7:49 PM Friday16 - January 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.…

ಇತ್ತೀಚಿನ ಸುದ್ದಿ

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಪಕ್ಷಿಕೆರೆ ಶಾಖೆಯ ಗ್ರಾಹಕರ ಸಭೆ

10/07/2025, 11:01

ಮಂಗಳೂರು(reporterkarnataka.com):ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಪಕ್ಷಿಕೆರೆ ಶಾಖೆಯ ಪ್ರಥಮ ವಾರ್ಷಿಕೋತ್ಸವದ ಪ್ರಯುಕ್ತ ಗ್ರಾಹಕರ ಸಭೆಯು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಅಧ್ಯಕ್ಷತೆಯಲ್ಲಿ ಪಕ್ಷಿಕೆರೆ ಶಾಖೆಯಲ್ಲಿ ಜರುಗಿತು.
ಕಾರ್ಯಕ್ರಮವನ್ನು ಸಂಘದ ಸದಸ್ಯರುಗಳಾದ ಶ್ರೀ ಸುಧಾಕರ್ ರಾವ್, ಶ್ರೀ ಯೋಗೀಶ್ ಶೆಟ್ಟಿ, ಶ್ರೀಮತಿ ಕುಶಾಲ ಎಸ್. ಕುಕ್ಯಾನ್, ಶ್ರೀ ಶಿವಪ್ಪ ಶೆಟ್ಟಿ, ಶ್ರೀಮತಿ ಪೂರ್ಣಿಮಾ ಹಾಗೂ ಶ್ರೀಮತಿ ಸಾರಿಕ ದೀಪ ಪ್ರಜ್ವಲನೆ ಮಾಡಿ ಉದ್ಘಾಟಿಸಿದರು.
ಈ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಂಘದ ಸದಸ್ಯರಾದ ಶ್ರೀ ಸುಧಾಕರ್ ರಾವ್ ಅವರು ಮಾತಾನಾಡಿ “ಪಕ್ಷಿಕೆರೆಯಲ್ಲಿ ಶಾಖೆ ತೆರೆದು ಬ್ಯಾಂಕಿಂಗ್, ವಿಮೆ , ಆರೋಗ್ಯ ಕಾರ್ಡ್ ಈ ಎಲ್ಲಾ ವ್ಯವಸ್ಥೆ ಒಂದೇ ಸೂರಿನಲ್ಲಿ ಕಲ್ಪಿಸಿದಕ್ಕೆ ಸಂಘಕ್ಕೆ ಧನ್ಯವಾದಗಳನ್ನು ಸಲ್ಲಿಸಿ, ಸಂಸ್ಥೆಯು ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಪ್ರಗತಿ ಹೊಂದಲಿ” ಎಂದು ಶುಭ ಹಾರೈಸಿದರು.
ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಮಾತನಾಡಿ, “ಸಂಸ್ಥೆಯು ೧೩ ವರ್ಷಗಳಲ್ಲಿ೩೩ ಶಾಖೆಗಳನ್ನು ತೆರೆದು, ರೂ. ೨೦೦೦ ಕೋಟಿಗೂ ಮಿಕ್ಕಿ ವ್ಯವಹಾರ ನಡೆಸಲು ಗ್ರಾಹಕರೇ ಕಾರಣ. ನಿಮ್ಮ ಸಹಕಾರದಿಂದ ನಮ್ಮ ಸಂಸ್ಥೆ ಎತ್ತರಕ್ಕೆ ಬೆಳೆಯಲು ಸಾಧ್ಯವಾಯಿತು. ಕೇವಲ ಬ್ಯಾಂಕಿಂಗ್ ಮಾತ್ರವಲ್ಲದೆ ನಮ್ಮ ಸಂಸ್ಥೆಯು ವಿವಿಧ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಕೊಂಡಿದೆ. ಆರೋಗ್ಯ ಶಿಬಿರವನ್ನು ಸಹ ನಮ್ಮ ಸಂಘ ಹಮ್ಮಿಕೊಂಡು ಬರುತ್ತಿದೆ. ಜೊತೆಗೆ ಸಂಘದ ಸದಸ್ಯರ ಮಕ್ಕಳಿಗೆ ಉತ್ತಮ ಅಂಕ ಬಂದಾಗ ವಿದ್ಯಾರ್ಥಿ ವೇತನ ನೀಡಿ ಅವರನ್ನು ಪ್ರೋತ್ಸಾಹಿಸುತ್ತಾ ಬಂದಿದೆ. ನಮ್ಮ ಸಂಸ್ಥೆಯು ೮೫ ಕ್ಕೂ ಮಿಕ್ಕಿ ಆರೋಗ್ಯ ಶಿಬಿರಗಳನ್ನು ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಆಯೋಜಿಸಿದೆ. ಪಕ್ಷಿಕೆರೆ ಶಾಖೆಯ ಪ್ರಥಮ ವಾರ್ಷಿಕೋತ್ಸವದ ಪ್ರಯುಕ್ತ ೧೦೦೦ ದಿನಗಳ ಠೇವಣಿಗಳಿಗೆ ವಿಶೇಷ ಬಡ್ಡಿ ದರ ಶೇ. ೧೦.೫೦ ವನ್ನು ನೀಡಲಾಗುತ್ತಿದ್ದು, ಚಿನ್ನಾಭರಣ ಸಾಲಗಳಿಗೆ ಪ್ರತಿ ಗ್ರಾಂ ಗೆ ಗರಿಷ್ಟ ಮೌಲ್ಯ ರೂ. ೮,೦೦೦/- ರವರೆಗೆ ಯಾವುದೇ ಸೇವಾ ಶುಲ್ಕವಿಲ್ಲದೆ ಸಾಲವನ್ನು ಸದಸ್ಯರಿಗೆ ನೀಡಲಾಗುತ್ತಿದೆ. ನಮ್ಮ ಎಲ್ಲಾ ಶಾಖೆಗಳಲ್ಲಿ ನೆಫ್ಟ್, ಆರ್‌ಟಿಜಿಎಸ್ ಸೇವೆಯು ವ್ಯವಹಾರದ ಸಮಯದಲ್ಲಿ ಲಭ್ಯವಿದ್ದು, ಅದೇ ರೀತಿ ವಿಮಾ ಪಾಲಿಸಿಗಳಾದ ಎಲ್‌ಐಸಿ, ಕೇರ್, ಇಫ್ಕೋಟೋಕಿಯ, ಜನರಲ್ ಇನ್ಸುರೆನ್ಸ್ ಕಂಪೆನಿ ಮುಂತಾದ ಕಂಪೆನಿಗಳ ವಿಮಾ ಸೌಲಭ್ಯಗಳು ಲಬ್ಯವಿದ್ದು, ಗ್ರಾಹಕರು ಇದರ ಸದುಪಯೋಗ ಪಡೆಯಬೇಕೆಂದು ವಿನಂತಿಸಿದರು.
ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷರಾದ ಶ್ರೀ ನೇಮಿರಾಜ್ ಪಿ., ನಿರ್ದೇಶಕರಾದ ಶ್ರೀ ರಮಾನಾಥ ಸನಿಲ್, ಶ್ರೀ ಬಿ. ಪಿ ದಿವಾಕರ್ ಹಾಗೂ ಮುಖ್ಯ ಕಾರ್ಯನಿರ್ವಹಣಾದಿಕಾರಿ ಶ್ರೀಮತಿ ಸೌಮ್ಯ ವಿಜಯ್ ಮತ್ತಿತರರು ಉಪಸ್ಥಿತರಿದ್ದರು.
ಸಂಘದ ಪಕ್ಷಿಕೆರೆ ಶಾಖೆಯ ಸಿಬ್ಬಂದಿಯಾದ ಕುಮಾರಿ ಅಕ್ಷತಾ ಸ್ವಾಗತಿಸಿದರು. ಕುಮಾರಿ ನಿಖಿತಾ ವಂದಿಸಿದರು. ಶಾಖಾಧಿಕಾರಿ ಶ್ರೀಮತಿ ರಮ್ಯ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು