನಾಡಿ “ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಇಂತಹ ಜನಪರ ಸೇವಾ ಕಾರ್ಯಗಳು ಶ್ಲಾಘನೀಯ. ಈ ಸಹಕಾರಿ ಸಂಘದೊಂದಿಗೆ ಸತತವಾಗಿ ಗುಣಮಟ್ಟದ ಶಿಬಿರಗಳನ್ನು ಹೆಮ್ಮೆಯಿಂದ ಆಯೋಜಿಸುತ್ತಾ ಬರುತ್ತಿದ್ದೇವೆ ಎಂದರು.
ಮಂಗಳೂರಿನ ಮಂಗಳಾ ಆಸ್ಪತ್ರೆ ಮತ್ತು ಮಂಗಳಾ ಕಿಡ್ನಿ ಫೌಂಡೇಶನ್ ನ ಬಿಡಿಒ ಜಯಚಂದ್ರ ನಾಯಕ್ ಮಾತನಾಡಿ, “ಆರೋಗ್ಯ ತಪಾಸಣೆಯು ಇಂದಿನ ಆಹಾರ ಪದ್ಧತಿ ಮತ್ತು ಜೀವನ ಶೈಲಿಯಲ್ಲಿ ಅತ್ಯಗತ್ಯ. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಬ್ಯಾಂಕಿಂಗ್ ಸೇವೆಯ ಜೊತೆಯಲ್ಲಿ ಸಾಮಾಜಿಕ ಕಳಕಳಿಯಿಂದ ಉಚಿತ ವೈದ್ಯಕೀಯ ಶಿಬಿರಗಳನ್ನು ಆಯೋಜಿಸುತ್ತಿರುವ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿ, ಇಂತಹ ಉನ್ನತ ಸಂಸ್ಥೆಯೊಂದಿಗೆ ಶಿಬಿರ ಆಯೋಜಿಸಲು ಅವಕಾಶ ದೊರೆತಿರುವುದು ನಮ್ಮ ಹೆಮ್ಮೆ ಎಂದರು.
ವೆನ್ಲಾಕ್ ಜಿಲ್ಲಾ ಆಸ್ಪತ್ರೆಯ ಸೊಟ್ಟೊ ಕರ್ಣಾಟಕದ ಟ್ರಾಂಸ್ಪೆ÷್ಲAಟ್ ಕೋ-ಆರ್ಡಿನೇಟರ್ ಆಗಿರುವ ಶ್ರೀಮತಿ ಪದ್ಮಾ ರವರು ಅಂಗಾಂಗ ದಾನದ ಬಗ್ಗೆ ಮಾಹಿತಿಯನ್ನು ನೀಡಿ , ಅಂಗಾಂಗ ದಾನವು ಇನ್ನೊಬ್ಬರ ಜೀವವನ್ನು ಉಳಿಸುವುದರಲ್ಲಿ ಎಷ್ಟು ಪ್ರಯೋಜನಕಾರಿ ಅಂಶವಾಗಿದೆ ಎಂದು ತಿಳಿಸಿಕೊಟ್ಟರು.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ರವರು ಮಾತನಾಡಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಪ್ರತೀ ವರ್ಷ ಶಾಖೆಗಳ ವಾರ್ಷಿಕೋತ್ಸವದ ಸಂದರ್ಭದಲ್ಲಿ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ನಿರಂತರವಾಗಿ ಆರೋಗ್ಯ ಶಿಬಿರವನ್ನು ಏರ್ಪಡಿಸುತ್ತಾ ಬಂದಿದ್ದು, ಇದು ಸಂಘದ ೮೮ನೇ ಉಚಿತ ವೈದ್ಯಕೀಯ ಶಿಬಿರವಾಗಿದೆ. ಇದರಿಂದ ಸಾರ್ವಜನಿಕರು ಆರೋಗ್ಯದ ಬಗ್ಗೆ ಕಾಳಜಿ ವಹಿಸುವಲ್ಲಿ ನಮ್ಮ ಸಹಕಾರಿ ಸಂಘವು ಮುಖ್ಯ ಪಾತ್ರ ವಹಿಸಿದೆ. ಸಂಘವು ಏರ್ಪಡಿಸುವ ಕಾರ್ಯಕ್ರಮಗಳಲ್ಲಿ ಸ್ಥಳೀಯ ಸಂಘ ಸಂಸ್ಥೆಗಳು ಸಹಕಾರವನ್ನು ನೀಡಿರುವುದಕ್ಕೆ ಕ್ರತಜ್ನತೆಯನ್ನು ಸಲ್ಲಿಸಿದರು. ಅದೇ ರೀತಿ ಇವತ್ತಿನ ಆರೋಗ್ಯ ಶಿಬಿರವನ್ನು ಏರ್ಪಡಿಸಲು ಸಹಕರಿಸುತ್ತಿರುವ ಸಮುದಾಯ ದಂತ ಆರೋಗ್ಯ ವಿಭಾಗ, ಯೆನೆಪೋಯ ಕಾಲೇಜು ಮತ್ತು ಆಸ್ಪತ್ರೆ, ಹಾಗೂ ಮಂಗಳ ಆಸ್ಪತ್ರೆ ಮತ್ತು ಮಂಗಳ ಕಿಡ್ನಿ ಫೌಂಡೇಶನ್ ಕದ್ರಿ, ಮಂಗಳೂರು ಇದರ ಆಡಳಿತ ವರ್ಗ ಹಾಗೂ ವೈದ್ಯರ ತಂಡದವರಿಗೆ ಕ್ರತಜ್ನತೆಯನ್ನು ಸಲ್ಲಿಸಿದರು.
ಈ ಕಾರ್ಯಕ್ರಮದಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನಿರ್ದೇಶಕರಾದ ರಮಾನಾಥ್ ಸನಿಲ್., ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾದ ಸೌಮ್ಯ ವಿಜಯ್, ಲಯನ್ಸ್ ಮತ್ತು ಲಿಯೊ ಕ್ಲಬ್ ಮಂಗಳೂರು ಇದರ ಕಾರ್ಯದರ್ಶಿ ಪೌಲ್ ಅಕ್ವಿನಾಸ್, ಲಯನ್ಸ್ ಮತ್ತು ಲಿಯೊ ಕ್ಲಬ್ ಮಂಗಳೂರು ಇದರ ವಲಯ ಅಧ್ಯಕ್ಷರಾದ ಶೀನಾ ಪೂಜಾರಿ, ಬ್ರಹ್ಮಶ್ರೀ ನಾರಾಯಣ ಗುರು ಬಿಲ್ಲವ ಸೇವಾ ಸಂಘ (ರಿ.) ಸುಬ್ರಹ್ಮಣ್ಯ ನಗರ ನೀರುಮಾರ್ಗ ಇದರ ಅಧ್ಯಕ್ಷರಾದ ನಾರಾಯಣ ಪೂಜಾರಿ, ಸಮುದಾಯ ದಂತ ಆರೋಗ್ಯ ವಿಭಾಗ, ಯೆನೆಪೋಯ ಕಾಲೇಜು ಮತ್ತು ಆಸ್ಪತ್ರೆ, ದೇರಳಕಟ್ಟೆಯ ಉಪಾನ್ಯಾಸಕರಾದ ಡಾ| ಆಲ್ಫೀಯಾ, ಶ್ರೀ ಸುಬ್ರಹ್ಮಣ್ಯ ಭಜನಾ ಮಂಡಳಿಯ ಸಂಯೋಜಕರಾದ ರಾಜೇಶ್, ಸಮೃದ್ದಿ ಕಟ್ಟಡದ ಮಾಲಕರಾದ ಶ್ರೀಧರ್, ಮತ್ತಿತ್ತರರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಸುಮಾರು ೧೫೦ಕ್ಕೂ ಶಿಬಿರಾರ್ಥಿಗಳಿಗೆ ಆರೋಗ್ಯ ತಪಾಸಣೆ, ದಂತ ಚಿಕಿತ್ಸಾ, ನೇತ್ರ ತಪಾಸಣೆ, ಉಚಿತ ಓಷಧಿ ವಿತರಣೆ ಹಾಗೂ ಕನ್ನಡಕ ವಿತರಣೆಯನ್ನು ಮಾಡಲಾಯಿತು.
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಹಿರಿಯ ಶಾಖಾಧಿಕಾರಿ ಸಚಿನ್ ಸ್ವಾಗತಿಸಿ, ಸಂಘದ ಸಿಬ್ಬಂದಿ ಅಕ್ಷತಾ ಪಿ. ಧನ್ಯವಾದವಿತ್ತರು. ಕಾರ್ಯಕ್ರಮದ ನಿರೂಪಣೆಯನ್ನು ಪ್ರಭಾರ ಶಾಖಾಧಿಕಾರಿಯಾದ ಹರ್ಷಿತಾ ರವರು ನಿರ್ವಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು